![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Jan 2, 2020, 4:27 PM IST
ಶ್ರೀರಂಗಪಟ್ಟಣ: ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ನಗುವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವೆಬ್‌ಸೈಟ್‌ಗೆ ಚಾಲನೆ ನೀಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಾಗವೇಣಿ ಹೇಳಿದರು.
ತಾಲೂಕಿನ ನಗುವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕೇಕ್ ಕತ್ತರಿಸುವ ಮೂಲಕ ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿದ ಅವರು, ಪಂಚಾಯಿತಿಯ ಎಲ್ಲಾ ಮಾಹಿತಿಗಳನ್ನು ಅದರಲ್ಲಿ ಅಳವಡಿಸಲಾಗಿದೆ. ಉಳಿದ ಗ್ರಾಪಂಗಳು ವೆಬ್‌ಸೈಟ್ ಆರಂಭಿಸುವಂತೆ ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.
ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ್ ಮಾತನಾಡಿ, ನಗುವನಹಳ್ಳಿ ಗ್ರಾಮ ಪಂಚಾಯಿತಿ ಎರಡು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದೆ. ಈ ಬಾರಿ ರಾಷ್ಟ್ರ ಮಟ್ಟದ ಪ್ರಶಸ್ತಿ ಸಿಗುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಇದೇ ಸಂಧರ್ಭದಲ್ಲಿ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ನಂದಕುಮಾರ್, ಅಭಿವೃದ್ಧಿ ಅಧಿಕಾರಿ ಯೋಗೇಶ್, ಕಾರ್ಯದರ್ಶಿ ಶಿವಲಿಂಗಯ್ಯ, ಮುಖಂಡರಾದ ಚಲುವರಾಜು, ವೆಂಕಟೇಶ್, ಶಿವಸ್ವಾಮಿ, ಪ್ರಕಾಶ್, ನಾಗೇಂದ್ರ, ಭಾಸ್ಕರ್ ಇತರರಿದ್ದರು
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.