ಗೋಧೂಳಿ ಲಗ್ನದಲ್ಲಿ ಭತ್ತದ ರಾಶಿಗೆ ಪೂಜೆ

Team Udayavani, Dec 8, 2018, 6:10 AM IST

181207kpn79.jpg

ಪಾಂಡವಪುರ: ನಾಲ್ಕು ತಿಂಗಳ ಹಿಂದೆ ತಾವೇ ನಾಟಿ ಮಾಡಿ ಹೋಗಿದ್ದ ಭತ್ತ ಸಮೃದ್ಧವಾಗಿ ಬೆಳೆದು ನಿಂತಿರುವುದನ್ನು ಕಂಡು ಹರ್ಷಚಿತ್ತರಾದ ಕುಮಾರಸ್ವಾಮಿ, ಶುಕ್ರವಾರ ಸೀತಾಪುರ ಗ್ರಾಮದಲ್ಲಿ ಕೊಯ್ಲಿಗೆ ಚಾಲನೆ ನೀಡಿದರು.

ಸೀತಾಪುರದ ಯೋಗೇಂದ್ರಗೆ ಸೇರಿದ್ದ ಒಂದೂವರೆ ಎಕರೆ ಹಾಗೂ ಡಿ.ದೇವರಾಜು ಎಂಬುವರಿಗೆ ಸೇರಿದ ಮೂರು ಎಕರೆ ಜಮೀನಿನಲ್ಲಿ ಭತ್ತದ ಕೊಯ್ಲು ಮಾಡಲಾಯಿತು. ಕೊಯ್ಲಿಗಾಗಿ ಕುಮಾರಸ್ವಾಮಿ ಮತ್ತು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರಿಗೆ ಹಿತ್ತಾಳೆಯ ಕುಡುಗೋಲನ್ನು ವಿಶೇಷವಾಗಿ ಸಿದಟಛಿಪಡಿಸಲಾಗಿತ್ತು. 60 ಗಂಡಾಳುಗಳು ಹಾಗೂ 25 ಹೆಣ್ಣಾಳುಗಳು ಮುಖ್ಯಮಂತ್ರಿಗೆ ಸಾಥ್‌ ನೀಡಿದರು.

ಸಂಜೆ 6 ಗಂಟೆಗೆ ಗದ್ದೆಗಿಳಿದು ಭತ್ತ ಕೊಯ್ಲಿಗೆ ಚಾಲನೆ ನೀಡಿದ ಕುಮಾರಸ್ವಾಮಿ, 6.04 ನಿಮಿಷಕ್ಕೆ ಭತ್ತದ ರಾಶಿಗೆ ಪೂಜೆ ಸಲ್ಲಿಸಿದರು.

ಸಿಎಂ ಅವರಿಂದ ಕೊಯ್ಲು ಪ್ರಕ್ರಿಯೆ ನಡೆಸಿ ರಾಶಿ ಪೂಜೆ ಮಾಡಲು ಹೆಚ್ಚು ಸಮಯವಾಗಲಿದೆ ಎಂಬ ಕಾರಣಕ್ಕಾಗಿ ಬೆಳಗ್ಗೆಯೇ ಯಂತ್ರದ ಮೂಲಕ ಮೂರು ಎಕರೆ ಪ್ರದೇಶದ ಭತ್ತವನ್ನು ಕಟಾವು ಮಾಡಿ, ಒಕ್ಕಣೆ ಮಾಡಲಾಗಿತ್ತು. ಭತ್ತದ ರಾಶಿಯನ್ನು ಸೇವಂತಿಗೆ ಹೂವು, ಬಾಳೆ ದಿಂಡು, ಕಬ್ಬಿನ ತೊಂಡೆಗಳಿಂದ ಸಿಂಗರಿಸಲಾಗಿತ್ತು. ಭತ್ತದ ರಾಶಿಯ ಪಶ್ಚಿಮ ಭಾಗದ ಕೊಳಗ ಮತ್ತು ಬಳ್ಳದಲ್ಲಿ ಭತ್ತವನ್ನು ತುಂಬಿ ಇಡಲಾಗಿತ್ತು. ಅವುಗಳಿಗೂ ಸಿಎಂ ಪೂಜೆ ಸಲ್ಲಿಸಿದರು. ಭತ್ತದ ಕೊಯ್ಲಿಗೆ ಆಗಮಿಸಿದ ಸಿಎಂಗೆ ಸಿಹಿ ಪೊಂಗಲ್‌, ಮೊಸರನ್ನ ತಯಾರಿಸಿ ಅಡಕೆ ತಟ್ಟೆಯಲ್ಲಿ ನೀಡಲಾಯಿತು.

ಅಮಾವಾಸ್ಯೆಯಿಂದ ಅಮಾವಾಸ್ಯೆವರೆಗೆ: ಸಿಎಂ ಭತ್ತ ನಾಟಿ ಮಾಡಿದ ಆ.11 ಅಮಾವಾಸ್ಯೆ ದಿನ. ಈಗ ಭತ್ತ ಕೊಯ್ಲು ಮಾಡಿದ ಡಿ.7 ಕೂಡ ಅಮಾವಾಸ್ಯೆಯೇ ಎನ್ನುವುದು ವಿಶೇಷ. ಆ.11ರ ಅಮಾವಾಸ್ಯೆಯಂದು ಅವರು ಆದಿ ಚುಂಚನಗಿರಿಯಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಪಾಂಡವಪುರದ ಸೀತಾಪುರ ಗ್ರಾಮಕ್ಕೆ ಆಗಮಿಸಿ, ನಾಟಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಡಿ.7ರ ಅಮಾವಾಸ್ಯೆ ದಿನ ಶೃಂಗೇರಿಯ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಭತ್ತ ಕೊಯ್ಲಿಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.