ಮಿಮ್ಸ್‌ನಲ್ಲಿ ಸಿಬ್ಬಂದಿ ಕೊರತೆ, ಸ್ವಚ್ಛತೆ ಮರೀಚಿಕೆ

ಜಿಪಂ ಪ್ರಗತಿ ಪರಿಶೀಲನಾ ಸಭೆ, ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ ಸಂಸದೆ ಸುಮಲತಾ

Team Udayavani, Nov 11, 2020, 4:49 PM IST

ಮಿಮ್ಸ್‌ನಲ್ಲಿ ಸಿಬ್ಬಂದಿ ಕೊರತೆ, ಸ್ವಚ್ಛತೆ ಮರೀಚಿಕೆ

ಮಂಡ್ಯ: ಮಿಮ್ಸ್‌ನಲ್ಲಿ ಸಿಬ್ಬಂದಿ ಕೊರತೆ ಹಾಗೂ ಸ್ವತ್ಛತೆ ಇಲ್ಲದಿರುವುದರ ಬಗ್ಗೆ ದೂರು ಬಂದಿದ್ದು, ಕೂಡಲೇ ಇದರ ಬಗ್ಗೆ ಕ್ರಮ ವಹಿಸಬೇಕು ಎಂದು ಸಂಸದೆ ಸುಮಲತಾ ಅಂಬರೀಷ್‌ ಮಿಮ್ಸ್‌ ನಿರ್ದೇಶಕರಿಗೆ ಸೂಚಿಸಿದರು.

ನಗರದ ಜಿಪಂಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಕೇಂದ್ರ ವಲಯ, ಕೇಂದ್ರ ಪುರಸ್ಕೃತಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಸೇರಿದಂತೆ ನಗರದ ಮಿಮ್ಸ್‌. ನಲ್ಲಿ ವೈದ್ಯರು ಮತ್ತು ನರ್ಸ್‌ಗಳ ಕೊರತೆ ಇದೆ. ಇದರಿಂದ ರೋಗಿಗಳಿಗೆ ಸರಿಯಾಗಿ ಸೇವೆ ಸಿಗುತ್ತಿಲ್ಲ. ಅಲ್ಲದೆ, ಸ್ವಚ್ಛತೆಗೆ ಹೆಚ್ಚು ಒತ್ತು ನೀಡದಿರುವುದರಿಂದ ರೋಗಿಗಳ ಪೋಷ ಕರಿಗೆ ತೊಂದರೆಯಾಗುತ್ತಿದೆ ಎಂಬ ದೂರು ಬಂದಿವೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಇದಕ್ಕೆ ದನಿಗೂಡಿಸಿದ ಸಮಿತಿ ಸದಸ್ಯ ಬೇಲೂರು ಸೋಮಶೇಖರ್‌, ಮಿಮ್ಸ್‌ನಲ್ಲಿ ಸ್ವತ್ಛತೆಗೆ ಹೆಚ್ಚು ಒತ್ತು ನೀಡುತ್ತಿಲ್ಲ. ಅಲ್ಲದೆ, ಹೆರಿಗೆ ವಾರ್ಡ್‌ ನಲ್ಲಿ ಹಾಸಿಗೆಗಳ ಕೊರತೆ ಇರುವುದರಿಂದ ಗರ್ಭೀಣಿ, ಬಾಣಂತಿಯರನ್ನು ನೆಲದಮೇಲೆ ಮಲಗಿಸುತ್ತಾರೆ. ಹೊರಗಡೆ ರೋಗಿಗಳ ಸಂಬಂಧಿಕರಿಗೆ ಮಲಗಲು ಹಾಗೂ ವಿಶ್ರಾಂತಿಗೆ ಸ್ಥಳವಿಲ್ಲ ಎಂದರು.

ಸಮಿತಿ ಸದಸ್ಯೆ ಕೆ.ಪಿ.ಅರುಣಕುಮಾರಿ ಮಾತನಾಡಿ, ಕೂಡಲೇ ಕ್ಯಾಂಟೀನ್‌ ತೆರವುಗೊಳಿಸಿ ರೋಗಿಗಳ ವಿಶ್ರಾಂತಿಗೆ ಅವಕಾಶ ಮಾಡಿಕೊಡಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಮಿಮ್ಸ್‌ ಪ್ರಭಾರ ನಿರ್ದೇಶಕ ಡಾ.ಹರೀಶ್‌, ಸಿಬ್ಬಂದಿ ಕೊರತೆ ಇದ್ದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಖಾಸಗಿಯವರಿಗೆ ನೀಡಿದ್ದ ಕ್ಯಾಂಟೀನ್‌ ಟೆಂಡರ್‌ ಅವಧಿ ಮುಗಿದಿದ್ದರಿಂದ ಖಾಲಿ ಮಾಡಲು ಸೂಚಿಸಲಾಗಿತ್ತು. ಆದರೆ ಅವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರಿಂದ ವಿಳಂಬವಾಗಿದೆ.ಕೋವಿಡ್‌ ಇದ್ದಕಾರಣ ನ್ಯಾಯಾಲಯ ಯಾವುದೇ ಆದೇಶ ನೀಡಿಲ್ಲ. ಹೀಗಾಗಿ ನ.20ರಂದು ನ್ಯಾಯಾಲಯದಲ್ಲಿ ತೀರ್ಮಾನವಾಗಲಿದೆ. ಅದರಂತೆ ಕೂಡಲೇ ಅದನ್ನು ತೆರವುಗೊಳಿಸಿ ರೋಗಿಗಳ ಹಾಗೂ ಅವರ ಕಡೆಯವರಿಗೆ ವಿಶ್ರಾಂತಿ ಅವಕಾಶಕಲ್ಪಿಸಲಾಗುವುದು ಎಂದು ತಿಳಿಸಿದರು.

ಕೋವಿಡ್‌ ಪರೀûಾ ವರದಿ ವಿಳಂಬ: ಜಿಲ್ಲೆಯಲ್ಲಿ ಕೋವಿಡ್‌ ಪರೀಕ್ಷಾ ವರದಿಬರುವುದು ನಿಧಾನವಾಗಿದ್ದು, ಆತಂಕ ಹೆಚ್ಚಾಗುತ್ತಿದೆ. ಯಾವಾಗ ಚಿಕಿತ್ಸೆ ಪಡೆಯಬೇಕು ಎಂಬ ಗೊಂದಲದಲ್ಲಿಯೇ ಕಾಲಕಳೆಯುತ್ತಿರುವ ಬಗ್ಗೆ ದೂರು ಬಂದಿವೆ ಎಂದು ಸಂಸದೆ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್‌.ಪಿ.ಮಂಚೇಗೌಡ, ಆರ್‌ಟಿಪಿಸಿಆರ್‌ ಪರೀಕ್ಷೆ ಲ್ಯಾಬ್‌ ಮೂಲಕ ಮಾಡಬೇಕಾಗಿರುವುದರಿಂದ ಕೊಂಚ ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಚರ್ಚಿತ ವಿಷಯ ಕಾರ್ಯಗತವಾಗಲಿ: ಈ ತ್ರೈಮಾಸಿಕ ಸಭೆಯಲ್ಲಿ ಚರ್ಚಿಸಿದ ವಿಷಯಗಳು ಮುಂದಿನ ಸಭೆಯೊಳಗೆಕಾರ್ಯಗತವಾಗಿ ಜಾರಿಯಲ್ಲಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಬೇಕು. ಕೇವಲ ಸಭೆಗೆ ಮಾತ್ರ ಚರ್ಚಿತವಾಗಬಾರದು. ರೈತರ ಸಹಕಾರ ಪಡೆದು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ ಕಾರ್ಯ ನಿರ್ವಹಿಸಬೇಕು. ಜಿಲ್ಲೆಗೆ ರವಾನೆಯಾಗುತ್ತಿರುವ ರಸಗೊಬ್ಬರಗಳ ವಿಷಯ ದೂರು ಹಿನ್ನೆಲೆಯಲ್ಲಿ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡರ ಜತೆ ಮಾತುಕತೆ ನಡೆಸಲಾಗಿದೆ. ಮೈಸೂರಿನ ರೀತಿಯಲ್ಲಿ ಮಂಡ್ಯ ಜಿಲ್ಲೆಯ ಅನೇಕ ಪ್ರವಾಸಿ ತಾಣಗಳಿಗೆ ಪ್ರಾಮುಖ್ಯತೆ ನೀಡಿ ಐತಿಹಾಸಿಕ ಪ್ರವಾಸಿತಾಣಗಳ ಬಗ್ಗೆ ಡಿಪಿಆರ್‌ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿ ಎಂದು ಸೂಚಿಸಿದರು.

ಅನ್ನಭಾಗ್ಯ ಯೋಜನೆ ಅಕ್ಕಿ ಅಕ್ರಮ ಸಾಗಾಣಿಕೆ ಕುರಿತು ಗಮನಕ್ಕೆ ಬಂದಿದೆ. ಈ ಬಗ್ಗೆ ಕ್ರಮ ವಹಿಸಬೇಕು. ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿಹಲವು ಮರಗಳನ್ನುಕತ್ತರಿಸಿದ್ದು, ಅವುಗಳ ಪುನರ್‌ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌, ಜಿಪಂ ಸಿಇಒ ಎಸ್‌.ಎಂ.ಜುಲ್ಫಿಕರ್‌ವುಲ್ಲಾ, ಜಿಪಂ ಅಧ್ಯಕ್ಷೆ ನಾಗರತ್ನಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.

ಶಾಸಕರು ಗಲಾಟೆ ಮಾಡ್ತಾರೆ, ನಾನೇನು ಮಾಡಲಿ… :  ಕೇಂದ್ರ ವಲಯದ ಪ್ರಧಾನಮಂತ್ರಿ ಗ್ರಾಮ ಸಡಕ್‌  ಯೋಜನೆ ಕಾಮಗಾರಿ ಪ್ರಾರಂಭಕ್ಕೆ ಶಿಷ್ಟಾಚಾರ ಉಲ್ಲಂಘಿಸಲಾಗುತ್ತಿದೆ.ಕಾಮಗಾರಿಗಳಿಗೆ ಶಂಕುಸ್ಥಾಪನೆ, ಗುದ್ದಲಿ ಪೂಜೆಯನ್ನು ಶಾಸಕರೇ ಮಾಡುತ್ತಿದ್ದಾರೆ ಎಂದು ಸಂಸದೆ ಸುಮಲತಾ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ ಅಧಿಕಾರಿ, ಶಿಷ್ಟಾಚಾರ ಉಲ್ಲಂಘಿಸುತ್ತಿಲ್ಲ. ಶಾಸಕರೇ ನಮಗೆ ಗದರಿಸುತ್ತಾರೆ. ಮತ್ತೆ ನಮ್ಮನ್ನೇ ಪ್ರಶ್ನಿಸುತ್ತಾರೆ. ಇದರಿಂದ ನಾನು ಏನು ಮಾಡುವುದು ಎಂದು ತಿಳಿಯುತ್ತಿಲ್ಲ ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಮಿತಿ ಸದಸ್ಯ ಬೇಲೂರು ಸೋಮಶೇಖರ್‌, ಯೋಜನೆಯಲ್ಲಿಯೇ ಕೇಂದ್ರ ಪುರಸ್ಕೃತ ಎಂದು ಇದೆ. ಆದರೆ ಅಧಿಕಾರಿಗಳು ಬಾರದೆ ಇದ್ದರೂ ಶಾಸಕರೇ ಹೋಗಿ ಪೂಜೆ ಮಾಡುತ್ತಿದ್ದಾರೆ. ಶಿಷ್ಟಾಚಾರದ ಪ್ರಕಾರ ಸಂಸದರ ಹೆಸರು ಹಾಕಬೇಕು. ಅಧಿಕಾರಿಗಳು ನಿಯಮದಂತೆಕೆಲಸ ಮಾಡಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಜುಲ್ಫಿಕರ್‌ವುಲ್ಲಾ, ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದರು.

ಅಕ್ರಮ ಬ್ಲಾಸ್ಟಿಂಗ್‌ ಮಾಡಿದರೆ 5 ಕೋಟಿ ರೂ. ದಂಡ ವಿಧಿಸಲು ಸೂಚನೆ :  ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಹೊಣೆ ಯಾರು..? ಜನ ಕೇಳುತ್ತಿರುವ ಪ್ರಶ್ನೆಗೆ ನಾನು ಏನೆಂದು ಉತ್ತರಿಸಲಿ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ

ಹಿರಿಯ ಭೂವಿಜ್ಞಾನಿ ಪುಷ್ಪಾ ಅವರನ್ನು ಸಂಸದೆ ಸುಮಲತಾ ಅಂಬರೀಷ್‌ ಪ್ರಶ್ನಿಸಿದರು. ಪ್ರತಿ ಸಭೆಯಲ್ಲೂಈ ವಿಚಾರ ಚರ್ಚೆಗೆ ಬರುತ್ತಿದೆ. ಆದರೆ, ಇದುವರೆಗೂ ಕ್ರಮ ಕೈಗೊಂಡಿರುವ ಬಗ್ಗೆ ಯಾವುದೇ ಆಧಾರವಿಲ್ಲ.ಜನ ನೀಡುತ್ತಿರುವ ಸಾಕ್ಷಿ ಸಮೇತ ಆಧಾರ ನನ್ನಲ್ಲಿವೆ.ನೀವು ಏನು ಮಾಡುತ್ತಿದ್ದೀರಿ? ಎಂದು ಎಂದರು.

ನಮ್ಮ ವ್ಯಾಪ್ತಿಗೆಬರಲ್ಲವೆಂದರು : ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪುಷ್ಪಾ ಮಾತನಾಡಿ,ಕೃಷ್ಣರಾಜಸಾಗರ ಹಾಗೂ ಶ್ರೀರಂಗಪಟ್ಟಣ ದಲ್ಲಿ ಚೆಕ್‌ಪೋಸ್ಟ್‌ ಮಾಡಲಾಗಿದೆ. ಆದರೆ ಅಕ್ರಮವಾಗಿ ಬ್ಲಾಸ್ಟಿಂಗ್‌ ಮಾಡುತ್ತಿರುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಇದು ಪೊಲೀಸ್‌ ಇಲಾಖೆಗೆ ಸಂಬಂಧಪಟ್ಟ ವಿಚಾರ. ಹೀಗಾಗಿ ಅಕ್ರಮಗಳು ಹೆಚ್ಚಾಗಿವೆ ಎಂದು ಹೇಳಿದರು. ಇದಕ್ಕೆ ದನಿಗೂಡಿಸಿದ ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ, ನಮ್ಮ ವ್ಯಾಪ್ತಿಯಲ್ಲಿ ಕ್ರಮ ಕೈಗೊಂಡು ನಿಯಂತ್ರಿಸಲಾಗಿದೆ ಎಂದರು.

5 ಕೋಟಿ ರೂ. ದಂಡ ವಿಧಿಸಲು ಸೂಚನೆ: ಸಭೆಗೆ ಗೈರು ಹಾಜರಾಗಿದ್ದ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ ಸಭೆಗೆ ಬರುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ಅಕ್ರಮವಾಗಿ ಬ್ಲಾಸ್ಟಿಂಗ್‌ ಮಾಡುತ್ತಿರುವವರ ವಿರುದ್ಧ 5 ಕೋಟಿ ರೂ. ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿ, ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚಿಸಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ರಾತ್ರಿ ವೇಳೆ ಗಸ್ತುಹಾಗೂ ಗೌಪ್ಯ ಕಾರ್ಯಾಚರಣೆ ಮಾಡಬೇಕು. ಜತೆಗೆ ಚೆಕ್‌ಪೋಸ್ಟ್‌ ಗಳಲ್ಲಿ ದಕ್ಷ ಅಧಿಕಾರಿಗಳನ್ನು ನೇಮಕ ಮಾಡುವಂತೆ ಜಿಲ್ಲಾಧಿಕಾರಿಗೆ ಸಂಸದೆ ಸೂಚಿಸಿದರು.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.