ಮನುಷ್ಯನಾಗಿ ಹುಟ್ಟಿ ಸಾರ್ಥಕತೆ ಬದುಕು ನಡೆಸಿ
Team Udayavani, Sep 11, 2020, 1:45 PM IST
ಮಂಡ್ಯ: ಯಾವುದೇ ವ್ಯಕ್ತಿಯು ಕೆಲ ಸಂದರ್ಭಗಳಲ್ಲಿಖನ್ನತೆ, ಒತ್ತಡಕ್ಕೆ ಮತ್ತು ಹಲವು ಸಮಸ್ಯೆಗಳಿಗೆ ಒಳಗಾದಾಗ ಸೇಹಿತರ ಜೊತೆ, ಮನೋರೋಗ ತಜ್ಞರ ಬಳಿ, ಸಮಾಜದ ಹಿರಿಯರಲ್ಲಿ ಮತ್ತು ಹಿತೈಷಿಗಳ ಜೊತೆ ಮುಕ್ತವಾಗಿ ಮಾತನಾಡಿದರೆ ಹಾಗೂ ಅವಲೋಕನ ಮಾಡಿಕೊಂಡರೆ ಆತ್ಮಹತ್ಯೆಯನ್ನು ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಡಾ.ಎಂವಿ.ವೆಂಕಟೇಶ್ ಹೇಳಿದರು.
ಡೀಸಿ ಕಚೇರಿ ಆವರಣದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮನೋರೋಗ ವಿಭಾಗ, ಸಮುದಾಯ ವೈದ್ಯಕೀಯ ಶಾಸ್ತ್ರ ಮಿಮ್ಸ್, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರಕ್ಷಕ, ಅಬಕಾರಿ ಇಲಾಖೆ, ಮತ್ತು ಸೆಂಟ್ ಥಾಮಸ್ ಮಿಷನ್‌ನಿಂದ ನಡೆದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಇಡೀ ವಿಶ್ವದಲ್ಲಿ ಪ್ರತಿ ವರ್ಷ ಸುಮಾರು 8 ಲಕ್ಷ ಜನರು ತ್ಮಹತ್ಯೆಗೆ ಒಳಗಾಗುತ್ತಿರುವುದು ವಿಷಾದದಸಂಗತಿ. ಅದರಲ್ಲೂ ಬದಲಾದ ವಾತಾವರಣದಲ್ಲಿ ಯುವಕರು ಒಂಟಿತನದಿಂದ ಜೀವನ ಮಾಡುವವರು ಈ ಖನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದರು.
ಆತ್ಮಹತ್ಯೆ ಪ್ರಕರಣ ಕಡಿಮೆ: ಜಿಲ್ಲೆಯಲ್ಲಿ ಒಂದು ಕಾಲದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಕಂಡು ಬರುತ್ತಿದ್ದವು. ಪ್ರಸ್ತುತ ಸರ್ಕಾರ, ಜಿಲ್ಲಾಡಳಿತತೆಗೆದುಕೊಂಡಿರುವ ಕ್ರಮಗಳಿಂದ ಇಂದು ಆತ್ಮಹತ್ಯೆ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ. ಎಲ್ಲರಲ್ಲೂ ಆತ್ಮವಿಶ್ವಾಸ ಹೆಚ್ಚಾಗಿರಲಿ, ಯಾವುದೇ ಕಾರಣಕ್ಕೂ ಆತ್ಮಹತೆ¾ ಮಾಡಿಕೊಳ್ಳಬೇಡಿ ಎಂದರು.ಬದುಕನ್ನು ಸಾರ್ಥಕಗೊಳಿಸಿ: ಆತ್ಮಹತ್ಯೆ ಹಲವಾರುಕಾರಣಗಳಿಂದ ಬರುತ್ತದೆ. ಪ್ರಮುಖವಾಗಿ ಮನುಷ್ಯಸಮಾಜ, ಪರಿಸರದೊಂದಿಗೆ ಬೆರೆತು ಸಂಪರ್ಕವನ್ನುಕಂಡುಕೊಳ್ಳಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತವೆ. ಪುರಂದರದಾಸರು ಹೇಳುವಂತೆ”ಮನುಷ್ಯ ಜನ್ಮ ದೊಡ್ಡದು ಇದನ್ನು ಹಾನಿ ಮಾಡಿಕೊಳ್ಳಬೇಡಿ ಹುಚ್ಚಪ್ಪಗಳಿರಾ’ ಎನ್ನುವಂತೆ, ಮನುಷ್ಯನಾಗಿ ಹುಟ್ಟುವುದೇ ಒಂದು ಸಾರ್ಥಕತೆ. ಆದ್ದರಿಂದ ನಮ್ಮ ಬದುಕನ್ನು ನಾವು ಸಾರ್ಥಕ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ಜುಲ್ಫಿಕಾರ್ ಮಹಮದ್ ಉಲ್ಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರಿ ಪಿ.ವರದ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.