ಕದ್ರಿ ರಸ್ತೆ ಅಪಘಾತ ಶಿಕ್ಷಕಿ ಸಾವು ಪ್ರಕರಣ: ಲಾರಿ ಚಾಲಕನಿಗೆ ನ್ಯಾಯಾಂಗ ಬಂಧನ
Team Udayavani, Dec 2, 2019, 6:25 PM IST
ಮಂಗಳೂರು: ಮಂಗಳೂರಿನ ಕದ್ರಿ ಕಂಬಳದಲ್ಲಿ ಭಾನುವಾರದಂದು ನಡೆದ ಲಾರಿ-ರಿಕ್ಷಾ ಅಪಘಾತದಲ್ಲಿ ಓರ್ವ ಶಿಕ್ಷಕಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನಾದ ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಲ್ ಗ್ರಾಮದ ಸಿದ್ಧಲಿಂಗನ ಗೌಡ ವಿ. ಪೊಲೀಸ್ ಪಾಟಿಲ್ (29 ವರ್ಷ) ಎಂಬವರು ಆರೋಪಿಯಾಗಿದ್ದು, ಈತನ ವಿರುದ್ಧ ಐಪಿಸಿ 304 ಕೇಸ್ ದಾಖಲಾಗಿದೆ. ಈತನ ವಿರುದ್ಧ ಕೊಲೆಯಲ್ಲದ ಮಾನವ ಹತ್ಯೆ ಪ್ರಕರಣ ದಾಖಲಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಗರದ ಕದ್ರಿ ಕಂಬಳ ರಸ್ತೆಯಲ್ಲಿ ಭಾನುವಾರದಂದು ಈಶರ್ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪಣಂಬೂರು ಕೇಂದ್ರೀಯ ವಿದ್ಯಾಲಯದ ಶಿಕ್ಷಕಿ ಶೈಲಜಾ ರಾವ್ (55) ಎಂಬವರು ಸಾವನ್ನಪ್ಪಿದ್ದು, ಚಾಲಕ ವಿನೋದ್ (40) ಗಂಭೀರವಾಗಿ ಗಾಯಗೊಂಡಿದ್ದರು.
ಲಾರಿಯು ಬೆಂಗಳೂರಿನಿಂದ ಫರ್ನಿಚರ್ ಸಾಮಗ್ರಿಗಳನ್ನು ಸಾಗಿಸುತ್ತಿತ್ತು. ಮಂಗಳೂರಿನಲ್ಲಿ ಕೆಲವು ಸರಕನ್ನು ಇಳಿಸಿ ಉಡುಪಿ ಕಡೆಗೆ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಲಾರಿ ಚಾಲಕ ಬೆಂಗಳೂರಿನ ಸಿದ್ಧಲಿಂಗನ ಗೌಡನ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.