ಫ್ಲಡ್‌ ಫ್ಲೋ ಯೋಜನೆ ಕೈಬಿಡಿ

ನಾಗಲಾಪುರ ಹಳ್ಳದ ನೀರು ಕನಕನಾಲೆಗೆ ಹರಿಸಲು ವಿರೋಧ •ಮಸ್ಕಿ ಜಲಾಶಯ ಅಭಿವೃದ್ಧಿ ಮಾಡಿ

Team Udayavani, Aug 30, 2019, 11:31 AM IST

30-Agust-9

ಮಸ್ಕಿ: ನಾಗಲಾಪುರ ಹಳ್ಳದ ನೀರನ್ನು ಕನಕನಾಲೆಗೆ ತಿರುಗಿಸುವ ಯೋಜನೆ ಕೈಬಿಡಲು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಮಸ್ಕಿ: ನಾಗಲಾಪುರ ಹಳ್ಳದ ನೀರನ್ನು ಕನಕನಾಲೆಗೆ ತಿರುಗಿಸುವ ಯೋಜನೆ ಕೈಬಿಡಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಹಾಗೂ ಮಸ್ಕಿ ನಾಲಾ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಗುರುವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರ ಬಳಿಯಿಂದ ದಲಿತ ಸಂಘರ್ಷ ಸಮಿತಿ ಸದಸ್ಯರು, ಮಸ್ಕಿ ನಾಲಾ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನಾ ರ್ಯಾಲಿ ಆರಂಭಿಸಿ, ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಾ| ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆ ಬಳಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.

ದಲಿತ ಸಂಘರ್ಷ ಸಮಿತಿ ಮುಖಂಡ ಹನುಮಂತ ವೆಂಕಟಾಪುರ ಮಾತನಾಡಿ, ಮಸ್ಕಿ ಜಲಾಶಯ ನೀರಿನಿಂದ ಈ ಭಾಗದ ನೂರಾರು ರೈತರ ಬದುಕು ಹಸನಾಗಿದೆ. ಈ ಜಲಾಶಯದ ನೀರು ಅವಲಂಬಿಸಿ ರೈತರು ವಿವಿಧ ಬೆಳೆ ಬೆಳೆದು ಬದುಕು ಕಟ್ಟಿಕೊಂಡಿದ್ದಾರೆ. ಇದೀಗ ಏಕಾಏಕಿ ಈ ಜಲಾಶಯಕ್ಕೆ ನೀರು ತಂದು ಕೊಡುವ ನಾಗಲಾಪುರ ಹಳ್ಳದ ನೀರನ್ನು ಕನಕನಾಲೆ ಕಡೆಗೆ ತಿರುಗಿಸಿದರೆ ಮಸ್ಕಿ ಜಲಾಶಯ ನೀರಿನ ಕೊರತೆ ಎದುರಿಸಬೇಕಾಗುತ್ತದೆ. ಈ ಭಾಗದ ರೈತರಿಗೆ ತೊಂದರೆ ಆಗಲಿದೆ. ಈ ಕೂಡಲೇ ಫ್ಲಡ್‌ ಫ್ಲೋ ಯೋಜನೆ ಕೈಬಿಡಬೇಕೆಂದು ಆಗ್ರಹಿಸಿದರು.

ಮಲ್ಲಪ್ಪ ಅಂಕುಶದೊಡ್ಡಿ ಮಾತನಾಡಿ, ಕೃಷ್ಣ ನದಿಯಿಂದ ಕಸಬಾಲಿಂಗಸುಗೂರು ಹತ್ತಿರ ಹರಿಯುತ್ತಿರುವ ಕಾಲುವೆ ಮೂಲಕ ಮಸ್ಕಿ ಜಲಾಶಯಕ್ಕೆ ಶಾಶ್ವತ ಲಿಂಕ್‌ ಕಾಲುವೆ ನಿರ್ಮಿಸಬೇಕು. ಮಸ್ಕಿ ಜಲಾಶಯ ಅಭಿವೃದ್ಧಿಗೆ ಹಾಗೂ ಕೆನಾಲ್ ಆಧುನೀಕರಣಕ್ಕೆ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ಮುಖಂಡ ಶೇಖರಗೌಡ ಪಾಟೀಲ, ಶರಣಪ್ಪ ಕಾಟಗಲ್ಲ, ಮೌನೇಶ ನಾಯಕ, ವೆಂಕೋಬ ದಿನ್ನೆಭಾವಿ, ಶಿವಪುತ್ರಪ್ಪ ಮಾರಲದಿನ್ನಿ, ದಲಿತ ಸಂಘರ್ಷ ಸಮಿತಿ ಮುಖಂಡ ನಾಗಪ್ಪ ತತ್ತಿ, ಮಹಾದೇವಪ್ಪ ಪರಾಂಪುರ, ಮೌನೇಶ ಸುಲ್ತಾನಪುರ, ನಾಗರಾಜ ಕುಣಿಕೆಲ್ಲೂರ, ಸಂಪತ್‌ರಾಜ ನಂಜಲದಿನ್ನಿ, ನಾಗರಾಜ ಗುಡಗಲದಿನ್ನಿ, ತುರುಮುಂಡೆಪ್ಪ ಕಟ್ಟಿಮನಿ ಸೇರಿ ನೂರಾರು ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.