ರಾಜೀನಾಮೆ ನೀಡಿದ ಶಾಸಕರ ಪ್ರತಿಕೃತಿ ದಹನ

ಶಾಸಕರಿಂದ ಕ್ಷೇತ್ರದ ಮತದಾರರಿಗೆ ದ್ರೋಹ• ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

Team Udayavani, Jul 15, 2019, 11:12 AM IST

15-July-9

ಮಸ್ಕಿ: ಶಾಸಕರ ರಾಜೀನಾಮೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.

ಮಸ್ಕಿ: ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಕೆಲ ಶಾಸಕರು ಹಣ, ಸಚಿವ ಸ್ಥಾನದ ಆಸೆ, ಅಮಿಷಕ್ಕೆ ಬಲಿಯಾಗಿ ಮತದಾರರು ನೀಡಿದ ತೀರ್ಪಿಗೆ ಅಗೌರವ ತೋರಿ ರಾಜೀನಾಮೆ ನೀಡಿದ್ದನ್ನು ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ರವಿವಾರ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಶಾಸಕರ ಪ್ರತಿಕೃತಿ ದಹಿಸಿದರು.

ಪಟ್ಟಣದ ಹಳೆ ಬಸ್‌ ನಿಲ್ದಾಣದ ಅಂಬೇಡ್ಕರ್‌ ಪುತ್ಥಳಿ ಎದುರು ಪ್ರತಿಭಟನೆ ನಡೆಸಿದ ಪ್ರಗತಿಪರ ಸಂಘಟನೆಗಳ ಸದಸ್ಯರು, ಶಾಸಕರು ಆಮಿಷಕ್ಕೆ ಬಲಿಯಾಗಿ ತಮ್ಮ ಕ್ಷೇತ್ರದ ಮತದಾರರಿಗೆ ವಂಚಿಸಿದ್ದಾರೆ. ಶಾಸಕರ ವಿರುದ್ಧ ಸಂವಿಧಾನಾತ್ಮಕ ಮತ್ತು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಆರ್‌ವೈಎಫ್‌ ರಾಜ್ಯ ಸಂಚಾಲಕ ನಾಗರಾಜ ಪೂಜಾರ, ರಾಜ್ಯದಲ್ಲಿ ಭೀಕರ ಬರ ಎದುರಾಗಿದೆ. ಕೂಲಿ ಕಾರ್ಮಿಕರು, ರೈತರು, ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ನಿರುದ್ಯೋಗ ತಾಂಡವವಾಡುತ್ತಿದೆ. ರೈತರು, ಕೂಲಿ ಕಾರ್ಮಿಕರು ಮಹಾನಗರಗಳಿಗೆ ಗುಳೆ ಹೊರಟಿದ್ದಾರೆ. ಜಾನುವಾರುಗಳು ಮೇವು-ನೀರಿನ ಕೊರತೆಯಿಂದ ಬಳಲುತ್ತಿವೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಶಾಸಕರು ಕ್ಷೇತ್ರದ ಜನರ ಸಮಸ್ಯೆಗೆ ಸ್ಪಂದಿಸುವ ಬದಲು, ಹಣ, ಅಧಿಕಾರ, ಲಾಭ, ಸ್ವಾರ್ಥ ಹಿತಾಸಕ್ತಿಯಿಂದ ಜನಾದೇಶವನ್ನು ಧಿಕ್ಕರಿಸಿ ದಿಢೀರ್‌ ರಾಜೀನಾಮೆ ನೀಡಿರುವುದು ಖಂಡನೀಯ ಎಂದರು.

ಶಾಸಕರಿಗೆ ತಮ್ಮ ಕ್ಷೇತ್ರಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದಾಗಿದೆ. ರಾಜ್ಯದಲ್ಲಿ ಒಂದು ತೆರನಾದ ರಾಜಕೀಯ ಅರಾಜಕತೆ ಉಂಟಾಗಿದೆ. ಜನರ ಜೀವನಮಟ್ಟ ಸುಧಾರಣೆ ಮತ್ತು ಬದುಕಿಗೆ ಅವಶ್ಯವಿರುವ ಕಾನೂನುಗಳನ್ನು ಮಾಡಲು ಶಾಸನ ಸಭೆಗೆ ಶಾಸಕರನ್ನು ಆರಿಸಿ ಕಳಿಸಿದರೆ, ಅವರು ತಮ್ಮ ಸ್ವಾರ್ಥಕ್ಕೆ ರಾಜೀನಾಮೆ ಕೊಟ್ಟು ರೆಸಾರ್ಟ್‌ ರಾಜಕಾರಣದಲ್ಲಿ ತೊಡಗಿ ಮೋಜು, ಮಸ್ತಿ ಮಾಡುತ್ತಿರುವುದು ಜನತಂತ್ರ ಮತ್ತು ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಕ್ಷೇತ್ರದ ಮತದಾರರಿಗೆ ಮಾಡಿದ ದ್ರೋಹವಾಗಿದೆ ಎಂದರು.

ದಲಿತ ಸಾಹಿತಿ ಸಿ.ದಾನಪ್ಪ ನಿಲೋಗಲ್ ಮಾತನಾಡಿ, ರಾಜೀನಾಮೆ ಕೊಟ್ಟ ಪ್ರತಿಯೊಬ್ಬ ಶಾಸಕರು ಕುಂಟು ನೆಪಹೇಳುತ್ತಿದ್ದಾರೆ. ಆಸೆ, ಆಮಿಷಗಳಿಗೆ ಬಲಿಯಾಗಿ ತಮ್ಮ ಆರ್ಥಿಕ ವ್ಯವಹಾರಗಳ ಕಾರಣ ಹಾಗೂ ಲಾಭದ ಆಸೆಗೆ ರಾಜೀನಾಮೆ ಕೊಟ್ಟು ಜನರಿಗೆ ವಂಚಿಸಿದ್ದಾರೆ. ಜನಪರ ಕಾರಣಕ್ಕೆ ರಾಜೀನಾಮೆ ನೀಡಿದ ಬಗ್ಗೆ ಶಾಸಕರಿಗೆ ಸ್ಪಷ್ಟತೆ ಇದ್ದರೆ, ತಮ್ಮ ತಮ್ಮ ಕ್ಷೇತ್ರದಲ್ಲೇ ಉಳಿದುಕೊಂಡು ಜನರ ಅಹವಾಲುಗಳನ್ನು ಕೇಳಬೇಕಿತ್ತು. ಜನರ ಮಧ್ಯದಲ್ಲಿ ನಿಂತು ರಾಜಕಾರಣ ಮಾಡದೇ ರೆಸಾರ್ಟ್‌ನಲ್ಲಿ ಕಳ್ಳರಂತೆ ಅಡಗಿ ಕುಳಿತು ಬ್ಲ್ಯಾಕ್‌ವೆುೕಲ್ ರಾಜಕಾರಣ ಮಾಡುತ್ತಿದ್ದಾರೆ. ಜನವಿರೋಧಿ ಶಾಸಕರು ವ್ಯವಸ್ಥಿತವಾಗಿ ಹಣ ಕೊಳ್ಳೆ ಹೊಡೆಯಲು ಹೂಡಿರುವ ಯೋಜಿತ ತಂತ್ರವಾಗಿದೆ. ರಾಜೀನಾಮೆ ಕೊಟ್ಟು ರೆಸಾರ್ಟ್‌ ನಲ್ಲಿ ಅಡಗಿ ಕುಳಿತು ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಾಪಗೌಡರ ವಿರುದ್ಧ ಕಿಡಿ: ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಜನರ ಅಭಿಪ್ರಾಯ ಪಡೆದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿಕೆ ನೀಡಿದ್ದಾರೆ. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಸ್ಕಿ ಶಾಸಕರು 60,387 ಮತಗಳನ್ನು ಪಡೆದಿದ್ದಾರೆ. ಹಾಗಾದರೆ ಇವರು ಅಷ್ಟು ಮತದಾರರ ಒಪ್ಪಿಗೆ ಪಡೆದಿದ್ದಾರೆಯೇ? ಎಂದು ಪ್ರಶ್ನಿಸಿದರು. ತಮ್ಮ ವೈಯಕ್ತಿಕ ಲಾಭಕ್ಕಾಗಿ, ಕ್ಷೇತ್ರದ ಜನತೆಗೆ ದ್ರೋಹ ಬಗೆದಿದ್ದಾರೆ.

ಮೂರನೇ ಬಾರಿಗೆ ಶಾಸಕರು ಕನಿಷ್ಠ ಮಸ್ಕಿ ಪಟ್ಟಣಕ್ಕೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲು ವಿಫಲವಾಗಿದ್ದಾರೆ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಜನರು ಬರದಿಂದಾಗಿ ದಿನವೂ ಬೆಂಗಳೂರು ಸೇರಿದಂತೆ ಇನ್ನಿತರೆ ಮಹಾನಗರಗಳಿಗೆ ಉದ್ಯೋಗ ಅರಸಿ ಗುಳೆ ಹೋಗುತ್ತಿದ್ದಾರೆ. ರೆಸಾರ್ಟ್‌ ರಾಜಕಾರಣದಲ್ಲಿ ಬ್ಯುಸಿಯಾಗಿರುವ ಮಸ್ಕಿ ಶಾಸಕರು ಕನಿಷ್ಠ ಪಕ್ಷ ಬರ ನಿರ್ವಹಣೆ ಸಭೆ ನಡೆಸಿ, ಜನರನ್ನು ಅಹವಾಲು ಕೇಳಿಲ್ಲ. ಕ್ಷೇತ್ರಕ್ಕೆ ಬಂದ ಅನುದಾನವನ್ನೇ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದೇ ತಮ್ಮ ಅಧಿಕಾರದ ಆಸೆಗಾಗಿ ಈಗ ಜನರ ಹಿತವನ್ನು ಬಲಿಕೊಡಲು ಸಿದ್ಧರಾಗಿದ್ದಾರೆ. ಕ್ಷೇತ್ರದ ಎಲ್ಲ ಮತದಾರರ ಅಭಿಪ್ರಾಯ ಕೇಳಿ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಮಸ್ಕಿ ಶಾಸಕರು ಕ್ಷೇತ್ರದ ಜನರಿಗೆ ಅಪಮಾನ ಮಾಡಿದ್ದಾರೆ ಎಂದರು. ಎಸ್‌.ದೇವೇಂದ್ರಗೌಡ, ದೊಡ್ಡಪ್ಪ ಮುರಾರಿ, ಎಂ.ಗಂಗಾಧರ, ಎಂ.ಅನಿಲಕುಮಾರ, ಧರ್ಮರಾಜ ಗೋನಾಳ, ದಸ್ತಗಿರಿಸಾಬ, ನಜೀರ್‌ ಮಾರುತಿ ಜಿನ್ನಾಪುರ, ತಾಯಪ್ಪ ಮಸ್ಕಿ, ಯಂಕಪ್ಪ ಕೆಂಗಲ್, ಸಂತೋಷ ಹಿರೇದಿನ್ನಿ, ಹುಚ್ಚರಡ್ಡಿ ಹಿರೇದಿನ್ನಿ, ಗಂಗಾಧರ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.