ಪುರಸಭೆ ವ್ಯಾಪ್ತಿ ವಾರ್ಡ್‌ನಲ್ಲಿ ಅಭಿವೃದ್ಧಿ ಶೂನ್ಯ

ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲೂ ಮೂಲ ಸೌಕರ್ಯ ಎಂಬುದೇ ಮರೀಚಿಕೆ • ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳು

Team Udayavani, May 20, 2019, 2:06 PM IST

mandya-tdy-5..

ಮದ್ದೂರು ಪಟ್ಟಣದ ರಾಮ್‌ರಹೀಂನಗರ ಬಡಾವಣೆಯಲ್ಲಿ ರಾಶಿಗಟ್ಟಲೆ ಬಿದ್ದಿರುವ ಕಸದ ರಾಶಿ.

ಮದ್ದೂರು: ಸ್ಥಳೀಯ ಸಂಸ್ಥೆಯ ಚುನಾವಣೆ ಮುಗಿದು 9 ತಿಂಗಳು ಕಳೆದಿದ್ದರೂ ಪುರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ಆಗದೆ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳಲ್ಲಿ ಕುಡಿಯುವ ನೀರು, ಬೀದಿ ದೀಪ, ಕಸ ವಿಲೇವಾರಿ, ಚರಂಡಿ, ರಸ್ತೆ ನಿರ್ಮಾಣ, ಯುಜಿಡಿ ಸಂಪರ್ಕ ಸೇರಿದಂತೆ ಇನ್ನಿತರೆ ಮೂಲ ಸೌಲಭ್ಯಗಳಿಂದ ವಂಚಿತವಾಗಿ ಸ್ಥಳೀಯ ನಿವಾಸಿಗಳು ಕಚೇರಿಗೆ ಪ್ರತಿನಿತ್ಯ ಅಲೆದಾಡುವ ಸ್ಥಿತಿ ಬಂದೋದಗಿದೆ.

ಸೌಲಭ್ಯಗಳಿಂದ ವಂಚಿತ: ಸುಮಾರು 30 ಸಾವಿರ ಜನಸಂಖ್ಯೆಯುಳ್ಳ ಪಟ್ಟಣ ವ್ಯಾಪ್ತಿಯಲ್ಲಿ ಅಭಿವೃದ್ಧಿ ಮಾತ್ರ ಶೂನ್ಯವಾಗಿದ್ದು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಅಧಿಕಾರಿಗಳೇ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಕಾರಣ ಪಟ್ಟಣ ಅಭಿವೃದ್ಧಿ ಕಾಣದೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ.

ಮೌನಕ್ಕೆ ಶರಣಾಗಿರುವ ಚುನಾಯಿತ ಪ್ರತಿನಿಧಿಗಳು: ನಗರೊತ್ತಾನ, ಮುಖ್ಯಮಂತ್ರಿ ಅನುದಾನ ಸೇರಿದಂತೆ ಕೇಂದ್ರ ಸರಕಾರದಿಂದಲೂ ಸಾಕಷ್ಟು ಅನುದಾನ ಹರಿದುಬಂದರು ಅಭಿವೃದ್ಧಿ ಮಾತ್ರ ಶೂನ್ಯವಾಗಿದ್ದು, ಅಧಿಕಾರದಲ್ಲಿರುವವರು ಕಾಟಾಚಾರಕ್ಕೆ ಕಚೇರಿಗೆ ಬಂದುಹೋಗುವ ಪ್ರವೃತ್ತಿಯನ್ನು ಮೈಗೂಡಿಸಿಕೊಂಡಿದ್ದು ನೂತನವಾಗಿ ಆಯ್ಕೆಯಾಗಿರುವ ಚುನಾಯಿತ ಪ್ರತಿನಿಧಿಗಳು ತಮಗೆ ಅಧಿಕಾರವಿಲ್ಲದ ನೆಪವೊಡ್ಡಿ ಮೌನಕ್ಕೆ ಶರಣಾಗಿದ್ದಾರೆ.

ಕಚೇರಿಗೆ ಅಲೆಯುವ ಜನರು: ಪುರಸಭೆ ಕಚೇರಿಯಲ್ಲಿ ಇ-ಸ್ವತ್ತು, ಕಂದಾಯ, ಖಾತೆ ಬದಲಾವಣೆ, ಜನನ ಮರಣ ಪ್ರಮಾಣ ಪತ್ರ, ತೆರಿಗೆ ಹಣ ಸಂಗ್ರಹ ಸೇರಿದಂತೆ ಇನ್ನಿತರೆ ಸಾರ್ವಜನಿಕ ಕೆಲಸ ಕಾರ್ಯಗಳು ಸಕಾಲದಲ್ಲಿ ಆಗದೆ ಪ್ರತಿನಿತ್ಯ ಸಾರ್ವಜನಿಕರು ಕಚೇರಿಗೆ ಅಲೆದಾಡುತ್ತಿರುವ ದೃಶ್ಯ ಸರ್ವೆ ಸಾಮಾನ್ಯವಾಗಿದೆ.

ಕಲುಷಿತಗೊಳ್ಳುತ್ತಿರುವ ನೀರು: ಪುರಸಭೆ ವ್ಯಾಪ್ತಿಯಲ್ಲಿ ಹಾದುಹೋಗುವ ಶಿಂಷಾ ನದಿ ಹಾಗೂ ಕೆಮ್ಮಣ್ಣು ನಾಲೆಗೆ ಕಳೆದ ಹಲವಾರು ವರ್ಷಗಳಿಂದಲೂ ಯುಜಿಡಿ ಸಂಪರ್ಕದ ತ್ಯಾಜ್ಯ ನೀರು ಹರಿಯುತ್ತಿದ್ದು ಇದರಿಂದಾಗಿ ನೀರು ಕಲುಷಿತಗೊಳ್ಳುವ ಜತೆಗೆ ಈ ವ್ಯಾಪ್ತಿಯ ಜನ ಜಾನುವಾರುಗಳಿಗೆ ಚರ್ಮ ವ್ಯಾದಿ ಕಾಯಿಲೆಗಳು ಕಂಡು ಬರುತ್ತಿದ್ದರೂ ಅಧಿಕಾರಸ್ಥ ರಾಜಕಾರಣಿಗಳು ಇತ್ತ ಗಮನಹರಿಸದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ಪ್ರತಿಭಟನೆ ನಡೆಸಿದರು ಪ್ರಯೋಜನವಾಗಿಲ್ಲ: ಯುಜಿಡಿ ಸಂಪರ್ಕದ ತ್ಯಾಜ್ಯ ನೀರನ್ನು ನಾಲೆಗೆ ಹಾಗೂ ಶಿಂಷಾ ನದಿಗೆ ಹರಿಬಿಡದಂತೆ ಸ್ಥಳೀಯ ಸಂಘ, ಸಂಸ್ಥೆಗಳು ಹಲವಾರು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಇದಕ್ಕೆ ಸೊಪ್ಪು ಹಾಕದ ಅಧಿಕಾರಿಗಳು ಅಶುಚಿತ್ವ ಹಾಗೂ ಅನೈರ್ಮಲ್ಯಕ್ಕೆ ಕಾರಣರಾಗುವ ಮೂಲಕ ತಮ್ಮ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದಾರೆ.

ನೀರಿನ ಸಮಸ್ಯೆ: ಕೆಲ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಒಂದು ವಾರಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿರುವುದರಿಂದ ನೀರಿನ ಹಾಹಾಕಾರ ಉಂಟಾಗಿ ನೂತನವಾಗಿ ಆಯ್ಕೆಯಾಗಿರುವ ಸದಸ್ಯರು ಪ್ರತಿಷ್ಠೆಗಾಗಿ ಟ್ಯಾಂಕರ್‌ ಮೂಲಕ ಆಯಾ ವಾರ್ಡ್‌ಗಳಿಗೆ ನೀರು ಪೂರೈಕೆ ಮಾಡುವ ಮೂಲಕ ನೀರಿನ ಸಮಸ್ಯೆ ನೀಗಿಸಲು ಮುಂದಾಗುತ್ತಿದ್ದಾರಷ್ಟೇ.

ಬೀದಿ ನಾಯಿಗಳ ಹಾವಳಿ ತಪ್ಪಿಸಿ: ಪಟ್ಟಣ ವ್ಯಾಪ್ತಿಯ ಜನಸಂದಣಿ ಪ್ರದೇಶಗಳಲ್ಲೇ ಅಶುಚಿತ್ವ ತಾಂಡವವಾಡುವ ಜತೆಗೆ ಕಸ ವಿಲೇವಾರಿ ಸಮರ್ಪಕವಾಗಿ ಕೈಗೊಳ್ಳದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಮೂಗು ಮುಚ್ಚಿಕೊಂಡೆ ದಿನನಿತ್ಯ ಕಾಲ ದೂಡುವ ಪರಿಸ್ಥಿತಿ ಬಂದೊದಗಿದ್ದು ರಾಶಿಗಟ್ಟಲೆ ಬಿದ್ದಿರುವ ಕಸವನ್ನು ವಿಲೇವಾರಿ ಮಾಡದ ಜತೆಗೆ ರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯ ಪದಾರ್ಥಗಳನ್ನು ಹಾಕುವುದರಿಂದ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ.

ಪಟ್ಟಣದ ಎಚ್.ಕೆ.ವಿ ನಗರ, ಸಿದ್ಧಾರ್ಥನಗರ, ವಿಶ್ವೇಶ್ವರಯ್ಯ ನಗರ, ವಿವೇಕಾನಂದ ನಗರ ಸೇರಿದಂತೆ ಇನ್ನಿತರೆ ವಾರ್ಡ್‌ಗಳಲ್ಲಿ ಯುಜಿಡಿ ಸಂಪರ್ಕದ ತ್ಯಾಜ್ಯ ನೀರು ಮ್ಯಾನ್‌ಹೋಲ್ಗಳಲ್ಲಿ ಉಕ್ಕಿ ಹರಿಯುತ್ತಿದ್ದು ಸ್ಥಳೀಯ ನಿವಾಸಿಗಳು ಸಂಚರಿಸಲು ಹೆಣಗಾಡಬೇಕಾದ ಸ್ಥಿತಿ ಬಂದೊದಗಿದೆ.

ಅಧಿಕಾರಿಗಳ ಮಾತಿಗೆ ಬೆಲೆ ಇಲ್ಲ: ಯುಜಿಡಿ ಸಂಪರ್ಕದ ಯಂತ್ರೋಪಕರಣಗಳು ತುಕ್ಕು ಹಿಡಿದಿದ್ದು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂ. ವೆಚ್ಚದ ಯಂತ್ರಗಳು ಗುಜರಿಯ ಪಾಲಾಗುತ್ತಿದ್ದು ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡುವಂತೆ ಮೇಲಧಿಕಾರಿಗಳ ಆದೇಶವಿದ್ದರೂ ಕವಡೆ ಕಾಸಿನ ಕಿಮ್ಮತ್ತು ಇಲ್ಲದೆ ತ್ಯಾಜ್ಯ ನೀರು ಪ್ರತಿನಿತ್ಯ ಶಿಂಷಾ ಒಡಲನ್ನು ಸೇರುತ್ತಿರುವುದು ದುರಂತವೇ ಸರಿ.

ಅಧಿಕಾರಿಗಳಿಂದ ವಿಳಂಬ ಧೋರಣೆ: ಪುರಸಭೆ ವ್ಯಾಪ್ತಿಯ ಕೆಲ ವಾರ್ಡ್‌ಗಳಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳು, ಚರಂಡಿಯಲ್ಲಿ ಹೂಳು ತುಂಬಿರುವುದು, ರಸ್ತೆ ಬದಿಯಲ್ಲಿ ಆಳೇತ್ತರದ ಗಿಡಗಂಟಿಗಳು ಬೆಳೆದು ನಿಂತು ಪಟ್ಟಣದ ನೈರ್ಮಲ್ಯಕ್ಕೆ ಕಾರಣವಾಗುತ್ತಿದ್ದು ಬೆರಳೆಣಿಕೆಯಷ್ಟಿರುವ ಪೌರ ಕಾರ್ಮಿಕರ ಸಮಸ್ಯೆಯಿಂದಾಗಿ ಅಶುಚಿತ್ವ ತಾಂಡವಾಡುತ್ತಿದ್ದು ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರಿಗೆ ಅಧಿಕಾರಿಗಳು ಸಮರ್ಪಕವಾಗಿ ವೇತನ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ.

ಕ್ರಿಯಾ ಯೋಜನೆ ಸಿದ್ಧಪಡಿಸಬೇಕು: ಪುರಸಭೆಗೆ ನೆಲ ಬಾಡಿಗೆ, ಅಂಗಡಿ ಮಳಿಗೆ, ವಾಹನ ಶುಲ್ಕ, ತೆರಿಗೆ ಹಣ ಸೇರಿದಂತೆ ಇನ್ನಿತರೆ ಮೂಲಗಳಿಂದ ಕೋಟ್ಯಂತರ ರೂ. ಹಣ ಹರಿದುಬರುತ್ತಿದ್ದರೂ ಅಭಿವೃದ್ಧಿ ಒಟ್ಟಾರೆ ಕೆಲ ವಾರ್ಡ್‌ಗಳಲ್ಲಿ ಹತ್ತು ಹಲವು ಸಮಸ್ಯೆಗಳು ತಲೆ ದೋರಿದ್ದು ಅಧಿಕಾರ ನಡೆಸುವ ಅಧಿಕಾರಿಗಳು ಚುನಾಯಿತ ಪ್ರತಿನಿ ಧಿಗಳ ಜತೆ ಚರ್ಚಿಸಿ ಪಟ್ಟಣದ ಅಭಿವೃದ್ಧಿಗೆ ಸಮಗ್ರ ಕ್ರಿಯಾ ಯೋಜನೆ ತಯಾರಿಸುವ ಮೂಲಕ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕಿದೆ.

● ಎಸ್‌.ಪುಟ್ಟಸ್ವಾಮಿ

ಟಾಪ್ ನ್ಯೂಸ್

Bhairathi Ranagal Review:  ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bhairathi Ranagal Review:  ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.