ಸಮಸ್ಯೆ ಸುಳಿಯಲ್ಲಿ ಸರಕಾರಿ ಶಾಲೆ
ಎಂ. ರಾಮಲದಿನ್ನಿ ಶಾಲೆೆ 17 ವಿದ್ಯಾರ್ಥಿಗಳಿಗೆ ಒಬ್ಬರೇ ಶಿಕ್ಷಕ •ಅಡುಗೆಗೆ ಪ್ರತ್ಯೇಕ ಕೊಠಡಿ ಇಲ್ಲ
Team Udayavani, Jul 27, 2019, 10:54 AM IST
ಮಸ್ಕಿ: ಎಂ.ರಾಮಲದಿನ್ನಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತರಗತಿ ಕೊಠಡಿಯಲ್ಲಿ ಅಡುಗೆ ತಯಾರಿಸುತ್ತಿರುವುದು.
ಮಸ್ಕಿ: ತಾಲೂಕಿನ ಹಾಲಾಪುರ ಗ್ರಾಪಂ ವ್ಯಾಪ್ತಿಯ ಎಂ. ರಾಮಲದಿನ್ನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹತ್ತಾರು ಸಮಸ್ಯೆಗಳಿಂದ ನಲಗುತ್ತಿದೆ.
ಪ್ರಸಕ್ತ ವರ್ಷ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ ಒಟ್ಟು 17 ವಿದ್ಯಾರ್ಥಿಗಳಿದ್ದು, ಒಬ್ಬರೇ ಶಿಕ್ಷಕರಿದ್ದಾರೆ. ಶಾಲೆಯಲ್ಲಿ ಬಿಸಿಯೂಟ ಅಡುಗೆ ತಯಾರಿಸಲು ಪ್ರತ್ಯೇಕ ಕೊಠಡಿ ಇಲ್ಲದ್ದರಿಂದ ತರಗತಿ ಕೊಠಡಿಯಲ್ಲೇ ಅಡುಗೆ ಮಾಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಬಿಸಿಯೂಟ ಮಾಡಲು ಮುಖ್ಯ ಅಡುಗೆದಾರರಿಲ್ಲ. ಸಹಾಯಕಿಯೊಬ್ಬರೇ ಬಿಸಿಯೂಟ ತಯಾರಿಸುತ್ತಿದ್ದಾರೆ. ಅವರು ಗೈರು ಹಾಜರಾದರೆ ಆದಿನ ವಿದ್ಯಾರ್ಥಿಗಳಿಗೆ ಬಿಸಿಯೂಟ ಇಲ್ಲ. ಮುಖ್ಯ ಅಡುಗೆ ಸಿಬ್ಬಂದಿ ನೇಮಿಸುವಂತೆ ಅಕ್ಷರ ದಾಸೋಹ ಅಧಿಕಾರಿಗೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮೇಲ್ಛಾವಣಿ ಕುಸಿತ: ಶಾಲೆ ಕೊಠಡಿ ನಿರ್ವಹಣೆ ಇಲ್ಲದೇ ಹಾಳಾಗುತ್ತಿದೆ. ಶಾಲಾ ಕೊಠಡಿಗಳನ್ನು ಸುಮಾರು ವರ್ಷಗಳ ಹಿಂದೆ ನಿರ್ಮಿಸಿದ್ದು, ಮೇಲ್ಛಾವಣಿ ಸಿಮೆಂಟ್ ಕಾಂಕ್ರಿಟ್ ಉದುರುತ್ತಿದೆ. ಮಳೆ ಬಂದರೆ ಮೇಲ್ಛಾವಣಿ ತಂಪು ಹಿಡಿದು ಕುಸಿಯುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಜೀವ ಭಯದಲ್ಲೇ ದಿನ ದೂಡುತ್ತಿದ್ದಾರೆ.
ಶೌಚಾಲಯ ದುರಸ್ತಿಗೆ ಒತ್ತಾಯ: ಶಾಲೆಯಲ್ಲಿ ನಿರ್ಮಿಸಿದ ಶೌಚಾಲಯ ಸಂಪೂರ್ಣ ಶಿಥಿಲಗೊಂಡಿದೆ. ಶೌಚಾಲಯ ದುರಸ್ತಿಗೊಳಿಸಿ ವಿದ್ಯಾರ್ಥಿ ಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Malpe: ಡ್ರಗ್ಸ್ ಪಾರ್ಸೆಲ್ ಹೆಸರಲ್ಲಿ ಬೆದರಿಸಿ 20 ಲ.ರೂ. ವಂಚನೆ
Udupi: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.