ನೀರಿಗಾಗಿ ಪುರಸಭೆಗೆ ಮುತ್ತಿಗೆ
ವೆಂಕಟರಾಯನಪೇಟೆಗೆ ಸೌಲಭ್ಯ ಕಲ್ಪಿಸುವಲ್ಲಿ ಪುರಸಭೆ ನಿರ್ಲಕ್ಷ್ಯ: ಆರೋಪ
Team Udayavani, Sep 12, 2019, 3:21 PM IST
ಮುದಗಲ್ಲ: ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಪುರಸಭೆ ಎದುರು ಧರಣಿ ನಡೆಸಿದ 13ನೇ ವಾರ್ಡ್ ನಿವಾಸಿಗಳು.
ಮುದಗಲ್ಲ: ಪಟ್ಟಣದ ವೆಂಕಟರಾಯನಪೇಟೆಯಲ್ಲಿ ಕುಡಿಯುವ ನೀರು, ಬೀದಿ ದೀಪಗಳ ವ್ಯವಸ್ಥೆಗೆ ಪುರಸಭೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ವಾರ್ಡ್ ನಿವಾಸಿಗಳು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪಟ್ಟಣದ ವೆಂಕಟರಾಯನ ಪೇಟೆ ವಾರ್ಡ್ ನಂ. 13ರ ಪುರಸಭೆ ಸದಸ್ಯೆ ಪತಿ ಕರಿಯಪ್ಪ ಯಾದವ ಹಾಗೂ ಮಾಜಿ ಸದಸ್ಯೆ ಪತಿ ರಾಮು ಯಾದವ ನೇತೃತ್ವದಲ್ಲಿ ನಿವಾಸಿಗಳು ಪುರಸಭೆಗೆ ಮುತ್ತಿಗೆ ಹಾಕಿದರು.
ಮೊಹರಂ ನಿಮಿತ್ತ ಪುರಸಭೆ ಅಧಿಕಾರಿಗಳು ಎಲ್ಲೆಡೆ ಬೀದಿ ದೀಪ, ಕುಡಿಯುವ ನೀರು ಸೇರಿ ಅಗತ್ಯ ಅಭಿವೃದ್ಧಿ ಕಾಮಗಾರಿ ಮಾಡಿದ್ದಾರೆ. ಆದರೆ ನಮ್ಮ ವಾರ್ಡ್‌ನಲ್ಲಿ ಯಾವದೇ ರೀತಿಯ ಸಮಸ್ಯೆಗೆ ಪುರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪುರಸಭೆ ಮುಖ್ಯಾಧಿಕಾರಿ ಆಗಮಿಸಿ ಸಮಸ್ಯೆ ಆಲಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಈ ವೇಳೆ ಕಚೇರಿ ವ್ಯವಸ್ಥಾಪಕ ಮಲ್ಲಿಕಾರ್ಜುನ, ಕಿರಿಯ ಅಭಿಯಂತರ ಕೃಷ್ಣಾ ಮತ್ತು ಕುಡಿಯುವ ನೀರು ಸರಬರಾಜು ಮುಖ್ಯಸ್ಥ ರಂಗನಾಥ ತಳವಾರ ಸ್ಥಳಕ್ಕೆ ಆಗಮಿಸಿ ಧರಣಿ ನಿರತರಿಗೆ ಸಮಜಾಯಿಸಿ ನೀಡಲು ಮುಂದಾದರು. ಆದರೆ ಧರಣಿ ನಿರತರು ಕಿರಿಯ ಅಭಿಯಂತರರ ಕಾರ್ಯವೇನು, ನೀವ್ಯಾಕೆ ತಾರತಮ್ಯ ನೀತಿ ಅನುಸರಿಸುತ್ತಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು. ನಂತರ ಮುಖ್ಯಾಧಿಕಾರಿ ಎನ್. ಮೂರ್ತಿ ಸದಸ್ಯೆಯ ಪತಿ ಕರಿಯಪ್ಪ ಯಾದವ ಅವರೊಂದಿಗೆ ದೂರವಾಣಿ ಮುಖಾಂತರ ಮಾತನಾಡಿ ಒಂದು ದಿನ ಕಾಲಾವಕಾಶ ಕೊಡಿ ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಮುಖಂಡರಾದ ರಾಮು ಯಾದವ, ರಮೇಶ, ಗಂಗಾಧರ, ಕೃಷ್ಣಪ್ಪ, ಖಾಜಾಸಾಬ್, ಶಿವಪ್ಪ ಹುಲಗಿ, ಬಸವರಾಜ ಹಣಗಿ, ಭೀಮಣ್ಣ ದಾಸರ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.