ಸರ್ಕಾರಿ ಆಸ್ಪತ್ರೆಗೆ ಸೌಲಭ್ಯ ಮರೀಚಿಕೆ

ನಾಮಫಲಕದಲ್ಲಷ್ಟೇ 100 ಹಾಸಿಗೆಗಳ ಆಸ್ಪತ್ರೆ•ಇನ್ನೂ ಕೂಡಿ ಬಂದಿಲ್ಲ ಮೇಲ್ದರ್ಜೆ ಯೋಗ

Team Udayavani, Jun 10, 2019, 10:55 AM IST

10-Juen-9

ಮೊಳಕಾಲ್ಮೂರು: ಪಟ್ಟಣದ ಸರ್ಕಾರಿ ಆಸ್ಪತ್ರೆಯ ನಾಮಫಲಕದಲ್ಲಷ್ಟೇ 100 ಹಾಸಿಗೆಗಳ ಆಸ್ಪತ್ರೆ ಎಂದು ನಮೂದಿಸಿರುವುದು.

ಮೊಳಕಾಲ್ಮೂರು: ಪಟ್ಟಣದಲ್ಲಿ ಹೆಸರಿಗಷ್ಟೇ ನೂರು ಹಾಸಿಗೆಗಳ ಸರ್ಕಾರಿ ಆಸ್ಪತ್ರೆ ಇದೆ. ಆದರೆ ಉದ್ಘಾಟನೆಯಾಗಿ ಏಳು ವರ್ಷವಾದರೂ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಗಡಿ ಭಾಗದ ಜನರ ಆರೋಗ್ಯ ರಕ್ಷಣೆ ಸಲುವಾಗಿ ಸರ್ಕಾರ ಕೋಟ್ಯಂತರ ರೂ. ವೆಚ್ಚದಲ್ಲಿ ನೂರು ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿದೆ. ಆದರೆ ಅಗತ್ಯ ಸೌಲಭ್ಯ, ವೈದ್ಯರು ಹಾಗೂ ಸಿಬ್ಬಂದಿಯನ್ನು ಒದಗಿಸಿಲ್ಲ. ಈ ಆಸ್ಪತ್ರೆ ಕೇವಲ 50 ಹಾಸಿಗೆಗಳನ್ನು ಮಾತ್ರ ಹೊಂದಿದ್ದು, ಜಿಪಂ ವ್ಯಾಪ್ತಿಗೆ ಒಳಪಟ್ಟಿದೆ. ನೂರು ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿದಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡಲಿದೆ. ಆಗ ಮತ್ತಷ್ಟು ಸೌಲಭ್ಯಗಳು ದೊರೆಯಲಿವೆ.

ತಾಲೂಕಿನ ಬಡವರು ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ದೂರದ ನಗರ ಪ್ರದೇಶಗಳಿಗೆ ಹೋಗುವ ಅನಿವಾರ್ಯತೆ ಇದೆ. ಇದನ್ನು ತಪ್ಪಿಸಲು ನೂರು ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲಾಗಿತ್ತು. ಆದರೆ ಇನ್ನೂ ಮೇಲ್ದರ್ಜೆಗೇರದೇ ಇರುವುದರಿಂದ ಸೌಲಭ್ಯಗಳು ಮರೀಚಿಕೆಯಾಗಿವೆ.

ಈಗಿರುವ 50 ಹಾಸಿಗೆಗಳ ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ಚರ್ಮರೋಗ ತಜ್ಞರು, ಆಫೀಸ್‌ ಸೂಪರಿಡೆಂಡೆಂಟ್, ನರ್ಸಿಂಗ್‌ ಸೂಪರಿಡೆಂಡೆಂಟ್ (ಗ್ರೇಡ್‌-2), ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಕ್ಲರ್ಕ್‌ ಕಮ್‌ ಟೈಪಿಸ್ಟ್‌, ಸೀನಿಯರ್‌ ಫಾರ್ಮಸಿಸ್ಟ್‌, ಜೂನಿಯರ್‌ ಫಾರ್ಮಸಿಸ್ಟ್‌, ಸ್ಟಾಫ್‌ ನರ್ಸ್‌ ಹುದ್ದೆಗಳು ಭರ್ತಿಯಾಗಬೇಕಿದೆ. ದಂತ ವೈದ್ಯರು, ಇ.ಎನ್‌.ಟಿ ತಜ್ಞರು, ಫಿಜಿಷಿಯನ್‌, ಜನರಲ್ ಸರ್ಜನ್‌, 5 ಸ್ಟಾಫ್‌ ನರ್ಸ್‌ ಹಾಗೂ 10 ಜನ ನಾನ್‌ ಕ್ಲಿನಿಕ್‌ ಮತ್ತು 15 ಜನರು ಗ್ರೂಪ್‌ ಡಿ ಹುದ್ದೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಒಟ್ಟು 82 ಹುದ್ದೆಗಳ ಪೈಕಿ 27 ಜನರು ಕಾರ್ಯನಿರ್ವಹಿಸುತ್ತಿದ್ದಾರೆ.

ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿದಲ್ಲಿ ಹೆಚ್ಚುವರಿಯಾಗಿ ಕಾರ್ನಿಯಾ ತಜ್ಞರು, ರೆಡಿಯಾಲಜಿಸ್ಟ್‌, ಸೀನಿಯರ್‌ ಡೆಂಟಲ್ ತಜ್ಞ, ಸೀನಿಯರ್‌ ಫಾರ್ಮಸಿಸ್ಟ್‌, ತುರ್ತು ಸೇವಾ ತಜ್ಞರು, ಸ್ಥಳೀಯ ನಿವಾಸಿ ವೈದ್ಯಾಧಿಕಾರಿ, ಸೀನಿಯರ್‌ ಎಕ್ಸ್‌ರೇ ತಜ್ಞರು, ಬ್ಲಿಡ್‌ ಬ್ಯಾಂಕ್‌ ತಜ್ಞರು, ತೀವ್ರ ನಿಗಾ ಘಟಕದ ತಜ್ಞ, ‘ಡಿ’ ದರ್ಜೆ ನೌಕರರು, ಶುಶ್ರೂಷಕರು, ಡಯಾಲಿಸಿಸ್‌ ಸಿಬ್ಬಂದಿಗಳನ್ನು ಪಡೆಯಬಹುದು. ಅಲ್ಲದೆ ಎರಡು ಆ್ಯಂಬುಲೆನ್ಸ್‌ ಹಾಗೂ ಶವ ಸಾಗಣೆ ವಾಹನ ಸೌಲಭ್ಯವೂ ಸಿಗುತ್ತದೆ. ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಸಂಬಂಧಿಸಿದವರು ಇಚ್ಛಾಶಕ್ತಿ ತೋರಬೇಕಿದೆ.

ಈ ಭಾಗದ ಬಡವರು ಸಣ್ಣ ಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ಬೆಂಗಳೂರು ಆಸ್ಪತ್ರೆಗಳಿಗೆ ಹೋಗಬೇಕಿದೆ. ಆದ್ದರಿಂದ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು.
ಕೆ.ಜೆ. ಜಯಲಕ್ಷ್ಮೀ,
ಪ್ರೇರಣಾ ಸಂಸ್ಥೆ, ಮೊಳಕಾಲ್ಮೂರು

ಸರ್ಕಾರಿ ಆಸ್ಪತ್ರೆಯನ್ನು ನೂರು ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಅನುಮತಿ ನೀಡಿದರೆ ಈ ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಸೇವೆ ದೊರೆಯಲಿದೆ.
ಡಾ| ತುಳಸಿರಂಗನಾಥ,
ತಾಲೂಕು ಆರೋಗ್ಯಾಧಿಕಾರಿ

ಸರ್ಕಾರದ ಗಮನಕ್ಕೆ ತಂದು ಈ ಆಸ್ಪತ್ರೆಯನ್ನು ನೂರು ಹಾಸಿಗೆಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಪ್ರಯತ್ನ ಮಾಡುತ್ತೇನೆ. ಈ ಭಾಗದ ಬಡ ಕುಟುಂಬಗಳಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತೇನೆ.
ಬಿ. ಶ್ರೀರಾಮುಲು, ಶಾಸಕರು

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.