ಮಂಗಳೂರು: ಮಾದಕ ವಸ್ತು ಕೋಕೆನ್ ಮಾರಾಟ ಯತ್ನ: ಆರೋಪಿಗಳ ಸೆರೆ
Team Udayavani, Oct 14, 2019, 1:28 PM IST
ಮಂಗಳೂರು: ಮಂಗಳೂರು ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ ಆ್ಯಂಡ್ ನಾರ್ಕೋಟಿಕ್ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಗಳೂರು ಪಳ್ನೀರ್‌ನ ಫಾಸೀಮ್ ನೌಷಿಬ್ (25), ಮಹಮ್ಮದ್ ಝಾಹಿದ್ (26) ಮಂಜೇಶ್ವರ ಕುಂಜೆತ್ತೂರಿನ ಅಪ್ಜಲ್ ಹುಸೈನ್ (28) ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ಮಂಗಳೂರು ನಗರದ ಪಡೀಲ್ ಕಂಕನಾಡಿ ಜಂಕ್ಷನ್ ರೈಲ್ವೇ ಸಿಬ್ಬಂದಿಗಳ ಸ್ಟಾಪ್ ಕ್ವಾಟ್ರಸ್ ಬಳಿ ಕಾರಿನ ಸಮೇತ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಅವರಿಂದ
30 ಗ್ರಾಂ ತೂಕದ ರೂ. 2,40,000/- ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಕೋಕೆನ್, 4 ಮೊಬೈಲ್ ಫೋನ್, ಮಾರುತಿ ಕಂಪೆನಿಯ ಸ್ವೀಪ್ಟ್ ಕಾರು ಸೇರಿದಂತೆ ಅಂದಾಜು ಒಟ್ಟು ಮೌಲ್ಯ ರೂ. 10,000,00/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಇಕಾನಾಮಿಕ್ ಆ್ಯಂಡ್ ನಾರ್ಕೋಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾದಕ ವಸ್ತುವಿನ ಮಾರಾಟದ ಜಾಲದಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ.
ಪೊಲೀಸ್ ಆಯುಕ್ತರಾದ ಡಾ. ಪಿ.ಎಸ್. ಹರ್ಷ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್, ಪಿ.ಎಸ್.ಐ ಕಬ್ಬಾಳ್ ರಾಜ್, ಸಿಸಿಬಿ ಘಟಕ ಸಿಬ್ಬಂದಿಗಳು ಹಾಗೂ ಇಕಾನಾಮಿಕ್ ಆ್ಯಂಡ್ ನಾರ್ಕೋಟಿಕ್ ಪೊಲೀಸ್ ಠಾಣೆಯ ಮಹಿಳಾ ಪಿ.ಎಸ್.ಐ ಲತಾ ಮತ್ತು ಅವರ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್ ಇರಾನಿವರೆಗೆ
Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್: 21 ವರ್ಷದ ಹಿಂದೆ ನಡೆದಿದ್ದೇನು?
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.