ಕೃಷಿ ಮೇಲೆ ಮಳೆ ಅನಿಶ್ಚಿತತೆಯ ಕಾರ್ಮೋಡ
ಮುಂಗಾರು ಮುನಿಸು: ಕಂಗೆಟ್ಟ ರೈತರ ಬದುಕು • ಮಳೆಯಾಗದಿದ್ದರೆ ಬೆಳೆ ಬೆಳೆಯುವುದು ಕನಸು
Team Udayavani, Jul 18, 2019, 3:21 PM IST
ರೈತರು ಬಿತ್ತನೆಗಾಗಿ ಸಿದ್ಧಪಡಿಸಿರುವ ಭೂಮಿ.
ಮಂಡ್ಯ: ನಾಲ್ಕು ವರ್ಷ ಜಿಲ್ಲೆಯಲ್ಲಿ ತಳವೂರಿದ್ದ ಬರಗಾಲ ಕಳೆದ ವರ್ಷ ವರುಣನ ಕೃಪೆಯಿಂದ ಮಾಯವಾಗಿತ್ತು. ಮತ್ತೆ ಈ ವರ್ಷ ಮಳೆಯ ಅನಿಶ್ಚಿತತೆ ಎಲ್ಲರನ್ನೂ ಕಾಡುತ್ತಿದೆ. ಬರಗಾಲದ ಛಾಯೆ ನಿಧಾನವಾಗಿ ಜಿಲ್ಲೆಯನ್ನು ಆವರಿಸಿಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೆ ಭೀಕರ ಪರಿಸ್ಥಿತಿ ಸೃಷ್ಟಿಯಾಗುವ ಆತಂಕ ಎಲ್ಲರನ್ನೂ ಕಾಡುತ್ತಿದೆ.
ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆಯ ಕೊರತೆಯಿಂದ ಕಬ್ಬು ಬೆಳೆ ಬಹುತೇಕ ಹಾನಿಗೊಳಗಾಗಿದೆ. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಹಿನ್ನಡೆಯಾಗಿದೆ. ಬಿತ್ತನೆ ಕಾರ್ಯವೂ ಕುಂಠಿತಗೊಂಡಿದೆ. ಭತ್ತದ ಬಿತ್ತನೆ ಒಂದು ಹೆಕ್ಟೇರ್ ಪ್ರದೇಶದಲ್ಲೂ ನಡೆಯದೆ ಶೂನ್ಯ ಆವರಿಸಿದೆ. ಸೂಚನೆ ನೀಡಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ 96 ಅಡಿ ನೀರು ಸಂಗ್ರಹವಾದರಷ್ಟೇ ನಾಲೆಗಳ ಮೂಲಕ ಕೃಷಿಗೆ ನೀರು ಹರಿಸಲು ಸಾಧ್ಯ ಎಂಬುದು ನೀರಾವರಿ ಇಲಾಖೆ ಅಧಿಕಾರಿಗಳ ಮಾತಾಗಿದೆ.
ವಾರದ ಕೊನೆಯಲ್ಲಿ ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಉತ್ತಮ ಮಳೆಯಾಗಿ ಕೃಷ್ಣರಾಜಸಾಗರ ಸೇರಿದಂತೆ ಎಲ್ಲಾ ಜಲಾಶಯಗಳು ತುಂಬಿದಲ್ಲಿ ರೈತರ ಬದುಕು ಹಸನಾಗಲಿದೆ. ಒಂದು ವೇಳೆ ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಲಿದೆ.
ಕೆಆರ್‌ಎಸ್‌ನಲ್ಲಿ 90.90 ಅಡಿ ನೀರು: ಕಳೆದ ವರ್ಷ ಮುಂಗಾರು ಮಳೆ ನಿರೀಕ್ಷೆಯಂತೆ ಸುರಿದ ಪರಿಣಾಮ 2018ರ ಜು.17ರ ವೇಳೆಗೆ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ ಭರ್ತಿಯಾಗಿತ್ತು. ಕೇರಳ ಮತ್ತು ಕೊಡಗಿನಲ್ಲಿ ಸುರಿದ ಕುಂಭದ್ರೋಣ ಮಳೆಯಿಂದ ಅಣೆಕಟ್ಟೆಗೆ ಸಾಕಷ್ಟು ಪ್ರಮಾಣದಲ್ಲಿ ಒಳಹರಿವು ಬರುತ್ತಿದ್ದರಿಂದ ಜಲಾಶಯಗಳೆಲ್ಲವೂ ಮೈದುಂಬಿಕೊಂಡಿದ್ದವು. ಕಾವೇರಿ ಜಲಾನಯನ ಪ್ರದೇಶದಲ್ಲಿ ಕೃಷಿ ಚಟುವಟಿಕೆಯೂ ಬಿರುಸನ್ನು ಪಡೆದುಕೊಂಡಿತ್ತು.
ಈ ವರ್ಷ ನಿರೀಕ್ಷೆಯಂತೆ ಮುಂಗಾರು ಮಳೆಯ ಆಗಮನವಾಗಿಲ್ಲ. ಪ್ರಸ್ತುತ ಕೃಷ್ಣರಾಜಸಾಗರ ಜಲಾಶಯದಲ್ಲಿ 90.90 ಅಡಿ ನೀರಿದ್ದು, 16.4 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 2578 ಕ್ಯುಸೆಕ್ ಒಳಹರಿವಿದ್ದು, 738 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಕುಡಿಯುವ ನೀರಿಗೂ ತೊಂದರೆ: ಹಾಲಿ ಕೆಆರ್‌ಎಸ್‌ನಲ್ಲಿ ಸಂಗ್ರಹವಾಗಿರುವ ನೀರನ್ನು ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳ ಜನರ ಕುಡಿಯುವ ನೀರಿಗೆ ಮೀಸಲಿಡಲಾಗಿದೆ. ಈ ನೀರನ್ನು ಕೃಷಿ ಚಟುವಟಿಕೆಗೆ ಕೊಡಲು ಸಾಧ್ಯವೇ ಇಲ್ಲ. ಅಣೆಕಟ್ಟೆಯಲ್ಲಿ 96 ಅಡಿಗಿಂತಲೂ ಹೆಚ್ಚಿನ ನೀರು ಸಂಗ್ರಹವಾದಲ್ಲಿ ಮಾತ್ರ ಮುಂಗಾರು ಬೆಳೆಗೆ ಕಟ್ಟು ನೀರು ಪದ್ಧತಿಯಲ್ಲಿ
ನೀರು ಹರಿಸಲು ಸಾಧ್ಯ ಎಂದು ನೀರಾವರಿ ಸಲಹಾ ಸಮಿತಿ ತೀರ್ಮಾನ ಕೈಗೊಂಡಿರುವುದು ರೈತರ ಆತಂಕವನ್ನು ಹೆಚ್ಚಿಸಿದೆ.
ಜುಲೈ ಮೊದಲ ವಾರದಿಂದಲೇ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭವಾಗಬೇಕಿತ್ತು. ಮಳೆ ಪ್ರಮಾಣ ಕಡಿಮೆಯಾಗಿರುವುದು ಹಾಗೂ ನಾಲೆಗಳಲ್ಲಿ ನೀರು ಹರಿಸದ ಕಾರಣ ಬಿತ್ತನೆ ಕಾರ್ಯ ಇನ್ನೂ ಆರಂಭವಾಗಿಲ್ಲ. 10 ದಿನಗಳ ಕಾಲ ನಾಲೆಗಳಲ್ಲಿ ನೀರು ಹರಿಸಲು ನಿರ್ಧರಿಸಿರುವುದರಿಂದ ಇರುವ ಬೆಳೆ ರಕ್ಷಣೆ ಮಾಡಿಕೊಳ್ಳಲು ರೈತರಿಗೆ ಸೂಚನೆ ನೀಡಲಾಗಿದೆ.
ಭತ್ತದ ಬಿತ್ತನೆಯಲ್ಲಿ ಶೂನ್ಯ ಸಾಧನೆ: ಮುಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆ ಜಿಲ್ಲೆಯಲ್ಲಿ 58350 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆ ಮಾಡುವ ಗುರಿ ಹೊಂದಿತ್ತು. ಈವರೆಗೂ ಒಂದೇ ಒಂದು ಎಕರೆ ಪ್ರದೇಶದಲ್ಲೂ ಬಿತ್ತನೆಯಾಗಿಲ್ಲ. ಬಿತ್ತನೆ ಬೀಜ, ರಸಗೊಬ್ಬರ ಅಗತ್ಯವಿರುವಷ್ಟು ದಾಸ್ತಾನು ಮಾಡಲಾಗಿದೆ. ಮಳೆ ಬೀಳುವುದನ್ನೇ ಕೃಷಿ ಇಲಾಖೆ ಮತ್ತು ರೈತರು ಎದುರು ನೋಡುತ್ತಿದ್ದಾರೆ.
ಜಿಲ್ಲೆಯ 225 ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬಿತ್ತನೆ ಮಾಡುವ ಗುರಿ ಹೊಂದಿದೆ. 103 ಹೆಕ್ಟೇರ್‌ನಲ್ಲಿ ಬಿತ್ತನೆ ನಡೆದಿದೆ. 61865 ಹೆಕ್ಟೇರ್‌ನಲ್ಲಿ ರಾಗಿ ಬಿತ್ತನೆಯಾಗಬೇಕಿತ್ತಾದರೂ ಮಳೆ ಕೊರತೆಯಿಂದಾಗಿ ಕೇವಲ 100 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡುವ ಮೂಲಕ ಶೇ. 4.5ರಷ್ಟು ಸಾಧನೆ ಮಾಡಲಾಗಿದೆ. ತೊಗರಿ ಬಿತ್ತನೆ 1290 ಹೆಕ್ಟೇರ್‌ನಲ್ಲಿ ಆಗಬೇಕಿತ್ತು. ಆದರೆ, 578 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. 13340 ಹೆಕ್ಟೇರ್‌ನಲ್ಲಿ ಹುರುಳಿ ಬಿತ್ತನೆ ಮಾಡಬೇಕಿದೆ. ಕೇವಲ 360 ಹೆಕ್ಟೇರ್‌ನಲ್ಲಿ ಬಿತ್ತನೆ ನಡೆದಿದೆ. ಉದ್ದು 650 ಹೆಕ್ಟೇರ್ ಗುರಿಯಲ್ಲಿ 363 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದ್ದರೆ, ಹೆಸರು 535 ಹೆಕ್ಟೇರ್ ಗುರಿಯಲ್ಲಿ 270 ಹೆಕ್ಟೇರ್, ಅಲಸಂದೆ 8365 ಹೆಕ್ಟೇರ್ ಗುರಿಯ ಪೈಕಿ 7706 ಹೆಕ್ಟೇರ್ ಬಿತ್ತನೆ ನಡೆದಿದ್ದರೆ, 3670 ಹೆಕ್ಟೇರ್‌ನಲ್ಲಿ ಗುರಿ ಹೊಂದಿದ್ದ ಅವರೆ 103 ಹೆಕ್ಟೇರ್ ಬಿತ್ತನೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.
ಮಳೆ ಕೊರತೆ ಕಾರಣದಿಂದಾಗಿ ಏಕದಳ ಮತ್ತು ದ್ವಿದಳ ಧಾನ್ಯಗಳ ಮೇಲೂ ತೀವ್ರ ಪರಿಣಾಮ ಬೀರಿದೆ. ಮಳೆ ಇಲ್ಲದ ಕಾರಣ ಈ ಬೆಳೆಗಳು ಒಣಗುವ ಹಂತಕ್ಕೆ ಬಂದು ನಿಂತಿವೆ. ಈಗಾಗಲೇ ಬೆಳೆ ನಷ್ಟ ಸಮೀಕ್ಷೆ ನಡೆಸಲಾಗುತ್ತಿದ್ದು, ಯಾವ ಪ್ರಮಾಣದಲ್ಲಿ ಬೆಳೆ ನಷ್ಟ ಆಗಿದೆ ಎಂಬುದನ್ನು ಈಗಲೇ ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟಾರೆ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾದಲ್ಲಿ ಮಾತ್ರ ಕೃಷಿ ಚಟುವಟಿಕೆ ಚುರುಕುಗೊಳ್ಳಲಿದೆ. ಇಲ್ಲದಿದ್ದರೆ ಕೃಷಿ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಳೆರಾಯನನ್ನೇ ಎದುರು ನೋಡುತ್ತಿರುವ ರೈತರು ದಿಕ್ಕು ತೋಚದೆ ಅಸಹಾಯಕರಾಗಿ ಕುಳಿತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.