ಮಂಗಳೂರು:ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು
Team Udayavani, Dec 4, 2019, 2:43 PM IST
ಮಂಗಳೂರು: ಬಟ್ಟೆ ಒಣಗಿಸಲು ಹಾಕುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಣಾಜೆ ಸಮೀಪದ ಮಂಜನಾಡಿ ಗ್ರಾಮದ ಅಸೈ ಮದಕ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ಅಸೈ ಮದಕ ನಿವಾಸಿ ನಾಗೇಶ್ ಎಂಬವರ ಪತ್ನಿ ರೋಹಿಣಿ (30) ಮೃತಪಟ್ಟವರು. ರೋಹಿಣಿ ಬಟ್ಟೆ ಒಗೆದು ಬಳಿಕ ಅದನ್ನು ಒಣಗಿಸಲು ಅಂಗಳದಲ್ಲಿ ಕಟ್ಟಿದ್ದ ಹಗ್ಗಕ್ಕೆ ಹಾಕುತ್ತಿದ್ದಾಗ ಅಂಗಳಕ್ಕೆ ಬಲ್ಬ್ ಹಾಕಲು ಎಳೆದಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ತಗುಲಿತ್ತು ಎನ್ನಲಾಗಿದೆ. ಈ ಸಂದರ್ಭ ಅವರಿಗೆ ವಿದ್ಯುತ್ ಶಾಕ್ ತಗಲಿದೆ. ಇದನ್ನು ಅರಿತ ಮನೆ ಸಮೀಪದವರು ಮೈನ್ ಸ್ವಿಚ್ ತೆಗೆದು ಅವರನ್ನು ರಕ್ಷಿಸಲು ಯತ್ನಿಸಿದರೂ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದೆ.
ಮೃತರು ಪತಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪತಿ, ಪತ್ನಿ ಇಬ್ಬರೂ ಬೀಡಿ ಕಟ್ಟಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಇತ್ತೀಚೆಗೆ ನಾಗೇಶ್ ದೇರಳಕಟ್ಟೆಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.