ಅಡ್ಡಾದಿಡ್ಡಿ ಬೈಕ್‌ ನಿಲುಗಡೆಗಿಲ್ಲ ಬ್ರೇಕ್‌

ಜನನಿಬಿಡ ರಸ್ತೆಗಳಲ್ಲಿ ತಳ್ಳು ಬಂಡಿಯಲ್ಲಿ ಹಣ್ಣು-ತರಕಾರಿ ವ್ಯಾಪಾರ • ಟ್ರಾಫಿಕ್‌ ಜಾಮ್‌ ಕಿರಿಕಿರಿ

Team Udayavani, Jul 25, 2019, 4:28 PM IST

25-JUly-38

ಮಾನ್ವಿ: ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂದಿನ ರಸ್ತೆಯಲ್ಲಿ ಬೈಕ್‌ಗಳನ್ನು ಅಡ್ಡಾದಿಡ್ಡಿ ನಿಲ್ಲಿಸಲಾಗಿತ್ತು.

ಮಾನ್ವಿ: ಪಟ್ಟಣದಲ್ಲಿ ಎಲ್ಲಿ ನೋಡಿದರೂ ಬೈಕ್‌ಗಳೇ ಕಾಣುತ್ತಿದ್ದು, ಪ್ರಮುಖ ವೃತ್ತ, ರಸ್ತೆಗಳಲ್ಲಿ ಅಡ್ಡಾದಿಡ್ಡಿ ಬೈಕ್‌ ನಿಲ್ಲಿಸುವುದರಿಂದ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿದೆ.

ಪಟ್ಟಣದ ಬಸ್‌ ನಿಲ್ದಾಣ, ಬಸವ ವೃತ್ತ, ವಾಲ್ಮೀಕಿ ವೃತ್ತ, ಆಕ್ಸಿಸ್‌ ಬ್ಯಾಂಕ್‌ ಎದುರಿಗೆ, ಪ್ರವಾಸಿ ಮಂದಿರ ಹತ್ತಿರ, ತಹಶೀಲ್ದಾರ್‌ ಕಚೇರಿ, ಕೋರ್ಟ್‌ ಹತ್ತಿರ, ಎಸ್‌ಬಿಎಚ್ ಬ್ಯಾಂಕ್‌ ಮತ್ತು ಪುರಸಭೆ ಎದುರಿಗೆ ಹೀಗೆ ಅತಿ ಹೆಚ್ಚು ಜನದಟ್ಟಣೆ ಪ್ರದೇಶಗಳಲ್ಲಿ ಬೈಕ್‌ಗಳನ್ನು ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ನಿಲ್ಲಿಸಲಾಗುತ್ತಿದೆ. ಈ ರಸ್ತೆಗಳಲ್ಲ ಪಾದಚಾರಿಗಳು, ಬಸ್‌, ಕಾರು, ಲಾರಿಗಳ ಓಡಾಟಕ್ಕೆ ತೀವ್ರ ತೊಂದರೆ ಆಗುತ್ತಿದೆ. ಪೊಲೀಸರು ಸಂಚಾರ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

ಸುಗಮ ಸಂಚಾರಕ್ಕೆ ಅಡ್ಡಿ: ಪಟ್ಟಣದ ತಹಶೀಲ್ದಾರ್‌ ಕಚೇರಿಯಿಂದ ಬಸವ ವೃತ್ತದವರೆಗಿನ ರಸ್ತೆ ಎರಡೂ ಬದಿ ಬೈಕ್‌ಗಳನ್ನು ನಿಲ್ಲಿಸಲಾಗುತ್ತಿದೆ. ಈ ರಸ್ತೆಯಲ್ಲೇ ತಳ್ಳು ಗಾಡಿಗಳಲ್ಲಿ ವ್ಯಾಪಾರಸ್ಥರು ತರಕಾರಿ, ಹಣ್ಣು ಮಾರುತ್ತಾರೆ. ಇದರಿಂದಾಗಿ ಎರಡು ಬದಿಯ ಅರ್ಧದಷ್ಟು ರಸ್ತೆ, ಬೈಕ್‌, ತಳ್ಳುಗಾಡಿಗಳಿಂದ ಮುಚ್ಚಿಹೋಗಿರುತ್ತದೆ. ಬಸ್‌, ಲಾರಿಗಳು ಬಂದರೆ ಟ್ರಾಫಿಕ್‌ ಜಾಮ್‌ ಆಗುತ್ತದೆ. ಬಸ್‌ ನಿಲ್ದಾಣದಿಂದ ಬಸವ ವೃತ್ತ ದಾಟಲು ಚಾಲಕರು ಹರಸಾಹಸ ಪಡಬೇಕಾಗುತ್ತದೆ.

ಪಾರ್ಕಿಂಗ್‌ ವ್ಯವಸ್ಥೆ ಇಲ್ಲ: ಬಸವ ವೃತ್ತದಿಂದ ಪುರಸಭೆವರೆಗಿನ ರಸ್ತೆ ಜನ, ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಬಸ್‌ ನಿಲ್ದಾಣ, ಕೋರ್ಟ್‌, ತಹಶೀಲ್ದಾರ್‌ ಕಚೇರಿ, ಮಾರ್ಕೆಟ್, ಬ್ಯಾಂಕ್‌ಗಳು ಈ ರಸ್ತೆಯಲ್ಲೇ ಇವೆ. ಎಲ್ಲೂ ಬೈಕ್‌ ನಿಲುಗಡೆಗೆ ಪ್ರತ್ಯೇಕ ಸ್ಥಳಾವಕಾಶವಿಲ್ಲ. ಹೀಗಾಗಿ ಸಾರ್ವಜನಿಕರು ತಮಗೆ ಕೆಲಸವಿರುವ ಅಂಗಡಿಗಳ ಮುಂದೆ ಬೈಕ್‌ ನಿಲ್ಲಿಸಿ ಹೋಗುತ್ತಾರೆ. ಆದರೆ ತರಕಾರಿ ವ್ಯಾಪಾರಕ್ಕೆ ಪ್ರತ್ಯೇಕ ಮಾರುಕಟ್ಟೆ ಇದ್ದರೂ ವ್ಯಾಪಾರಸ್ಥರು ಮಾತ್ರ ಬಸ್‌ ನಿಲ್ದಾಣದ ಮುಂದಿನ ರಸ್ತೆಯಲ್ಲಿ ತಳ್ಳುಗಾಡಿಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡುತ್ತಾರೆ. ಈ ರಸ್ತೆಯ ಫುಟ್ಪಾತ್‌ ಮೇಲೂ ಹಣ್ಣಿನ ಅಂಗಡಿ ಹಚ್ಚಲಾಗಿದ್ದು, ಪಾದಚಾರಿಗಳ ಓಡಾಟಕ್ಕೂ ಜಾಗೆ ಇಲ್ಲದಾಗಿದೆ.

ಬಸ್‌ ನಿಲ್ದಾಣದಲ್ಲೂ ಅಡ್ಡಾದಿಡ್ಡಿ ನಿಲುಗಡೆ: ಇನ್ನು ಬಸ್‌ ನಿಲ್ದಾಣದಲ್ಲಂತೂ ಬೈಕ್‌ಗಳನ್ನು ಅಡ್ಡಾದಿಡ್ಡಿ ನಿಲ್ಲಿಸಲಾಗುತ್ತಿದ್ದು, ಬಸ್‌ ನಿಲುಗಡೆಗೆ ತೊಂದರೆ ಆಗುತ್ತಿದೆ. ಜಿಲ್ಲೆಯಲ್ಲೇ ಮಾನ್ವಿ ಬಸ್‌ ನಿಲ್ದಾಣ ಅತ್ಯಂತ ಚಿಕ್ಕದಾಗಿದೆ. ನಿಲ್ದಾಣದ ಎರಡೂ ಬದಿಯಲ್ಲಿ ಬೈಕ್‌ಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದಾಗಿ ಬಸ್‌ಗಳ ಓಡಾಟಕ್ಕೆ ತೊಂದರೆ ಆಗುತ್ತಿದೆ. ನಿಲ್ದಾಣದ ಸಿಬ್ಬಂದಿ ಬೈಕ್‌ ಸವಾರರಿಗೆ ಹೇಳಿ ಹೇಳಿ ಬೇಸತ್ತಿದ್ದಾರೆ. ಜನ ಕೂಡ ಎಲ್ಲಿ ಬೈಕ್‌ ನಿಲ್ಲಿಸಬೇಕು, ಪಾರ್ಕಿಂಗ್‌ ವ್ಯವಸ್ಥೆ ಮಾಡಿ ಎಂದು ಸಿಬ್ಬಂದಿಯೊಂದಿಗೆ ವಾದಕ್ಕಿಳಿಯುವುದು ಸಾಮಾನ್ಯವಾಗಿದೆ. ಪುರಸಭೆ ಮತ್ತು ಪೊಲೀಸ್‌ ಇಲಾಖೆ ಪಟ್ಟಣದಲ್ಲ ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಜತೆಗೆ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.