ಪ್ರಚಾರಕ್ಕೆ ರಣಕಹಲೆ ಊದಿದ ಯಶ್‌

Team Udayavani, Apr 3, 2019, 3:00 AM IST

pracharakke

ಮಂಡ್ಯ: ಚುನಾವಣೆಯಲ್ಲಿ ಅಮ್ಮ (ಸುಮಲತಾ)ನನ್ನು ಸೋಲಿಸಲು ಮೂವರು ಸುಮಲತಾ ಅವರಿಂದ ನಾಮಪತ್ರ ಸಲ್ಲಿಸಿ ಜನರನ್ನು ಕನ್‌ಫ್ಯೂಸ್‌ ಮಾಡಲು ಹೊರಟಿದ್ದಾರೆ. ಮಂಡ್ಯ ಜನರು ಕನ್‌ಫ್ಯೂಸ್‌ ಆಗುವಷ್ಟು ದಡ್ಡರಲ್ಲ ಎಂದು ಚಿತ್ರನಟ ಯಶ್‌ ಹೇಳಿದರು.

ರಣಕಹಳೆ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ತಾಲೂಕಿನ ಊರಮಾರಕಸಲಗೆರೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ರಣಕಹಳೆ ಊದುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿ, ನಾವು ಯಾರ ಬಗ್ಗೆಯೂ ಮಾತನಾಡೋದಿಲ್ಲ.

ನಮ್ಮ ಬಗ್ಗೆ ಯಾರು ಎಷ್ಟೇ ಮಾತನಾಡಿದರೂ ಉತ್ತರ ಕೊಡುವುದಿಲ್ಲ. ಮಾತನಾಡುವವರಿಗೆಲ್ಲಾ ಜನರು ಉತ್ತರ ಕೊಡುತ್ತಾರೆ ಎಂದು ಹೇಳಿದರು. ಅಂಬರೀಶ್‌ ತೋರಿಸುತ್ತಿದ್ದ ಪ್ರೀತಿ ನಿಷ್ಕಲ್ಮಶವಾಗಿತ್ತು. ಅವರ ಪ್ರೀತಿ ಎಂದಿಗೂ ನಾಟಕೀಯವಾಗಿರಲಿಲ್ಲ.

ಮಂಡ್ಯ ಎಂದರೆ ಅಂಬರೀಶಣ್ಣಂಗೆ ಬಹಳಾ ಪ್ರೀತಿ. ಮಂಡ್ಯ ಜನರು ಎಲ್ಲೇ ಸಿಕ್ಕರೂ ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ಕಷ್ಟದಲ್ಲಿದ್ದವರಿಗೆ ನೆರವಾಗುತ್ತಿದ್ದರು. ಹೃದಯವಂತಿಕೆಗೆ ಮತ್ತೂಂದು ಹೆಸರೇ ಅಂಬರೀಶ್‌ ಎಂದು ಹೇಳಿದರು.

ಅಮ್ಮನ ಬೆಂಬಲಕ್ಕೆ ನಿಲ್ಲುವೆ: ಕಷ್ಟಕಾಲದಲ್ಲಿ ನೆರವಾದವರನ್ನು ನೆನೆಯೋದು ನಮ್ಮ ವ್ಯಕ್ತಿತ್ವ. ನಾನು ಇಂದು ಏನೇ ಆಗಿದ್ದರೂ ಅದರ ಹಿಂದೆ ಅಂಬರೀಶಣ್ಣನ ಆಶೀರ್ವಾದವಿದೆ. ಆ ಪ್ರೀತಿಯ ಸೆಳೆತವೇ ಇಂದು ಅಮ್ಮನ ಬೆಂಬಲಕ್ಕೆ ನಿಲ್ಲುವಂತೆ ಮಾಡಿದೆ. ನನ್ನನ್ನೂ ಸೇರಿದಂತೆ ಹಲವರಿಗೆ ಅಂಬರೀಶಣ್ಣ ಬೇಕಾದಷ್ಟು ಸಹಾಯ ಮಾಡಿದ್ದಾರೆ. ಅವರ ಮನೆಯ ಮಗನಾಗುವಷ್ಟು ಸಿಕ್ಕಿರುವುದೇ ನನಗೆ ದೊಡ್ಡ ಪುಣ್ಯ ಎಂದರು.

ಅಮ್ಮ ನಿಮ್ಮೂರಿನ ಸೊಸೆ. ಮದುವೆ ಮಾಡಿಕೊಟ್ಟ ಮೇಲೆ ಆ ಹೆಣ್ಣು ಗಂಡನ ಮನೆಯವರಾಗುತ್ತಾರೆ. ಆದರೂ ಕೆಲವರು ಸುಮಲತಾ ಅಲ್ಲಿಯವರು, ಇಲ್ಲಿಯವರು ಎಂದೆಲ್ಲಾ ಮಾತನಾಡುತ್ತಿದ್ದಾರೆ. ಇದು ಸರಿಯೇ ಎನ್ನುವುದನ್ನು ಜನರೇ ತೀರ್ಮಾನ ಮಾಡಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.