![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 1, 2022, 9:30 PM IST
ಮಂಡ್ಯ: ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಹಾಗೂ ಕಾಂಗ್ರೆಸ್‌ನ ತೋಡೋ ಯಾತ್ರೆಗಳು ಯಾವುದೇ ಕಾರಣಕ್ಕೂ ವರ್ಕೌಟ್ ಆಗಲ್ಲ. ಜನ ಬುದ್ಧಿವಂತರಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಜೆಡಿಎಸ್‌ಗೆ ಟಾಂಗ್ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಗಿಮಿಕ್‌ಗಾಗಿ ಈ ತರಹದ ರಥಯಾತ್ರೆಗಳು ನಡೆಯುತ್ತಿವೆ ಅಷ್ಟೇ. ಈ ಯಾತ್ರೆಗಳಿಂದ ಜನರ ಮೇಲೆ ಯಾವುದೇ ಇಂಪ್ಯಾಕ್ಟ್ ಆಗುವುದಿಲ್ಲ. ಕಾಂಗ್ರೆಸ್‌ನ ತೋಡೋ ಯಾತ್ರೆನೂ ಅಷ್ಟೇ ಪ್ರಯೋಜನಕ್ಕೆ ಬರಲ್ಲ ಎಂದರು.
ದೇಶದಲ್ಲಿ ಕಾಂಗ್ರೆಸ್ ಇಲ್ಲ: ದೇಶದಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಫೆನಾಯಿಲ್ ಹಾಕಿ ತೊಳೆದು ಬಿಟ್ಟಿದ್ದಾರೆ. ನರೇಂದ್ರ ಮೋದಿ ಅವರು ಕಾಂಗ್ರೆಸ್ ಮುಕ್ತ ಮಾಡುತ್ತೇನೆಂದು ಹೇಳಿದ್ದರು. ಅದರಂತೆ ದೇಶಾದ್ಯಂತ ಕಾಂಗ್ರೆಸ್ ಮುಕ್ತವಾಗುತ್ತಿದೆ. ರಾಜಸ್ಥಾನದಲ್ಲಿ ಉಳಿದಿದೆ. ಅದೂ ಕೂಡ ಬೀಳುವುದಿತ್ತು. ಸದ್ಯದಲ್ಲಿ ಆ ಸರ್ಕಾರನೂ ಬಿದ್ದು ಹೋಗುತ್ತೆ ಎಂದು ಭವಿಷ್ಯ ಹೇಳಿದರು.
ಮುಂದಿನ ದಿನಗಳಲ್ಲಿ ಮಂಡ್ಯದ 7 ಕ್ಷೇತ್ರಗಳಲ್ಲಿಯೂ ಕಮಲ ಅರಳುತ್ತದೆ ಎಂಬ ವಿಶ್ವಾಸವಿದೆ. ಜಿಲ್ಲೆಯಲ್ಲಿ ಇನ್ನಷ್ಟು ಜನ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.
ಡಿಸೆಂಬರ್‌ಗೆ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ. ಒಳ್ಳೆಯ ನಾಯಕರು ಬಿಜೆಪಿಗೆ ಬರಲಿದ್ದಾರೆ. ಈಗಾಗಲೇ ನಾರಾಯಣಗೌಡರು ಜಿಲ್ಲೆಯಲ್ಲಿ ಖಾತೆ ತೆರೆದಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಮತ್ತಷ್ಟು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾ ಸುವ ಮೂಲಕ ಕಮಲ ಅರಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.