ಜಿಲ್ಲೆಯಲ್ಲಿ 424 ಸೀಟುಗಳಿಗೆ ಕೇವಲ 118 ಅರ್ಜಿ !
ಆರ್‌ಟಿಇ ತಿದ್ದುಪಡಿ
Team Udayavani, May 19, 2019, 10:05 AM IST
ಮಹಾನಗರ: ಸರಕಾರವು ಆರ್‌ಟಿಇನಲ್ಲಿ ತಿದ್ದುಪಡಿ ತಂದು ಅನುದಾನಿತ ಶಾಲೆಗಳಿಗೆ ಆದ್ಯತೆ ನೀಡಿದ ಪರಿಣಾಮ ದ.ಕ. ಜಿಲ್ಲೆಗೆ ಮೀಸಲಾದ 424 ಆರ್‌ಟಿಇ ಮೀಸಲು ಸೀಟುಗಳಿಗೆ 118 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ.
ಆರ್ಥಿಕವಾಗಿ ಹಿಂದುಳಿದ ಕುಟುಂ ಬದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಅನುಷ್ಠಾನಗೊಳಿಸಲಾಗಿತ್ತು. ಆದಾದ ಬಳಿಕ ರಾಜ್ಯದ ವಿವಿಧ ಭಾಗಗಳಲ್ಲಿ ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದರು. ಆದರೆ ಈ ಬಾರಿ ಆರ್‌ಟಿಇ ಸೀಟುಗಳಲ್ಲಿ ತಿದ್ದುಪಡಿ ಮಾಡಲಾಗಿದ್ದು, ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಮಾತ್ರ ಆರ್‌ಟಿಇ ಸೀಟುಗಳನ್ನು ಮೀಸಲಿಡಲಾಯಿತು. ಇದರ ಪರಿಣಾಮ ಆರ್ ಟಿಇ ಸೀಟು ಗಳಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಕಡಿಮೆಯಾಗಿದೆ.
96 ಶಾಲೆಗಳಲ್ಲಿ ಮಾತ್ರ ಅವಕಾಶ
ಈ ಬಾರಿ ಮೊದಲಿಗೆ ಮಂಗಳೂರು ಉತ್ತರ ವಲಯದಲ್ಲಿ 102, ಮಂಗಳೂರು ದಕ್ಷಿಣದಲ್ಲಿ 138, ಮೂಡುಬಿದಿರೆಯಲ್ಲಿ 16, ಬಂಟ್ವಾಳದಲ್ಲಿ 77, ಬೆಳ್ತಂಗಡಿಯಲ್ಲಿ 24, ಪುತ್ತೂರಿನಲ್ಲಿ 41, ಸುಳ್ಯ ವಲಯದಲ್ಲಿ 26 ಸೀಟುಗಳನ್ನು ಮೀಸಲಿಡಲಾಗಿತ್ತು. ಆರ್‌ಟಿಇ ಪರಿಷ್ಕೃತ ನಿಯಮಾವಳಿ ಪ್ರಕಾರ ದ.ಕ. ಜಿಲ್ಲೆಯ ಅನುದಾನಿತ 86 ಮತ್ತು ಅನುದಾನ ರಹಿತ 10 ಸಹಿತ 96 ಶಾಲೆಗಳಲ್ಲಿ ಕೇವಲ 424 ಸೀಟುಗಳನ್ನು ಮಾತ್ರ ಮೀಸಲಿಡಲಾಗಿದೆ. ಮಂಗಳೂರು ಉತ್ತರದ 3 ಮತ್ತು ದಕ್ಷಿಣದ 7 ಖಾಸಗಿ ಶಾಲೆಗಳನ್ನು ಹೊರತುಪಡಿಸಿದರೆ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಶೈಕ್ಷಣಿಕ ವಲಯಗಳ ಖಾಸಗಿ ಶಾಲೆಗಳಲ್ಲಿ ಈ ಬಾರಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವೇ ನೀಡಿಲ್ಲ.
2018-19ನೇ ಸಾಲಿನಲ್ಲಿ ಅನುದಾನಿತ ಮತ್ತು ಖಾಸಗಿಯನ್ನೊಳಗೊಂಡು 2,727 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಾತ್ರ ಅವಕಾಶ ಒದಗಿಸಲಾಗಿತ್ತು. ಆದರೆ ಪ್ರಸಕ್ತ ಸಾಲಿನ (2019-20)ಮಿತಿಯನ್ನು 424ಕ್ಕೆ ಸೀಮಿತಗೊಳಿಸಲಾಗಿದೆ.
ಸುಳ್ಯದಲ್ಲಿ ಶೂನ್ಯ ಅರ್ಜಿ
ಪ್ರಸಕ್ತ ಸಾಲಿನಲ್ಲಿ ದ.ಕ. ಜಿಲ್ಲೆಯ 7 ಶಿಕ್ಷಣ ವಲಯಗಳ ಪೈಕಿ ಸುಳ್ಯದಲ್ಲಿ ಒಂದೇ ಒಂದು ಅರ್ಜಿ ಸಲ್ಲಿಕೆಯಾಗಿಲ್ಲ ಎಂಬುದು ಗಮನಾರ್ಹ. ಉಳಿದಂತೆ ಬಂಟ್ವಾಳ ವಲಯದಲ್ಲಿ 20, ಬೆಳ್ತಂಗಡಿಯಲ್ಲಿ 2, ಮಂಗಳೂರು ಉತ್ತರದಲ್ಲಿ 62, ಮಂಗಳೂರು ದಕ್ಷಿಣದಲ್ಲಿ 28, ಮೂಡುಬಿದಿರೆಯಲ್ಲಿ 3, ಪುತ್ತೂರು ವಲಯದಲ್ಲಿ 3 ಅರ್ಜಿಗಳು ಸಲ್ಲಿಕೆಯಾಗಿವೆ. ಆ ಮೂಲಕ ಮಂಗಳೂರು ಉತ್ತರ ಮತ್ತು ದಕ್ಷಿಣದಲ್ಲಿ ಅತಿ ಹೆಚ್ಚು ಆರ್‌ಟಿಇ ಅರ್ಜಿಗಳು ಸಲ್ಲಿಕೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.