ಹೋರಾಟದಲ್ಲಿ ಇತರೆ ಜಿಲ್ಲೆ ರೈತರೂ ಭಾಗಿ

6ನೇ ದಿನವೂ ಮುಂದುವರಿದ ರೈತರ ಧರಣಿ ಸತ್ಯಾಗ್ರಹ • ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ರೈತರ ಧರಣಿ, ಆಕ್ರೋಶ

Team Udayavani, Jun 27, 2019, 3:31 PM IST

27-June-36

ಮಂಡ್ಯ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂದೆ ರೈತ ಸಂಘದ ಕಾರ್ಯಕರ್ತರ ಅಹೋರಾತ್ರಿ ಧರಣಿ ಸತ್ಯಾಗ್ರಹ.

ಮಂಡ್ಯ: ಕೃಷ್ಣರಾಜಸಾಗರ ಮತ್ತು ಹೇಮಾವತಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬೆಳೆದು ನಿಂತ ಬೆಳೆಗಳಿಗೆ ನೀರೊದಗಿಸುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 6ನೇ ದಿನವಾದ ಬುಧವಾರವೂ ಮುಂದುವರಿಯಿತು.

ನಗರದ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಕಳೆದ ಐದು ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರಿದಿದೆ. ನಾಲೆಗಳಲ್ಲಿ ನೀರು ಹರಿಸುವವರೆಗೂ ಧರಣಿ ಹಿಂಪಡೆಯಲ್ಲವೆಂದು ರೈತರು ಪಟ್ಟು ಸಡಿಲಿಸುತ್ತಿಲ್ಲ.

ಬೆಳೆಗೆ ನೀರು ಹರಿಸಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಳೆಯಾದರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶ ರೈತರ ಆತಂಕ ದೂರ ಮಾಡಿದೆಯಾದರೂ, ಬೆಳೆದಿರುವ ಬೆಳೆಗಳಿಗೆ ಇನ್ನೊಂದು ಕಟ್ಟು ನೀರು ಹರಿಸಿದರೆ ಸಂಪೂರ್ಣ ಬೆಳೆಗಳು ರೈತರ ಕೈಗೆ ಸಿಗುತ್ತವೆ ಎಂಬುದು ರೈತರ ಹೋರಾಟವಾಗಿದೆ. ಬೆಳೆಗಳ ರಕ್ಷಣೆಗೆ ನಾಲೆಗಳಿಗೆ ನೀರು ಹರಿಸುವ ಕುರಿತಂತೆ ಯಾವುದೇ ಆದೇಶ ನೀಡದೆ ರೈತರನ್ನು ಕತ್ತಲಲ್ಲಿಟ್ಟಿರುವುದು ರೈತರು ಆಕ್ರೋಶಕ್ಕೆ ಕಾರಣವಾಗಿದೆ.

ರೈತ ನಾಯಕರ ಬೆಂಬಲ: ರೈತ ನಾಯಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ನಡೆಸುತ್ತಿರುವ ಆಹೋರಾತ್ರಿ ಧರಣಿಗೆ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಅರಸು, ಮೈಸೂರು ಜಿಲ್ಲೆ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ತಾಲೂಕು ಅಧ್ಯಕ್ಷ ಮರಂಕಯ್ಯ, ಜಿಲ್ಲಾ ರೈತ ಸಂಘದ ಬನ್ನೂರು ಹುಚ್ಚೇಗೌಡ ಮತ್ತಿತರರರು ಪ್ರತಿಭಟನೆಗೆ ಬೆಂಬಲ ನೀಡಿ ಬುಧವಾರ ಧರಣಿಯಲ್ಲಿ ಭಾಗವಹಿಸಿದ್ದರು.

ಜಿಲ್ಲೆಯಲ್ಲಿ ಒಣಗುತ್ತಿರುವ ಬೆಳೆಗಳಿಗೆ ಹಾಗೂ ಜನ ಜಾನುವಾರುಗಳಿಗೆ ಕುಡಿಯಲು ನೀರು ಹರಿಸಬೇಕು ಎಂಬುದು ಪ್ರತಿಭಟನಾನಿರತರ ಒಕ್ಕೊರೊಲ ಧ್ವನಿಯಾಗಿದೆ. ಸರ್ಕಾರ ರೈತರ ಬೆಳೆ ಉಳಿಸಿಕೊಳ್ಳಲು ಹಾಗೂ ಜನ ಜಾನುವಾರುಗಳಿಗೆ ಕುಡಿವ ನೀರು ಪೂರೈಸಲು ಹೇಮಾವತಿ ಹಾಗೂ ಕೆಆರ್‌ಎಸ್‌ ವ್ಯಾಪ್ತಿಯ ಎಲ್ಲಾ ನಾಲೆಗಳಿಗೆ ನೀರು ಹರಿಸುವವರೆಗೂ ಪ್ರತಿಭಟನೆ ಹಿಂಪಡೆಯಲ್ಲವೆಂದರು.

ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸುವ ಚಿಂತನೆ ನಡೆಸದಿರುವುದು ರೈತರ ಮನದಲ್ಲಿದ್ದ ದುಗಡ ದೂರ ಮಾಡಿದೆ. ಜಿಲ್ಲೆಯಲ್ಲಿ 60 ಸಾವಿರ ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ. ಅದು ಒಣಗುವ ಸ್ಥಿತಿ ತಲುಪಿದೆ. ಅದರ ಉಳಿವಿಗೆ ಜಿಲ್ಲೆ ನಾಲೆಗಳಿಗೆ ನೀರು ಹರಿಸುವ ಮೂಲಕ ಜನ-ಜಾನುವಾರು ಉಳಿಸಬೇಕು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್‌, ರಾಮಕೃಷ್ಣಯ್ಯ, ಪಣಕನಹಳ್ಳಿ ಸ್ವಾಮಿ, ಯರಹಳ್ಳಿ ಬೊಮ್ಮೇಗೌಡ, ಲತಾ, ಕೋಕಿಲಾ, ಮಾದೇ ಗೌಡ, ಚಂದ್ರು ಮತ್ತಿತರರಿದ್ದರು

ಟಾಪ್ ನ್ಯೂಸ್

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.