ಮೀರಾ ವಿರುದ್ಧ ದಲಿತ ಸಂಘಟನೆಗಳ ಕಿಡಿ
Team Udayavani, Feb 7, 2021, 2:54 PM IST
ಭಾರತೀನಗರ: ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮದ್ದೂರು-ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಹೊರಟ ಪ್ರತಿಭಟನಾನಿರತರು ವಕೀಲೆ ಮೀರಾ ರಾಘವೇಂದ್ರ ಅವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಪಂ ಮಾಜಿ ಸದಸ್ಯ ಎಚ್. ಹೊಂಬಯ್ಯ ಮಾತನಾಡಿ, ಸಾಹಿತಿ ಪೊ.ಭಗವಾನ್ ಮುಖಕ್ಕೆ ಬಳಿದ ಮಸಿ ಯನ್ನು ಸೋಪು ಹಾಕಿ ತೊಳೆಯಬಹುದು. ಆದರೆ ಮೀರಾ ರಾಘವೇಂದ್ರ ತಮ್ಮ ವ್ಯಕ್ತಿತ್ವಕ್ಕೆ ಬಳಿದುಕೊಂಡ ಮಸಿ ಎಂದಿಗೂ ಅಳಿಸಲಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೈಭೀಮ್ ದಲಿತ ಜಾಗೃತಿ ಸಮಿತಿ ಅಧ್ಯಕ್ಷ ಚಿಕ್ಕರಸಿನಕೆರೆ ಶಿವಲಿಂಗಯ್ಯ ಮಾತನಾಡಿ, ವಕೀಲೆ ಮೀರಾ ರಾಘವೇಂದ್ರ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಿ ನ್ಯಾಯದೇವತೆ ಮುಖಕ್ಕೆ ಮಸಿ ಬಳೆದಿದ್ದಾರೆ. ಇದೊಂದು ಅಮಾನವೀಯ ಕೃತ್ಯ ಎಂದು ಕಿಡಿಕಾರಿದ್ದಾರೆ.
ಪ್ರಚಾರದ àಳಿನಿಂದಾಗಿ ಮುಂದಾಲೋಚನೆ ಮಾಡಿ ಪೊ›.ಭಗವಾನ್ ರವರ ಮುಖಕ್ಕೆ ಮಸಿ ಬಳಿದು ವಕೀಲೆ ಮೀರಾ ರಾಘವೇಂದ್ರ ಅನಾಗರೀಕರಾಗಿ ನಡೆದುಕೊಂಡು ಅಸಂವಿಧಾನಿಕ ಹಾದಿ ಹಿಡಿದ್ದಾರೆ ಎಂದರು.
ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಕರಡಕೆರೆ ಯೋಗೇಶ್ ಮಾತನಾಡಿ, ದೇವರೆಂದು ಪೂಜಿಸುವ ನ್ಯಾಯಾಲಯದ ಆವರಣದಲ್ಲಿ ಇಂತಹ ಅವಮಾನಕರ ಘಟನೆ ನಡೆದಿದೆ. ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದಿರುವುದು ಖಂಡನೀಯ ವಾಗಿದ್ದು ವಕೀಲೆ ಮೀರಾ ರಾಘವೇಂದ್ರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಇದನ್ನೂ ಓದಿ :ತೈಲ ಬೆಲೆ ಹೆಚ್ಚಳಕ್ಕೆ ಕಡಿವಾಣ ಹಾಕಿ
ಬಳಿಕ, ಪ್ರತಿಭಟನಾನಿರತರು ನಂತರಉಪತಹಶೀಲ್ದಾರ್ ಬಸವಲಿಂಗೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಗ್ರಾಪಂ ಮಾಜಿ ಅಧ್ಯಕ್ಷ ಹುಲಿಗೆರೆಪುರ ಮಹದೇವು, ಗುಡಿಗೆರೆ ಬಸವರಾಜು, ಅಂಬರೀಶ್, ನಾಗಭೂಷಣ್, ಕೆ.ಶೆಟ್ಟಹಳ್ಳಿ ಬೊಮ್ಮಲಿಂಗಯ್ಯ, ಅಣ್ಣೂರು ರಾಮಣ್ಣ, ಕೊಪ್ಪ ಸುಂದ್ರೇಶ್, ಕೆಂಪರಾಜು, ನಂಜಪ್ಪ, ಮಣಿಗೆರೆ ಕಬ್ಟಾಳಯ್ಯ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
Lakshmi Hebbalkar: “ಎಪಿಎಲ್, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.