ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಗ್ರಾಮೀಣ ಭಾಗದಲ್ಲಿ ಸಮರ್ಪಕ ನೀರು ಪೂರೈಕೆಗೆ ತಾಪಂ ಸದಸ್ಯರ ತಾಕೀತು
Team Udayavani, Sep 13, 2019, 3:50 PM IST
ಮೊಳಕಾಲ್ಮೂರು: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಿತು.
ಮೊಳಕಾಲ್ಮೂರು: ತಾಲೂಕಿನ ಸಮಗ್ರ ಅಭಿವೃದ್ಧಿ ಪರಿಶೀಲನೆಯ ಸಾಮಾನ್ಯ ಸಭೆಗೆ ಗೈರಾದ ತಾಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನ ಕೈಗೊಳ್ಳಬೇಕು ಎಂದು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರೇಷ್ಮೆ ವೀರೇಶ್ ಒತ್ತಾಯಿಸಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಬಹುತೇಕ ಸದಸ್ಯರು ರೇಷ್ಮೆ ವೀರೇಶ್ ಮಾತಿಗೆ ಧ್ವನಿಗೂಡಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಅಭಿಯಂತರ ಪವನ್ ಮಾತನಾಡಿ, ತಾಲೂಕಿನ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಕೊಳವೆಬಾವಿಗಳನ್ನು ಕೊರೆಸಿ ಪೈಪ್‌ಲೈನ್ ಕಾಮಗಾರಿ ಕೈಗೊಂಡು ಸಮರ್ಪಕವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.
ಮಧ್ಯಪ್ರವೇಶಿಸಿದ ಸದಸ್ಯರಾದ ಟಿ. ರೇವಣ್ಣ, ನರೇಂದ್ರಬಾಬು, ಎಸ್. ತಿಪ್ಪೇಸ್ವಾಮಿ , ಎ.ಕೆ. ಮಂಜುನಾಥ ಮತ್ತಿತರರು ತಮ್ಮ ಕ್ಷೇತ್ರ ವ್ಯಾಪ್ತಿಯ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿದೆ. ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ತಾಕೀತು ಮಾಡಿದರು.
ತಾಪಂ ಇಒ ಡಾ| ಶ್ರೀಧರ ಐ. ಬಾರಕೇರ್ ಮಾತನಾಡಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಕೊಳವೆಬಾವಿ ಕೊರೆಸಲಾಗಿದೆ. ಆದರ್ಶ ಶಾಲೆ ಸೇರಿದಂತೆ ತಾಲೂಕಿನ ನಾನಾ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುತ್ತಿದೆ. ತಾಲೂಕಿನಲ್ಲಿ ಉತ್ತಮ ಮಳೆಯಾಗದ ಕಾರಣ ಅಂತರ್ಜಲ ಕುಸಿತದಿಂದ ಪರಿಸ್ಥಿತಿ ಬಿಗಡಾಯಿಸಿದ್ದು, ಟ್ಯಾಂಕರ್ ನೀರು ಪೂರೈಕೆ ಮಾಡುವುದಾಗಿ ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಲಕ್ಷ್ಮೀಪ್ರಸನ್ನ ಮಾತನಾಡಿ ತಾಲೂಕಿನಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ಶೇಂಗಾ ಹಾಗೂ ಇನ್ನಿತರ ಬೆಳೆಗಳಿಗೆ ಹಾನಿಯಾಗುತ್ತಿದ್ದು ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸಲು ವರದಿ ನೀಡಲಾಗುವುದೆಂದು ತಿಳಿಸಿದರು. ತಾಪಂ ಸದಸ್ಯ ಟಿ.ರೇವಣ್ಣ ಮಾತನಾಡಿ, ಈಗಾಗಲೇ ತಾಲೂಕಿನಲ್ಲಿ ಬೆಳೆ ಹಾನಿಯಾಗಿರುವದರಿಂದ ಫಸಲ್ ಭಿಮಾ ಯೋಜನೆಯಲ್ಲಿ ಬೆಳೆ ಪರಿಹಾರ ಮತ್ತು ವಿಮೆ ನೀಡಲು ಸರಿಯಾಗಿ ಬೆಳೆ ಸಮೀಕ್ಷೆ ಮಾಡಿಲ್ಲ. ಯಾವುದೋ ಒಂದು ಸರ್ವೆ ನಂಬರಿನ ಜಮೀನಿನಲ್ಲಿ ಬೆಳೆ ಸಮೀಕ್ಷೆ ಮಾಡಿ ಇಡೀ ತಾಲೂಕಿನ ಬೆಳೆ ಉತ್ತಮವಾಗಿದೆ ಎಂದು ವರದಿ ನೀಡಿದ್ದರಿಂದ ಬಹುತೇಕ ರೈತರಿಗೆ ಬೆಳೆ ಪರಿಹಾರ ಮತ್ತು ವಿಮೆಯ ಸೌಲಭ್ಯ ಸಿಗದೆ ನಷ್ಟ ಅನುಭವಿಸುವಂತಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಅವೈಜ್ಞಾನಿಕ ನಿಯಮಗಳ ಬದಲಾಗಿ ಸರಿಯಾದ ಕ್ರಮದಿಂದ ಬೆಳೆ ಸಮೀಕ್ಷೆ ಮಾಡಬೇಕೆಂದು ಸೂಚನೆ ನೀಡಿದರು.
ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಲೋಕೇಶ್ ಮಾತನಾಡಿ, ತಾಲೂಕಿನಲ್ಲಿ 2016ನೇ ಸಾಲಿನಲ್ಲಿ ಒಣಗಿದ ತೆಂಗಿನ ಮರಗಳ ಸಮೀಕ್ಷೆ ನಡೆಸಲಾಗಿತ್ತು. 2,578 ತೆಂಗಿನ ಮರಗಳಿಗೆ ಹಾನಿಯಾಗಿದ್ದು, ಒಂದು ಮರಕ್ಕೆ 400 ರೂ.ನಂತೆ ಒಟ್ಟು 47 ಫಲಾನುಭವಿಗಳಿಗೆ ಪರಿಹಾರದ ಹಣ ಬಂದಿದೆ. ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದೆಂದು ತಿಳಿಸಿದರು. ತಾಲೂಕಿನಲ್ಲಿ ಹೆಚ್ಚು ಪ್ರಮಾಣದಲ್ಲಿ ತೆಂಗಿನ ಮರಗಳು ಹಾನಿಯಾಗಿದ್ದು, ಸರಿಯಾಗಿ ಸಮೀಕ್ಷೆ ನಡೆಸಿ ಸರಿಯಾದ ಪರಿಹಾರ ಕಲ್ಪಿಸಬೇಕೆಂದು ಸದಸ್ಯ ನರೇಂದ್ರಬಾಬು ತಾಕೀತು ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಸೋಮಶೇಖರ್ ಮಾತನಾಡಿ, ಶಿಕ್ಷಕರ ವರ್ಗಾವಣೆಯಿಂದ ತಾಲೂಕಿಗೆ ಸುಮಾರು 34 ಶಿಕ್ಷಕರು ಬಂದಿದ್ದಾರೆ. 13 ಶಿಕ್ಷಕರು ಹೊರ ತಾಲೂಕುಗಳಿಗೆ ಹೋಗಿದ್ದಾರೆ. ಶಿಕ್ಷಕರ ಕೊರತೆ ಇರುವ ಕಡೆ ಅತಿತಿ ಶಿಕ್ಷಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ತಾಪಂ ಅಧ್ಯಕ್ಷೆ ಎಚ್. ಲತಮ್ಮ, ಉಪಾಧ್ಯಕ್ಷೆ ತಿಮ್ಮಕ್ಕ, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.