ಇದು ಬಿಜೆಪಿ ದುಬಾರಿ ದರ್ಬಾರ್: ಹೆಬ್ಟಾಳಕರ
Team Udayavani, Oct 8, 2021, 3:35 PM IST
ಬೆಳಗಾವಿ: ತೈಲ ಬೆಲೆ ಏರಿಕೆ, ಅಡಿಗೆ ಅನಿಲ ಬೆಲೆ ಹೆಚ್ಚಳದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬೆಳಗಾವಿ ಗ್ರಾಮೀಣ ಶಾಸಕಿ ಮತ್ತು ಕೆಪಿಸಿಸಿ ವಕ್ತಾರರಾದ ಲಕ್ಷ್ಮಿ ಹೆಬ್ಟಾಳಕರ ಅವರು ಇದು ಬಿಜೆಪಿ ದುಬಾರಿ ದರ್ಬಾರ್ ಎಂದು ಟ್ವೀಟರ್ ಮೂಲಕ ಟೀಕಾ ಪ್ರಹಾರ ಮಾಡಿದ್ದಾರೆ.
ಕೇಂದ್ರ ಹಾಗು ರಾಜ್ಯ ಸರಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಹೆಬ್ಟಾಳಕರ ಹತ್ತು ಲಕ್ಷ ರೂ.ಗಿಂತಲೂ ಹೆಚ್ಚು ವಾರ್ಷಿಕ ಆದಾಯವಿರುವ, ಸಮರ್ಥ ಕುಟುಂಬಗಳು ತಮ್ಮ ಗ್ಯಾಸ್ ಸಬ್ಸಿಡಿ ಬಿಟ್ಟು ಕೊಡಿ, ಅದರಿಂದ ಅಡುಗೆ ಅನಿಲ ಖರೀದಿಸಲಾಗದ ಕುಟುಂಬಕ್ಕೆ ಉಚಿತ ಸಂಪರ್ಕ ಕಲ್ಪಿಸಬಹುದು ಎಂದು ಪ್ರಧಾನಿಯವರು ಮನವಿ ಮಾಡಿದ್ದರು. ಈಗ ನಿಜಕ್ಕೂ ಎಷ್ಟು ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕ ಸಿಕ್ಕಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಗೃಹ ಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ ಜನಸಾಮಾನ್ಯರು ತಮ್ಮ ಜೀವನ ನಡೆಸಲು ಮನೆಯಲ್ಲಿದ್ದ ಒಡವೆಗಳನ್ನು ಮಾರುವ ಸ್ಥಿತಿ ನಿರ್ಮಾಣವಾಗಿದೆ. ಅಚ್ಛೇದಿನ ಭರವಸೆ ನೀಡಿ, ಮನೆಯನ್ನೇ ಬರಿದಾಗಿಸುತ್ತಿದೆ ಬಿಜೆಪಿ ಸರ್ಕಾರ. ಬಡತನ, ಆರ್ಥಿಕ ಸಂಕಷ್ಟದ ಕಾರಣಕ್ಕೆ 1 ವರ್ಷದಲ್ಲಿ ರಾಜ್ಯದಲ್ಲಿ 850 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂಥ ಬಿಕ್ಕಟ್ಟಿನ ಸಮಯದಲ್ಲಿ ರಾಜ್ಯದ ಆರ್ಥಿಕತೆಗೆ ಚಾಲನೆ ನೀಡುವ ಕಾರ್ಯಕ್ರಮ ರೂಪಿಸಬೇಕಾದ ಸರ್ಕಾರ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಿದೆ ಎಂದು ಟೀಕಿಸಿದ್ದಾರೆ.
ಗ್ಯಾಸ್ ಸಿಲಿಂಡರ್ ಖರೀದಿಯ ಬಳಿಕ ಬರುತ್ತಿದ್ದ ಸರ್ಕಾರದ ಸಬ್ಸಿಡಿ ಹಣ ಖಾತೆಗೆ ಬರುವುದು ನಿಂತು ಸುಮಾರು ಎರಡು ವರ್ಷಗಳೇ ಕಳೆದಿವೆ. ಯಾರಿಗೂ ಏನೂ ತಿಳಿಸದೆ ಸರ್ಕಾರ ಸಬ್ಸಿಡಿ ನಿಲ್ಲಿಸಿದ್ದು ಏಕೆ? ಹಾಗಾದರೆ ಉಜ್ವಲ ಯೋಜನೆಯ ಪ್ರಯೋಜನವೇನು ಮೋದಿ ಅವರೇ ಎಂದು ಖಾರವಾಗಿ ಪ್ರಶ್ನಿಸಿರುವ ಹೆಬ್ಟಾಳಕರ, ಪ್ರತಿ ಲೀಟರ್ ಪೆಟ್ರೋಲ್ ನ ಮೂಲ ಬೆಲೆ 37 ರೂ. ಅದರ ಮೇಲೆ ಕೇಂದ್ರ ಸರ್ಕಾರ ವಿಧಿಸುವ ಅಬಕಾರಿ ಸುಂಕ 32.90 ರೂ. ರಾಜ್ಯಗಳು ವಿಧಿಸುವ ತೆರಿಗೆ ಸುಮಾರು 28 ರೂ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8 ರೂ. ಅಲ್ಲಿಗೆ ಪೆಟ್ರೋಲ್ ಬೆಲೆ 106ರೂ ದಾಟುತ್ತದೆ. ಬಿಜೆಪಿ ಸರಕಾರ ತೆರಿಗೆ ಹಣದ ಮೂಲಕ ಜನರ ಲೂಟಿಗಿಳಿದಿದೆ ಎಂದು ಹೇಳಿದ್ದಾರೆ.
ಅಡುಗೆ ಅನಿಲ ಬೆಲೆ 15 ರೂ. ಹೆಚ್ಚಳವಾಗಿದೆ. 14.2 ಕೆಜಿಯ ಸಿಲಿಂಡರ್ ಬೆಲೆ 902.5 ರೂ. ತಲುಪಿದೆ. ಕಳೆದ 2 ತಿಂಗಳಲ್ಲಿ ನಾಲ್ಕನೇ ಬಾರಿ ಗ್ಯಾಸ್ ಬೆಲೆ ಏರಿಕೆಯಾಗಿದೆ. ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಕೊಡುವುದಾಗಿ ಭರವಸೆ ನೀಡಿ, ಜನರ ಉಜ್ವಲ ಭವಿಷ್ಯವನ್ನೇ ಬಿಜೆಪಿ ಹಾಳು ಮಾಡಿದೆ. ಅಚ್ಛೇ ದಿನದ ಭರವಸೆ ನೀಡಿ, ಕೆಟ್ಟ ದಿನಗಳ ಅನುಭವ ಮಾಡಿಸುತ್ತಿದೆ ಎಂದು ಹೆಬ್ಟಾಳಕರ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.