ಲೋಕಸಭೆ ಚುನಾವಣೆಗೆ ಯುವಶಕ್ತಿ ಸಕ್ರಿಯರಾಗಿ
Team Udayavani, Jan 26, 2019, 9:37 AM IST
ಮಂಡ್ಯ: ದೇಶದ ಯುವ ಮತದಾರರಿಂದ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನ್ಸೂರ್ ಅಹಮದ್ ಜಮಾನ್ ತಿಳಿಸಿದರು.
ಶುಕ್ರವಾರ ನಗರದ ಅಂಬೇಡ್ಕರ್ ಭವನದಲ್ಲಿ ಭಾರತ ಚುನಾವಣಾ ಆಯೋಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ 814.15 ಮಿಲಿಯನ್ ಮತದಾರರಿದ್ದಾರೆ.
25ರಿಂದ 35 ವರ್ಷ ವಯಸ್ಸಿನವರು ಶೇ.60ರಷ್ಟು ಮಂದಿ ಇದ್ದಾರೆ. ಅವರು ಮನಸ್ಸು ಮಾಡಿದರೆ ಹೊಸ ಪರಿವರ್ತನೆ ಸೃಷ್ಟಿಸಲು ಸಾಧ್ಯವಿದೆ. ಪ್ರತಿಯೊಬ್ಬ ಮತದಾರ ಮಾಡುವ ಮತಕ್ಕೆ ಮೌಲ್ಯವಿದೆ. ಯಾರೂ ಮತದಾನ ಪ್ರಕ್ರಿಯೆಯಿಂದ ವಿಮುಖ ರಾಗಬಾರದು. ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ದೃಷ್ಟಿಯಿಂದ ಎಲ್ಲರೂ ಮತದಾನ ಮಾಡಬೇಕು ಎಂದು ಹೇಳಿದರು.
ಸಮಗ್ರ ಬೆಳವಣಿಗೆ: ಮತದಾನ ಮಾಡುವ ಸಮಯದಲ್ಲಿ ಉತ್ತಮರನ್ನು ಆಯ್ಕೆ ಮಾಡಬೇಕು. ದೇಶದ ಅಭಿವೃದ್ಧಿ ದೃಷ್ಟಿಯಿಂದ ದೂರದೃಷ್ಟಿಯುಳ್ಳ ನಾಯಕರನ್ನು ಆಯ್ಕೆ ಮಾಡಬೇಕು. ಶಿಕ್ಷಣ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಮಗ್ರ ಬೆಳವಣಿಗೆಯ ಆಲೋಚನೆ ಇರುವವರನ್ನು ಆಯ್ಕೆ ಮಾಡಿದಾಗ ದೇಶ ಪ್ರಗತಿ ಪಥದಲ್ಲಿ ಸಾಗುತ್ತದೆ. ಇದರಲ್ಲಿ ಯುವ ಮತದಾರರ ಪಾತ್ರ ಮಹತ್ವಪೂರ್ಣವಾದುದು ಎಂದು ತಿಳಿಸಿದರು.
ಹೆಸರು ದಾಖಲಿಸಿ: ಚುನಾವಣೆಗೆ ಸ್ಪರ್ಧಿಸುವವರು ಹಣ, ಹೆಂಡ, ಉಡುಗೊರೆಗಳ ಆಮಿಷ ತೋರಿಸ ಬಹುದು. ಅದಕ್ಕೆ ಮರುಳಾಗಬಾರದು. ಅದರಿಂದ ದೇಶದ ಮತ್ತು ನಾಡಿನ ಗೌರವ ಕಳೆಯಬಾರದು. ಜಾತಿ, ಮತ, ಧರ್ಮವನ್ನು ಮೀರಿ ಉತ್ತಮರನ್ನು ಆಯ್ಕೆ ಮಾಡುವುದಕ್ಕೆ ಪ್ರಾಮುಖ್ಯತೆ ನೀಡಬೇಕು. ಇದರಿಂದ ಮತದಾನಕ್ಕೆ ಹೆಚ್ಚಿನ ಮಹತ್ವ ಬರುತ್ತದೆ. ಹದಿನೆಂಟು ವರ್ಷ ತುಂಬಿದ ಯುವಕ-ಯುವತಿಯರು ಚುನಾವಣಾ ಅಧಿಕಾರಿ ಗಳನ್ನು ಸಂಪರ್ಕಿಸಿ ಮತ ಪಟ್ಟಿಯಲ್ಲಿ ಹೆಸರು ದಾಖಲಿಸಿಕೊಳ್ಳಬೇಕು. ಮತಪಟ್ಟಿಯಲ್ಲಿ ಹೆಸರು ದಾಖಲಿಸದೆ ನಿರ್ಲಕ್ಷ್ಯ ವಹಿಸಬಾರದು ಎಂದು ತಿಳಿಸಿದರು.
ಮತದಾನ ಹೆಚ್ಚಾಗಲಿ: ಮಂಡ್ಯ ಜಿಲ್ಲೆಯ ಮತದಾರರು ಅತ್ಯುತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವುದು ಕಳೆದ ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶದಿಂದ ಗೊತ್ತಾಗಿದೆ. ಅದು ಇನ್ನೂ ಹೆಚ್ಚಾಗಬೇಕು. ಪರಿಪೂರ್ಣ ಮತದಾನ ನಡೆಸಿದಾಗ ಪ್ರಜಾಪ್ರಭುತ್ವ ಹೆಚ್ಚು ಬಲಯುತಗೊಳ್ಳುತ್ತದೆ. ಮತಪಟ್ಟಿಗೆ ಅರ್ಜಿ ನೋಂದಾಯಿಸಲು, ವಿಳಾಸ ಬದಲಾವಣೆ, ಮತಪಟ್ಟಿಯಲ್ಲಿ ಹೆಸರು ಕೈಬಿಟ್ಟು ಹೋಗಿದ್ದಲ್ಲಿ ಅದನ್ನು ಮತ್ತೆ ಸೇರ್ಪಡೆ ಮಾಡುವುದಕ್ಕೆ ಎಲ್ಲ ರೀತಿಯ ಅವಕಾಶಗಳನ್ನು ಕಲ್ಪಿಸಿಕೊಡಲಾಗಿದೆ. ಅದನ್ನು ಮತದಾರರು ಸದುಪಯೋಗಪಡಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಸೆಕ್ಟರ್ ಅಧಿಕಾರಿಗಳನ್ನು ಗೌರವಿಸಲಾಯಿತು. ರಾಗರಂಜಿನಿ ಕಲಾತಂಡದವರು ಗಾಯನ, ಕಿರು ನಾಟಕದ ಮೂಲಕ ಮತದಾನದ ಮಹತ್ವ ಸಾರಿದರು. ಜಿಲ್ಲಾಧಿಕಾರಿ ಮಂಜುಶ್ರೀ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಾಲಕ್ಕೀಗೌಡ, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್, ಜಿಲ್ಲಾ ಪಂಚಾಯಿತಿ ಯೋಜನಾಧಿ ಕಾರಿ ಗಣಪತಿ ಸಿ.ನಾಯಕ್, ಉಪ ವಿಭಾಗಾಧಿಕಾರಿ ಬಿ.ರಾಜೇಶ್, ತಹಶೀಲ್ದಾರ್ ಡಿ.ನಾಗೇಶ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.