ಸಮರ್ಪಕ ವಿದ್ಯುತ್ ಒದಗಿಸಿ
ನಾಗಲಾಪುರ 33 ಕೆವಿ ವಿದ್ಯುತ್ ಪ್ರಸರಣ ಕೇಂದ್ರ ಎದುರು ರೈತರ ಧರಣಿ
Team Udayavani, Aug 25, 2019, 1:29 PM IST
ಮುದಗಲ್ಲ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ನಾಗಲಾಪುರ 33 ಕೆವಿ ವಿದ್ಯುತ್ ಪ್ರಸರಣ ಕೇಂದ್ರದ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಮುದಗಲ್ಲ: ಪದೇಪದೇ ವಿದ್ಯುತ್ ಕಡಿತದಿಂದ ರೋಸಿ ಹೋದ ನಾಗಲಾಪುರ ಗ್ರಾಮಸ್ಥರು ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಗ್ರಾಮದಲ್ಲಿನ 33 ಕೆವಿ ವಿದ್ಯುತ್ ಪ್ರಸರಣ ಕೇಂದ್ರದ ಎದುರಿಗೆ ಶನಿವಾರ ಪ್ರತಿಭಟನೆ ನಡೆಸಿದರು.
ಕಳೆದ ಒಂದು ವರ್ಷದಿಂದ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ನಿಂತಿಲ್ಲ, ಜೆಸ್ಕಾಂ ಅಧಿಕಾರಿಗಳಿಗೆ ಕೇಳಿದರು ಲೈನ್ ಟ್ರಿಪ್, ಲೈನ್ ಫಾಲ್ಟ್ , ಜಂಪ್ ಕಟ್ ಆಗಿದೆ, ಲೈನ್ ಕಟ್ಟಾಗಿದೆ ಎಂಬ ಉತ್ತರ ನೀಡುತ್ತಾರೆ. ನಾಗಲಾಪುರ ಪ್ರಸರಣ ಕೇಂದ್ರದಿಂದ ಸಿಂಧನೂರು, ಮಸ್ಕಿ ತಾಲೂಕಿನ ಹಳ್ಳಿಗಳಲ್ಲದೇ ಕೊಪ್ಪಳ ಜಿಲ್ಲೆಯ ಹಳ್ಳಿಗಳಿಗೂ ವಿದ್ಯುತ್ ಒದಗಿಸಲಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಪದೇಪದೆ ವಿದ್ಯುತ್ ಕೈಕೊಡುತ್ತಿದೆ. ಆಯಾ ತಾಲೂಕಿನ ಹಳ್ಳಿಗಳಿಗೆ ಬೇರೆ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಹಿಂದೆ ಎರಡ್ಮೂರು ಬಾರಿ ಪ್ರತಿಭಟನೆಗೆ ಮುಂದಾದಾಗ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೆ ಸಮಸ್ಯೆ ಬಗೆಹರಿಸಿಲ್ಲ, ಈಗ ಒಂದು ವಾರದಿಂದ ನಿರಂತರ ಜ್ಯೋತಿ ಲೈನ್ ಹಾಗೂ ರೈತರ ಪಂಪ್‌ಸೆಟ್‌ಗೆ ವಿದ್ಯುತ್ ಇಲ್ಲದೇ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಅಧಿಕಾರಿಗಳು ಬರುವರೆಗೆ ಪ್ರತಿಭಟನೆ ಹಿಂಪಡೆಯುವದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ಮೆದಕಿನಾಳ ಸೆಕ್ಷನ್ ವಿಭಾಗವನ್ನು ನಾಗಲಾಪುರ ಸೆಕ್ಷನ್‌ನಿಂದ ಬೇರ್ಪಡಿಸಬೇಕು ಎಂದು ಗ್ರಾಪಂ ಸದಸ್ಯ ಲಕ್ಷ್ಮಣ ರಾಠೊಡ ಆಗ್ರಹಿಸಿದರು.
ಲಿಂಗಸುಗೂರ ಜಿಸ್ಕಾಂ ಎಇಇ ಬನ್ನಪ್ಪ ಕರಿಬಂಟನಾಳ ಸ್ಥಳಕ್ಕೆ ಆಗಮಿಸಿ ಕನ್ನಾಳ ಲೈನ್ ತೆರವುಗೊಳಿಸಿ ವಿದ್ಯುತ್ ಸಂಪರ್ಕ ನೀಡಿದ ಬಳಿಕ ಮತ್ತು ಧರಣಿ ನಿರತರೊಂದಿಗೆ ಮಾತನಾಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರಿಂದ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.
ಗ್ರಾಪಂ ಸದಸ್ಯರಾದ ಲಕ್ಷ್ಮಣ ರಾಠೊಡ, ಛತ್ರಪ್ಪ ಪೂಜಾರಿ, ಶಿವನಗೌಡ ಪೊಲೀಸ್ ಪಾಟೀಲ, ತಾಪಂ ಮಾಜಿ ಸದಸ್ಯ ಶರಣಪ್ಪ ಮಸ್ಕಿ, ಪ್ರಾಂತ ರೈತ ಸಂಘದ ಮುಖಂಡ ಆಂಜನೇಯ, ರಾಮಣ್ಣ ಗೌಂಡಿ, ಯಂಕಪ್ಪ ಒಡ್ಡರ್, ಬಸವರಾಜ, ಬಸವರಾಜ ಗೌಂಡಿ, ಯಮನೂರ, ಪ್ರಕಾಶ, ಬಾಲನಗೌಡ, ವೀರೇಶ, ಶ್ರೀಕಾಂತಗೌಡ ಗುತ್ತೆದಾರ, ದ್ಯಾಮಣ್ಣ ಗೌಂಡಿ, ಮುತ್ತಣ್ಣ, ಗ್ಯಾನನಗೌಡ, ಜಗನ್ನಾಥ, ಶಿವು ಸೇರಿದಂತೆ ಅನೇಕರು ಇದ್ದರು.
ನಾಗಲಾಪುರ 33 ಕೆವಿ ವಿದ್ಯುತ್ ಪ್ರಸರಣ ಕೇಂದ್ರದಿಂದ ಮಸ್ಕಿ ತಾಲೂಕಿನ ಹಳ್ಳಿಗಳಿಗೆ ವಿದ್ಯುತ್ ಪೂರೈಸಲಾಗಿದೆ. ಅಲ್ಲಿನ ಲೈನ್‌ಮನ್‌ಗಳು ಸಮಸ್ಯೆಗಳನ್ನು ಬೇಗ ಪರಿಹರಸದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ.
•ಬನ್ನೆಪ್ಪ ಕರಿಬಂಟನಾಳ,
ಜೆಸ್ಕಾಂ ಕಾರ್ಯಪಾಲನಾ ಅಭಿಯಂತರ,
ಲಿಂಗಸುಗೂರ ಉಪವಿಭಾಗ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.