ಬೇಸಿಗೆ ಬೆಳೆಗೆ ನೀರು ಹರಿಸಲು ತುರ್ತು ಕ್ರಮ ಅಗತ್ಯ

Team Udayavani, Jan 22, 2020, 3:00 AM IST

beasige-bele

ಮಂಡ್ಯ: ಪ್ರಸ್ತುತ ಬೇಸಿಗೆ ಬೆಳೆಗೆ ಕೆಆರ್‌ಎಸ್‌ ಅಣೆಕಟ್ಟೆಯಿಂದ ನೀರು ಹರಿಸಲು ರಾಜ್ಯಸರ್ಕಾರ ತುರ್ತು ಕ್ರಮ ವಹಿಸಬೇಕು ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಒತ್ತಾಯಿಸಿದರು. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯತ್ತಗದಹಳ್ಳಿ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಡಕ್‌ ನಿರ್ಮಾಣಕ್ಕೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಹಾಲಿ ಕೃಷ್ಣರಾಜಸಾಗರ ಜಲಾಶಯದಲ್ಲಿ 118 ಅಡಿ ನೀರಿದೆ.

ಆದರೂ ನಾಲೆಗಳಿಗೆ ನೀರು ಹರಿಸಲು ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆಗಾಗಲೇ ಬೇಸಿಗೆ ಬೆಳೆಗಳಿಗೆ ನೀರು ಹರಿಸುವ ಬಗ್ಗೆ ನಿರ್ಧಾರ ಕೈಗೊಂಡು ವೇಳಾಪಟ್ಟಿ ಪ್ರಕಟಿಸಬೇಕಿತ್ತು. ರೈತರ ಹಿತದ ಬಗ್ಗೆ ಸರ್ಕಾರ ಇದುವರೆಗೂ ಚಿಂತನೆಯನ್ನೇ ನಡೆಸಿಲ್ಲ. ಕೂಡಲೇ ನಾಲೆಗಳಿಗೆ ನೀರು ಹರಿಸುವ ಸಂಬಂಧ ಶಾಸಕರು ಹಾಗೂ ಅಧಿಕಾರಿಗಳ ಸಭೆ ಕರೆದು ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ರೈತರ ಹಿತ ಕಾಪಾಡಿ: ಬೇಸಿಗೆ ಬೆಳೆಗೆ ನೀರು ಹರಿಸುವರೆಂಬ ಆಶಾಭಾವನೆಯಲ್ಲಿ ರೈತರು ಬಿತ್ತನೆಯ ಸಿದ್ಧತೆ ನಡೆಸಿದ್ದಾರೆ. ಈ ವಿಷಯದಲ್ಲಿ ಸರ್ಕಾರದ ಮೌನ ರೈತರನ್ನು ಗೊಂದಲಕ್ಕೆ ಸಿಲುಕಿಸಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ರೈತರ ಬೆಳೆಗಳಿಗೆ ನೀರು ಹರಿಸುವ ದಿಟ್ಟ ನಿರ್ಧಾರ ಕೈಗೊಂಡ ಮಾದರಿಯಲ್ಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ್‌ ನೀರು ಹರಿಸುವ ಕುರಿತು ನಿರ್ಲಕ್ಷ್ಯ ಮಾಡದೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಮೂಲಕ ಜಿಲ್ಲೆಯ ರೈತರ ಹಿತ ಕಾಪಾಡಬೇಕು ಎಂದು ಮನವಿ ಮಾಡಿದರು.

13 ಕೋಟಿ ರೂ.ಗೆ ತಡೆ: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಮಯದಲ್ಲಿ ಬೇಲೂರು ಪಂಚಾಯಿತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 13 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ಟೆಂಡರ್‌ ಪ್ರಕ್ರಿಯೆಯೆಲ್ಲಾ ಮುಗಿದು ಗುತ್ತಿಗೆದಾರರ ಇಎಂಡಿ ಹಣವನ್ನೂ ಪಾವತಿಸಿದ್ದರು. ಸರ್ಕಾರ ಬದಲಾವಣೆಯಾದ ಕೂಡಲೇ ಈ ಅನುದಾನಕ್ಕೆ ತಡೆ ಬಿದ್ದಿತು. ಈ ವಿಷಯವಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡಿದ್ದೇನೆ. ಬಜೆಟ್‌ ನಂತರ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿರುವುದಾಗಿ ತಿಳಿಸಿದರು.

ರೈತರಿಗೆ ಅನುಕೂಲ: ಈ ಹಣ ಬಿಡುಗಡೆಯಾದಲ್ಲಿ ರಸ್ತೆ, ಸೇತುವೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ದೊರೆತು ಈ ಭಾಗದ ಗ್ರಾಮಗಳು ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ. ಪಂಚಾಯಿತಿ ವ್ಯಾಪ್ತಿಯ ನೀರಾವರಿ ಕಾಮಗಾರಿಗೆ 20 ಲಕ್ಷ ರೂ. ಬಿಡುಗಡೆಯಾಗಿದ್ದು, ಅದರಿಂದಲೂ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಯತ್ತಗದಹಳ್ಳಿ ಗ್ರಾಮದ ವಿವಿಧ ನೀರಾವರಿ ಯೋಜನೆಗೆ 2ಕೋಟಿ ಅನುದಾನ ಮಂಜೂರಾಗಿದ್ದು, ಹಂತ ಹಂತವಾಗಿ ಕೈಗೆತ್ತಿಕೊಳ್ಳುವುದಾಗಿ ರವೀಂದ್ರ ಶ್ರೀಕಂಠಯ್ಯ ಭರವಸೆ ನೀಡಿದರು.

ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್‌, ತಾಪಂ ಮಾಜಿ ಅಧ್ಯಕ್ಷ ಸೂನಗಹಳ್ಳಿ ಪ್ರಕಾಶ್‌, ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರ ಜಯರಾಂ, ಸಹಾಯಕ ಅಭಿಯಂತರ ವಿಜಯ ದರ್ಶನ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.