ಬಾಲಕಿಯರ ಬಿಸಿಎಂ ಹಾಸ್ಟೆಲ್ ನಿರುಪಯುಕ್ತ ?
ಪಟ್ಟಣದಿಂದ 3 ಕಿಮೀ ದೂರದಲ್ಲಿ ನಿರ್ಮಾಣವಿದ್ಯಾರ್ಥಿನಿಯರ ಸಂಚಾರಕ್ಕೂತೊಂದರೆ
Team Udayavani, Nov 18, 2019, 1:02 PM IST
ಎಸ್.ರಾಜಶೇಖರ
ಮೊಳಕಾಲ್ಮೂರು: ಪಟ್ಟಣದ ಹೊರ ವಲಯದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿಯಲ್ಲಿ 2.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಾಲಕಿಯರ ಬಿಸಿಎಂ ಹಾಸ್ಟೆಲ್ ಕಟ್ಟಡವು ವಿದ್ಯಾರ್ಥಿಗಳ ಬಳಕೆಗೆ ಬಾರದೆ ನಿರುಪಯುಕ್ತವಾಗಲಿದೆ.
ಪಟ್ಟಣದಿಂದ ಸುಮಾರು 3 ಕಿಮೀಗೂ ಹೆಚ್ಚಿನ ದೂರದಲ್ಲಿರುವ ನಿರ್ಮಾಣವಾಗುತ್ತಿರುವ ನೂತನ ಸರ್ಕಾರಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ಕಾಲೇಜ್ ಹಾಸ್ಟೆಲ್ ಕಟ್ಟಡವು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಉಪಯೋಗಕ್ಕೆ ಬಾರದೆ ವ್ಯರ್ಥವಾಗುವ ಸಾಧ್ಯತೆ ಹೆಚ್ಚಾಗಿದೆ.
ತಾಲೂಕು ಕೇಂದ್ರ ಸ್ಥಾನವಾದ ಪಟ್ಟಣದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಪಪೂ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. ಗ್ರಾಮೀಣ ಪ್ರದೇಶದ ಬಿಸಿಎಂನ ಕಾಲೇಜು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಯಾವುದೇ ವಿದ್ಯಾರ್ಥಿ ನಿಲಯಗಳ ಸೌಲಭ್ಯದಿಂದ ವಂಚಿತವಾಗಿದೆ.
ಇತ್ತೀಚಿನ ದಿನಗಳಲ್ಲಿ 3 ಕಿಮೀಗೂ ಹೆಚ್ಚಿನ ದೂರದಲ್ಲಿ ಬಿಸಿಎಂ ಇಲಾಖೆಯಿಂದ 2.75 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಹಂತದಲ್ಲಿದೆ. ಈ ಹಾಸ್ಟೆಲ್ 3 ಕಿಮೀಗೂ ಹೆಚ್ಚಿನ ದೂರದಲ್ಲಿರುವುದರಿಂದ ಪಟ್ಟಣದ ಕಾಲೇಜುಗಳಿಗೆ ನಿತ್ಯವೂ ಬಾಲಕಿಯರು ಸಕಾಲಕ್ಕೆ ಹೋಗಲು ಕಷ್ಟಸಾಧ್ಯವಾಗಲಿದೆ.
ಪಟ್ಟಣದಿಂದ 3 ಕಿಮೀ ದೂರದಲ್ಲಿರುವ ಪಟ್ಟಣದ ಕಾಲೇಜುಗಳಿಗೆ ಹೋಗಲು ಪ್ರೌಢಾವಸ್ಥೆಯಲ್ಲಿರುವ ಬಾಲಕಿಯರಿಗೆ ಯಾವುದೇ ಉಚಿತ ವಾಹನದ ಸೌಲಭ್ಯವಿರುವುದಿಲ್ಲದಿರುವುದರಿಂದ ನಿತ್ಯ ಸಕಾಲಕ್ಕೆ ನಡೆದುಕೊಂಡು ಹೋಗಿ ಬರಲು ದುಸ್ಸಾಹಸವೇ ಸರಿ.
ನಿರ್ಮಾಣ ಹಂತದಲ್ಲಿರುವ ಬಾಲಕಿಯರ ಬಿಸಿಎಂನ ಕಾಲೇಜು ಹಾಸ್ಟೆಲ್ ಕಟ್ಟಡವು ಹತ್ತಿರದ ಮೊರಾರ್ಜಿ ವಸತಿ ಶಾಲೆಯ ಬಳಿಯಲ್ಲಿದ್ದರೂ ಯಾವುದೇ ರಕ್ಷಣೆಯಿಲ್ಲದೆ ಗುಡ್ಡಗಾಡು ಪ್ರದೇಶಕ್ಕೆ ಪ್ರೌಢಾವಸ್ಥೆಯಲ್ಲಿರುವ ಬಾಲಕಿಯರನ್ನು ಕಳುಹಿಸುವುದು ಅಪಾಯಕಾರಿಯಾಗಿದೆ.
ಈಗಾಗಲೇ ಬಾಲಕಿಯರ ಬಿ.ಸಿ.ಎಂ ಕಾಲೇಜು ಹಾಸ್ಟೆಲ್ ಹೆಚ್ಚಿನ ಜನಸಂದಣಿಯಲ್ಲಿರುವ ಪಟ್ಟಣದ ದಾಸರಹಟ್ಟಿಯಲ್ಲಿ ಖಾಸಗಿ ಕಟ್ಟಡದಲ್ಲಿರುವುದರಿಂದ ಯಾವುದೇ ಅನಾಹುತಗಳಾಗದಂತೆ ತಡೆಯಬಹುದಾಗಿದೆ. ಆದರೆ 3 ಕಿಮೀ ದೂರದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿಯಲ್ಲಿ ನಿರ್ಮಾಣವಾಗಲಿರುವ ಬಾಲಕಿಯರ ಬಿಸಿಎಂನ ಕಾಲೇಜು ಹಾಸ್ಟೆಲ್ ನಿಂದ ಪಟ್ಟಣದಲ್ಲಿರುವ ಕಾಲೇಜುಗಳಿಗೆ ಹೆಣ್ಣು ಮಕ್ಕಳು ಹೋಗಿ ಬರುವಾಗ ಎಂತಹ ದುಷ್ಕೃತ್ಯಗಳು ಸಂಭವಿಸಬಹುದೆಂದು ಊಹಿಸಿಕೊಳ್ಳುವುದು ಅಸಾಧ್ಯ.
ಒಂದು ವೇಳೆ ಜಾಗದ ಕೊರತೆ ನೆಪವೊಡ್ಡಿ ಇಲ್ಲಿಯೇ ಬಾಲಕಿಯರ ಬಿ.ಸಿ.ಎಂ ನ ಕಾಲೇಜು ಹಾಸ್ಟೆಲ್ ನಿರ್ಮಿಸಿ ಪ್ರಾರಂಭಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಆಗುವ ದುರ್ಘಟನೆಗಳಿಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೇ ನೇರ ಹೊಣೆಗಾರರಾಗುವ ಸಾಧ್ಯತೆ ಇದೆ. ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಬಾಲಕಿಯರ ಬಿಸಿಎಂ ಕಾಲೇಜು ಹಾಸ್ಟೆಲ್‌ನ್ನು ಪಟ್ಟಣ ವ್ಯಾಪ್ತಿಯಲ್ಲಿಯೇ ನಿರ್ಮಾಣ ಮಾಡಲು ತೀರ್ಮಾನ ಕೈಗೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.