ಮಂಗಳೂರು: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
Team Udayavani, Oct 26, 2019, 12:49 PM IST
ಮಂಗಳೂರು: ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನ ಅತ್ತಾವರದ ಪಿಜಿ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಕೇರಳ ಮೂಲದ ಅನುಪಮಾ (23) ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿನಿಯು ಸ್ಥಳೀಯ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದಳು. ಶುಕ್ರವಾರ ರಾತ್ರಿ ತಾನು ತಂಗಿದ್ದ ಪಿಜಿಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಪ್ರೇಮ ವೈಫಲ್ಯವೇ ಘಟನೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.