ಗ್ರಾಮ ವಾಸ್ತವ್ಯದ ನಲಿವು ಕಾಣದ ನವಿಲುಮಾರನಹಳ್ಳಿ

ಗ್ರಾಮದಲ್ಲಿ ನೆನಪಿನಲ್ಲಿ ಉಳಿಯುವಂಥ ಕಾಮಗಾರಿ ಆಗಿಲ್ಲ • ಮಾತಿನಲ್ಲಿ ಮಾತ್ರ ಜೆಡಿಎಸ್‌ ಕಾರ್ಯಕರ್ತರ ಅಭಿವೃದ್ಧಿ

Team Udayavani, Jun 12, 2019, 12:54 PM IST

mandya-tdy-1…

ಕೆ.ಆರ್‌.ಪೇಟೆ ತಾಲೂಕಿನ ನವಿಲುಮಾರನಹಳ್ಳಿ ಗ್ರಾಮದಲ್ಲಿ ಪ್ರಮುಖ ಸ್ಥಳದಲ್ಲಿ ಅರಳಿಕಟ್ಟೆ ಮುರಿದು ಬಿದ್ದಿರುವುದು.

ಕೆ.ಆರ್‌.ಪೇಟೆ: ತಾಲೂಕಿನ ಶೀಳನೆರೆ ಹೋಬಳಿ ನವಿಲುಮಾರನಹಳ್ಳಿ ಗ್ರಾಮದಲ್ಲಿ 2006 ನೇ ಸಾಲಿನ ನವೆಂಬರ್‌ 11ರಂದು ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಗ್ರಾಮವಾಸ್ತವ್ಯ ಮಾಡಿದ್ದರು. ಆದರೆ ಗ್ರಾಮದಲ್ಲಿ ಮಾತ್ರ ಹೇಳಿಕೊಳ್ಳವಂತಹ ಅಭಿವೃದ್ಧಿ ಕೆಲಸಗಳು ಕಂಡು ಬರುತ್ತಿಲ್ಲ, ಗ್ರಾಮಸ್ಥರೇ ಹೇಳುವಂತೆ ಗ್ರಾಮವಾಸ್ತವ್ಯದಿಂದ ನವಿಲುಮಾರನಹಳ್ಳಿ ಗ್ರಾಮಕ್ಕೆ ಯಾವುದೇ ನಲಿವುಕಂಡಿಲ್ಲ. ಬದಲಿಗೆ ಮುಖ್ಯಮಂತ್ರಿಗಳು ವಾಸ್ತವ್ಯಇರಲು ಮನೆ ನೀಡಿದ್ದ ವ್ಯಕ್ತಿ ಒಂದು ಲಕ್ಷದ ಇಪ್ಪತ್ತು ಸಾವಿರ ನಷ್ಟವಾಗಿದೆ.

ನಾಡಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಗ್ರಾಮ ವಾಸ್ತವ್ಯಮಾಡುವುದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಹಿಂದೆ ಗ್ರಾಮ ವಾಸ್ತವ್ಯ ಮಾಡಿದ್ದ ಗ್ರಾಮಗಳು ಅಭಿವೃದ್ಧಿ ಕಂಡಿವೆಯಾ ಎಂಬ ಪ್ರಶ್ನೆ ರಾಜ್ಯದ ಜನತೆಯನ್ನು ಕಾಡುತ್ತಿದ್ದು, ಈ ಪ್ರಶ್ನೆಗೆ ಉತ್ತರವನ್ನು ಹುಡಕಲು ನವಿಲುಮಾರನಹಳ್ಳಿ ಗ್ರಾಮಕ್ಕೆ ತೆರಳಿದಾಗಿ ಅಲ್ಲಿ ನೆನಪಿನಲ್ಲಿ ಉಳಿಯುವಂತಹ ಯಾವುದೇ ಅಭಿವೃದ್ಧಿ ಕಂಡು ಬರಲಿಲ್ಲ. ಆದರೆ ಜೆಡಿಎಸ್‌ ಕಾರ್ಯಕರ್ತರು ಮಾತ್ರ ನಮ್ಮ ಗ್ರಾಮ ಸಾಕಷ್ಟು ಅಭಿವೃದ್ಧಿಯಾಗಿತ್ತು ಎಂದು ಮಾತಿನಲ್ಲಿ ಮಾತ್ರ ಹೇಳಿತ್ತಿರುವುದು ಕಂಡುಬಂತು.

ಗ್ರಾಮಕ್ಕೆ ಭೇಟಿ: ಕುಮಾರಸ್ವಾಮಿಯವರು ನವಿಲುಮಾರನಹಳ್ಳಿ ಗ್ರಾಮದಲ್ಲಿ ಹೆಚ್ಚು ಸಮಯ ಗ್ರಾಮವಾಸ್ತವ್ಯ ಮಾಡಿರಲಿಲ್ಲ. ಗ್ರಾಮಕ್ಕೆ ಭೇಟಿ ನೀಡಿದ ನಂತರ ತಮ್ಮಪಕ್ಷದ ಮುಖಂಡರನ್ನು ಬೇಟಿಮಾಡಿದ ನಂತರ ಜ್ವರ ಕಾಣಿಸಿಕೊಂಡಿತು ಎಂದು ರಾತ್ರೋರಾತ್ರಿ ಅಲ್ಲಿಂದ ತೆರಳಿದ್ದಾರೆ. ಆದರೂ ಇದ್ದ ಕೆಲವು ಗಂಟೆಗಳಲ್ಲಿ ಗ್ರಾಮವನ್ನು ಅಭಿವೃದ್ಧಿ ಪಡಿಸುವ ಭರವಸೆಯನ್ನು ನೀಡಿದ್ದರು. ಆದರೆ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಇತರೆ ಅನುದಾನವನ್ನು ಬಳಸಿಕೊಂಡು ಗ್ರಾಮಕ್ಕೆ ಚರಂಡಿ, ರಸ್ತೆ ನಿರ್ಮಾಣ ಮಾಡಲಾಗಿದೆ. ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಚರಂಡಿಗಳು ಸಂಪೂರ್ಣ ಕಿತ್ತುಬಂದಿದ್ದು ಅಸ್ತಿಪಂಜರದಂತೆ ನಿಂತಿವೆ. ಕುಡಿವ ನೀರಿಗೆ ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರಿಗೆ ಯಾವುದೇ ಸಮಸ್ಯೆಗಳಲ್ಲಿ ಎಂಬುದು ಗ್ರಾಮಸ್ಥರ ಮಾತಾಗಿದೆ.

ವಾಸ್ತವ್ಯ ಇದ್ದ ಮನೆ ಮಾಲೀಕನಿಗೆ ನಷ್ಟ: ಕುಮಾರಸ್ವಾಮಿಯವರು ವಾಸ್ತವ್ಯ ಇರಲು ವ್ಯವಸ್ಥೆಮಾಡಿದ್ದ ಮಾಯಿಗೌಡ ರವರ ಮನೆಯನ್ನು ಅಧಿಕಾರಿಗಳು ದುರಸ್ತಿ ಮಾಡಿಸದೆ ಮನೆಯ ಮಾಲೀಕರಿಗೆ ನೀವು ದುರಸ್ತಿ ಮಾಡಿಸಿಕೊಳ್ಳಿ ನಾವು ಆನಂತರ ನಿಮಗೆ ಹಣ ನೀಡುತ್ತೇವೆ ಎಂದು ತಿಳಿಸಿದ್ದರಂತೆ ಇದರ ಜೊತೆಗೆ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಇದ್ದಂತಹ ಗುಂಡಿಗಳನ್ನು ಮುಚ್ಚಿಸಿ ನಾವು ಹಣ ನೀಡುತ್ತೇವೆ ಎಂದು ಭರವಸೆ ನೀಡಿದ್ದರಂತೆ ಅಧಿಕಾರಿಗಳ ಮಾತನ್ನು ನಂಬಿ ಮನೆಯ ಮಾಲೀಕ ಮಾಯಿಗೌಡ ಕೈ ಸಾಲಮಾಡಿ ಒಂದು ಲಕ್ಷದ ಇಪ್ಪತ್ತು ಸಾವಿರ ಹಣವನ್ನು ಖರ್ಚುಮಾಡಿ ಮನೆಯ ದುರಸ್ತಿ ಮಾಡಿಸುವ ಜೊತೆಗೆ ರಸ್ತೆಯಲ್ಲಿ ಇದ್ದಂತಹ ಗುಂಡಿಗಳನ್ನು ಮುಚ್ಚಿಸಿದ್ದರು. ಆದರೆ, ಮಾಯಿಗೌಡರಿಗೆ ಹಣ ಪಾವತಿಮಾಡದೇ ಇರುವುದರಿಂದ ದೊಡ್ಡಮಟ್ಟದ ಹಣವನ್ನು ಹೊಂದಿಸಿಸಾಲ ತೀರಿಸಲಾಗದೆ ತಮ್ಮ ಜಮೀನಿನಲ್ಲಿ ಬೆಳೆದಿದ್ದ ನಾಲ್ಕು ದೊಡ್ಡದೊಡ್ಡ ಬೇವಿನ ಮರಗಳನ್ನು ಮಾರಾಟಮಾಡಿ ಸಾಲ ತೀರಿಸಿದ್ದಾರೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.