ನ್ಯಾಯಾಂಗದ ತೀರ್ಪಿಗೆ ಎಲ್ಲರೂ ಗೌರವ ಕೊಡಬೇಕು: ಜನಾರ್ದನ ಪೂಜಾರಿ
Team Udayavani, Nov 8, 2019, 1:19 PM IST
ಮಂಗಳೂರು: ಅಯೋಧ್ಯೆ ತೀರ್ಪು ಹೊರಬೀಳುವಾಗ ಪ್ರತಿಯೊಬ್ಬರು ಶಾಂತಿ ಸಾಮರಸ್ಯ ಕಾಪಾಡಬೇಕು. ನ್ಯಾಯಾಂಗದ ತೀರ್ಪುಗೆ ಎಲ್ಲರೂ ಗೌರವ ಕೊಡಬೇಕು. ಈ ವಿಚಾರವಾಗಿ ಎಲ್ಲರೂ ಸಹಕರಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೇಳಿದರು.
ಅವರು ಮಂಗಳೂರಿನಲ್ಲಿ ಶುಕ್ರವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಸಿಎಂ ಯಡಿಯೂರಪ್ಪ ಆಡಿಯೋ ಕುರಿತಂತೆ ಪ್ರತಿಕ್ರಿಯಿಸಿದ ಅವರು ನ್ಯಾಯಾಲಯ ಆಡಿಯೋವನ್ನು ಪರಿಗಣಿಸುವುದಾಗಿ ಹೇಳಿರುವುದು ಸ್ವಾಗತಾರ್ಹ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಇಂತಹ ಕುಟಿಲ ತಂತ್ರ ಪುನರ್ ವರ್ತನೆಯಾಗದಂತೆ ನೋಡಿಕೊಳ್ಳಬೇಕು.
ಚುನಾವಣೆಯಲ್ಲಿ ಜನಾಭಿಪ್ರಾಯ ಮೂಲಕ ಅಧಿಕಾರ ನಡೆಸಿದ ಸರಕಾರವನ್ನು ಬೀಳಿಸಿದ ಯಡಿಯೂರಪ್ಪ, ಅಮೀತ್ ಶಾ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಮಹಾರಾಷ್ಟ್ರದಲ್ಲೂ ರೆಸಾರ್ಟ್ ರಾಜಕೀಯಕ್ಕೆ ಹೊರಟಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಹೇಳಿದರು.
ಮಂಗಳೂರು ಮಹಾ ನಗರ ಪಾಲಿಕೆ ಚುನಾವಣೆ ಸಂಬಂಧ ಕಾಂಗ್ರೆಸ್ ಟಿಕೇಟ್ ಹಂಚಿಕೆಯಲ್ಲೂ ಗೊಂದಲ ಹಾಗೂ ಕೆಲವರಿಗೆ ಟಿಕೇಟ್ ಸಿಗದಿರುವ ಕಾರಣದಿಂದ ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸುಲಭವಾಗಲಿದ್ದು, ನ 14 ರಂದು ಬರುವ ಫಲಿತಾಂಶದಲ್ಲಿ ಕಾಂಗ್ರೆಸ್ ಕಣ್ಣೇರು ಹಾಕುವ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಿದರು. ಸಿದ್ಧರಾಮಯ್ಯ ಆಡಳಿತ ಕಾಲದಲ್ಲಿ ಮಂಗಳೂರಿಗೆ ಐದುವರೆ ಸಾವಿರ ಕೋಟಿ ರೂ. ಬಂದಿದೆ ಎಂಬುವುದು ಸುಳ್ಳು ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.