ಕೆಸ್ತೂರು, ಸೋಮನಹಳ್ಳಿ  ಜಿಪಂ ವ್ಯಾಪ್ತಿಯ ಕೆರೆಗೆ ನೀರು


Team Udayavani, Jun 11, 2022, 2:45 PM IST

Untitled-1

ಮದ್ದೂರು: ಕೆಸ್ತೂರು, ಸೋಮನಹಳ್ಳಿ ಜಿಪಂ ವ್ಯಾಪ್ತಿಯ ಎಲ್ಲಾ ಕೆರೆಗೆ ನೀರು ತುಂಬಿಸುವ ಕಾಮಗಾರಿ ಯೋಜನೆಯು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲ್ಲಿದ್ದು, ಇದರಿಂದಾಗಿ ಈ ಭಾಗದ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.

ತಾಲೂಕಿನ ಸೋಮನಹಳ್ಳಿ ಜಿಪಂ ವ್ಯಾಪ್ತಿಯ ಕೂಳಗೆರೆ ಗ್ರಾಮದಲ್ಲಿ ನಡೆಯುತ್ತಿರುವ 18 ಕೆರೆಗೆ ನೀರು ತುಂಬಿಸುವ ಕಾಮಗಾರಿ ಯೋಜನೆಯನ್ನು ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, 77 ಕೋಟಿ ರೂ.ನಲ್ಲಿ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು 18 ಕೆರೆಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡುವುದಾಗಿ ವಿವರಿಸಿದರು. ಅಲ್ಲದೆ, ಈ ಭಾಗದ ಕೆರೆ, ಕಟ್ಟೆಗಳು ತುಂಬುವುದ ರಿಂದ ಅಂತರ್ಜಲ ವೃದ್ಧಿಯಾಗಿ ಕೊಳವೆ ಬಾವಿಗಳು ಪುನರ್ಜೀವನಗೊಂಡು ಜನ, ಜಾನುವಾರುಗಳು, ಪ್ರಾಣಿ-ಪಕ್ಷಿಗಳು, ಈ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

5 ಕೋಟಿ ರೂ. ಬಿಡುಗಡೆ: ಕಳೆದ 30 ವರ್ಷಗಳಿಂದಲೂ ಸ್ಥಗಿತಗೊಂಡಿರುವ ಏತ ನೀರಾ ವರಿ ಯೋಜನೆ ಪುನಶ್ಚೇತನಗೊಳಿಸಲು 5 ಕೋಟಿ ರೂ. ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೆಲ ಗ್ರಾಮಗಳಲ್ಲಿರುವ ಏತ ನೀರಾವರಿ ಯೋಜನೆ ಆಧುನೀಕರಣಗೊಳಿಸಿ ಮಳೆಗಾಲದಲ್ಲಿ ಎಲ್ಲಾ ಕೆರೆಗೂ ನೀರು ತುಂಬಿಸಲಾಗುವುದು ಎಂದು ಭರವಸೆ ನೀಡಿದರು.

ಒತ್ತುವರಿ ತೆರವುಗೊಳಿಸಿ: ಕಣ್ವ ಜಲಾಶಯದಿಂದ ತಿಪ್ಪೂರು ಕೆರೆಗೆ ನೀರು ತುಂಬಿಸಲು ನಾಲೆಗಳನ್ನು ಆಧುನೀಕರಣಗೊಳಿಸಿ ಒತ್ತುವರಿ ತೆರವುಗೊಳಿಸುವ ಜತೆಗೆ ಚೆಕ್‌ ಡ್ಯಾಮ್‌ಗಳನ್ನು ನಿರ್ಮಾಣ ಮಾಡಿ, ರುದ್ರಾಕ್ಷಿಪುರದಿಂದ ಕೆರೆಗೆ ನೀರು ತುಂಬಿಸಲು ಕ್ರಮವಹಿಸಿರುವುದಾಗಿ ಹೇಳಿದರು.

ಹಲವು ಹಳ್ಳಿಗೆ ಅನುಕೂಲ: ಈ ಯೋಜನೆಯಿಂದಾಗಿ ತಾಲೂಕಿನ ಗೊಲ್ಲರದೊಡ್ಡಿ, ಅರೆಕಲ್ಲುದೊಡ್ಡಿ, ಹಳ್ಳಿಕೆರೆ, ಕಬ್ಟಾರೆ, ಅರುವನಹಳ್ಳಿ, ಭೀಮನಕೆರೆ, ತಿಪ್ಪೂರು, ರಾಜೇಗೌಡನದೊಡ್ಡಿ ಇನ್ನಿತರೆ ಗ್ರಾಮಗಳಿಗೂ ಅನುಕೂಲವಾಗಲಿದೆ. ಈ ಭಾಗದ ಜನರಿಗೆ ಶುದ್ಧ ನೀರು ಪೂರೈಕೆ ಮಾಡುವ ಉದ್ದೇಶದಿಂದ ಬನ್ನಹಳ್ಳಿ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಅನುಕೂಲ ಕಲ್ಪಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಶಿಕ್ಷಣ, ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು: ತಾವು, ಶಾಸಕರಾದ ಅವಧಿಯಿಂದಲೂ ಶಿಕ್ಷಣ, ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು ನನೆಗುದಿಗೆ ಬಿದ್ದಿರುವ ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅನುಕೂಲ ಕಲ್ಪಿಸಲಾಗಿದೆ. ಜಲ ಜೀವನ್‌ ಯೋಜನೆಯಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕೆಂಬ ಉದ್ದೇಶದಿಂದ ದೇಶಹಳ್ಳಿ ಕೆರೆಯಿಂದ ನೀರು ಪೂರೈಕೆ ಮಾಡಲು ಕ್ರಮವಹಿಸಿದ್ದು, ಈಗಾಗಲೇ ಪೈಪ್‌ಲೈನ್‌, ನೀರು ಶೇಖರಣಾ ಘಟಕಗಳ ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.

ಈ ವೇಳೆ ಟಿಎಪಿಸಿಎಂಎಸ್‌ ನಿರ್ದೇಶಕ ಕೂಳಗೆರೆ ಶೇಖರ್‌, ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಸೋಮಣ್ಣ, ತಿಪ್ಪೂರು ರಾಜೇಶ್‌, ನವೀನ್‌, ಹೊನ್ನೇಗೌಡ, ರಾಮಲಿಂಗಯ್ಯ, ಚಿಕ್ಕತಮ್ಮೇಗೌಡ, ಕೆಂಗಲ್‌ಗೌಡ, ಪಿ.ಹರೀಶ್‌ ಇತರರಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.