ಮಂಗಳೂರಿನಲ್ಲಿ ಪರ್ಯಾಯ ವ್ಯಾಜ್ಯ ಪರಿಹಾರ ಕೇಂದ್ರ ಸ್ಥಾಪನೆ: ಕೆಸಿಸಿಐ ಅಧ್ಯಕ್ಷ ಐಸಾಕ್ ವಾಸ್
Team Udayavani, Oct 17, 2019, 6:19 PM IST
ಮಂಗಳೂರು : ಕೈಗಾರಿಕೆ ಮತ್ತು ವಾಣಿಜ್ಯ ವ್ಯವಹಾರಗಳ ವಿವಾದ ಪರಿಹಾರಕ್ಕಾಗಿ ಸುಸಜ್ಜಿತವಾದ ಪರ್ಯಾಯ ವ್ಯಾಜ್ಯ ಪರಿಹಾರ (ಎಡಿಆರ್) ಕೇಂದ್ರವನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಕೆನರಾ ಛೇಂಬರ್ ಆಫ್ ಕಾಮರ್ಸ್ಆ್ಯಂ ಡ್ ಇಂಡಸ್ಟ್ರಿ (ಕೆಸಿಸಿಐ) ಸರಕಾರಿ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದೆ ಎಂದು ಕೆಸಿಸಿಐ ಅಧ್ಯಕ್ಷ ಐಸಾಕ್ ವಾಸ್ ತಿಳಿಸಿದರು.
ಕೆಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಗುರುವಾರದಂದು ನಗರದಲ್ಲಿ ಪ್ರಥಮ ಪತ್ರಿಕಾಗೋಷ್ಠಿ ನಡೆಸಿದ ಅವರು ತನ್ನ ಅಧಿಕಾರ ಅವಧಿಯಲ್ಲಿ ಕೈಗೊಳ್ಳಲು ಉದ್ದೇಶಿಸಿದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕೇಂದ್ರ ಸರಕಾರದ ಹೊಸ ನೀತಿಯು ವಾಣಿಜ್ಯ ವಿವಾದಗಳಿಗೆ ಸಂಬಂಧಿಸಿ ಪರ್ಯಾಯ ವ್ಯಾಜ್ಯ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲು ಉತ್ತೇಜನ ನೀಡುತ್ತದೆ. ಹಾಗಾಗಿ ಕೆಸಿಸಿಐ ಮಂಗಳೂರಿನಲ್ಲಿ ಎಡಿಆರ್ ಸ್ಥಾಪಿಸಲು ಉದ್ದೇಶಿಸಿದೆ. ಈ ಯೋಜನೆಯನ್ನು ಸಾಕಾರಗೊಳಿಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕೆಸಿಸಿಐ ಗೌರವ ಕಾರ್ಯದರ್ಶಿ ನಿಸಾರ್ ಫಕೀರ್ ಮಹಮದ್ , ಉಪಾಧ್ಯಕ್ಷ ಶಶಿಧರ್ ಪೈ ಮಾರೂರು, ಕಾರ್ಯದರ್ಶಿ ದಿವಾಕರ್ ಪೈ, ಕೋಶಾಧಿಕಾರಿ ಎಂ. ಗಣೇಶ್ ಕಾಮತ್ ಮೊದಲಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.