ಮೈಷುಗರ್ ಆರಂಭಿಸಲು ಆಗ್ರಹ
Team Udayavani, Oct 22, 2020, 2:14 PM IST
ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಬುಧವಾರ ಎರಡು ಪ್ರತ್ಯೇಕ ಪ್ರತಿಭಟನೆ ನಡೆಯಿತು. ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿಸ್ವಾಮ್ಯದಲ್ಲೇ ನಡೆಸಬೇಕೆಂದು ಒತ್ತಾಯಿಸಿ, ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ಡೀಸಿಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ಖಾಸಗೀಕರಣಕ್ಕೆ ಪ್ರಯತ್ನ ಸರಿಯಲ್ಲ: ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ನಡೆಸಬೇಕು ಎಂದು ರೈತರು, ಜನಪರ ಹೋರಾಟಗಾರರು ಮತ್ತು ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಹಲವು ಬಾರಿ ಮನವಿ ಸಲ್ಲಿಸಿದರು. ಆದರೂ ಕಾರ್ಖಾನೆ ಆರಂಭಿಸುವ ಬದಲು ಸುಮ್ಮನೆ ಕಾಲಹರಣ ಮಾಡಲಾಗುತ್ತಿದೆ. ಇದಲ್ಲದೆ ಸರ್ಕಾರ ತಾನೇ ನೇಮಿಸಿದ ತಜ್ಞರ ಸಮಿತಿಯ ವರದಿಯನ್ನು ಗಮನಕ್ಕೆ ತೆಗೆದುಕೊಳ್ಳದೇ ಒ ಆ್ಯಂಡ್ ಎಂ ಹೆಸರಿನ ಖಾಸಗೀಕರಣಕ್ಕೆ ಪ್ರಯತ್ನಿಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರವೇ ನಡೆಸಲಿ: ಕಾರ್ಖಾನೆಗೆ ನೂರಾರು ಕೋಟಿ ಅನುದಾನ ನೀಡಲಾಗಿದೆ. ಅದು ದುರುಪಯೋಗವಾಗಿದೆ. ಅದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಕಾರ್ಖಾನೆಯ ಒಡೆತನದಲ್ಲಿದೆ. ಖಾಸಗಿಯವರಿಗೆ ವಹಿಸಿದರೆ ಆಸ್ತಿ ಖಾಸಗಿಯವರ ಪಾಲಾಗಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮೈಷುಗರ್ ಕಾರ್ಖಾನೆಯನ್ನು ಖಾಸಗಿ ಹಾಗೂ ಒ ಅಂಡ್ ಎಂಗೆ ವಹಿಸದೆ ಸರ್ಕಾರವೇ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಮಿತಿ ಸದಸ್ಯರಾದ ಸುನಂದಾ ಜಯರಾಂ, ಮುದ್ದೇಗೌಡ, ಎಂ.ಬಿ.ಶ್ರೀನಿವಾಸ್, ಇಂಡುವಾಳು ಚಂದ್ರಶೇಖರ್,ಕೆ.ಬೋರಯ್ಯ ಇತರರಿದ್ದರು.
ಸೇವಾ ಭದ್ರತೆಗೆ ಆಗ್ರಹ: ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ ತಲಾ10 ಲಕ್ಷ ರೂ., ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಡೀಸಿ ಕಚೇರಿ ಮುಂಭಾಗ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಅತಿಥಿ ಉಪನ್ಯಾಸಕರಿಗೆ ಸಂಕಷ್ಟ: ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಇಲ್ಲದೆ ಕಷ್ಟ ಅನುಭವಿಸುವಂತಾಗಿದೆ. ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ, ಪ್ರಯೋಜನವಾಗಿಲ್ಲ. ಇದೇ ರೀತಿ ನಿರ್ಲಕ್ಷ್ಯ ಮಾಡುತ್ತಿದ್ದರೆ ಮುಂದಿನ ದಿನದಲ್ಲಿ ಸಿಎಂ ಮನೆಗೆ ಹಾಗೂ ಡೀಸಿ, ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಮುಂಭಾಗ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದರು.
ಕಾಲೇಜು ಆರಂಭಿಸಿ: ಹರಿಯಾಣ, ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಮಾದರಿಯಲ್ಲಿ ವೇತನ ಮತ್ತು ಉದ್ಯೋಗದ ಜತೆ ಘೋಷಿಸ ಬೇಕು. ಲಾಕ್‌ಡೌನ್ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಪರಿಹಾರ ನೀಡಬೇಕು. ನ.1ರಿಂದ ಕಾಲೇಜುಗಳನ್ನು ಪುನರಾರಂಭಿಸಬೇಕು. ಸಹಾಯಕ ಪ್ರಾಧ್ಯಾಪಕರ ಅನಗತ್ಯ ನಿಯೋಜನೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಬಿ.ಎಸ್ .ನಾಗರಾಜು, ಸೋಮಶೇಖರ್, ದೇವರಾಜು, ಶಿಲ್ಪಾಶ್ರೀ, ರಂಜಿತ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.