ಹಳ್ಳಿಗಳಲ್ಲಿ ನೈರ್ಮಲ್ಯ ಮರೀಚಿಕೆ
ಜಾನುವಾರು ತೊಟ್ಟಿಯಲ್ಲಿನ ನೀರು ಕಲುಷಿತ • ಚರಂಡಿ ತುಂಬಿ ರಸ್ತೆಗೆ ಕೊಳಚೆ ನೀರು
Team Udayavani, Jul 14, 2019, 10:49 AM IST
ಮುದಗಲ್ಲ: ಕಸ್ತೂರಿ ತಾಂಡಾದಲ್ಲಿ ಬಾಪಣ್ಣನ ಮನೆ ಹತ್ತಿರ ಕಲುಷಿತ ನೀರು ನಿಂತು ಹಸಿರು ಬಣ್ಣಕ್ಕೆ ತಿರುಗಿದೆ.
ಮುದಗಲ್ಲ: ಸಮೀಪದ ತಲೇಖಾನ ಗ್ರಾಪಂ ವ್ಯಾಪ್ತಿ ಹಳ್ಳಿಗಳಲ್ಲಿ ನೈರ್ಮಲ್ಯ ಎಂಬುದು ಮರೀಚಿಕೆಯಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸದಸ್ಯರು ತಲೇಖಾನ ಸೇರಿ ಗ್ರಾಪಂ ವ್ಯಾಪ್ತಿಯ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದ್ದಾರೆ.
ಜಾನುವಾರುಗಳ ಕುಡಿಯುವ ನೀರಿನ ತೊಟ್ಟಿ, ನೀರು ಸಂಗ್ರಹ ಗುಮ್ಮಿಗಳ ಸ್ವಚ್ಛತೆ, ಪ್ಲಾಟ್ಫಾರಂ ಸ್ವಚ್ಛತೆ ಹಾಗೂ ವಿವಿಧ ಗ್ರಾಮ ಮತ್ತು ತಾಂಡಾಗಳಲ್ಲಿ ಎಲ್ಲೆಂದರಲ್ಲಿ ಕೊಳಚೆ ನೀರು ನಿಂತು, ಹಸಿರುಪಾಚಿ ಕಟ್ಟಿ ದುರ್ವಾಸನೆ ಹರಡಿದೆ. ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿವೆ. ಕುಡಿಯುವ ನೀರಿನ ಸರಬರಾಜು ಪೈಪ್‌ಲೈನ್‌ಗಳು ದುರಸ್ತಿಗೀಡಾಗಿದ್ದು, ಎಲ್ಲೆಂದರಲ್ಲಿ ಸೋರುತ್ತಿವೆ. ಹೀಗಾಗಿ ನಲ್ಲಿಗಳಲ್ಲಿ ಕಲುಷಿತ ನೀರು ಪೂರೈಕೆ ಆಗುತ್ತಿದೆ. ಈ ನೀರು ಸೇವಿಸಿದ ಜನ ವಿವಿಧ ಕಾಯಿಲೆಗಳಿಂದ ಬಳಲುವಂತಾಗಿದೆ ಎಂದು ದೇಸಾಯಿ ಭೋಗಾಪುರ ತಾಂಡಾ ನಿವಾಸಿಗಳು ಆರೋಪಿಸಿದ್ದಾರೆ.
ಪಾಪಣ್ಣನ ತಾಂಡಾದಲ್ಲಿ ಜಾನುವಾರುಗಳ ಕುಡಿಯುವ ನೀರಿನ ತೊಟ್ಟಿ ಸ್ವಚ್ಛತೆಗೊಳಿಸಿ ವರ್ಷ ಗತಿಸಿದೆ. ಗ್ರಾಪಂ ಆಡಳಿತ ಇತ್ತ ಹೊರಳಿ ನೋಡಿಲ್ಲ. ನೀರಿನಲ್ಲಿ ಹುಳುಗಳು ಉತ್ಪತಿಯಾಗಿವೆ. ಧೂಳು, ಕಸ-ಕಡ್ಡಿಗಳು ಬಿದ್ದು ನೀರು ಕಲುಷಿತವಾಗಿದೆ. ದುರ್ವಾಸನೆ ಬೀರಿದೆ. ಜಾನುವಾರುಗಳು ನೀರು ಕೂಡಿಯಲು ಹಿಂಜರಿಯುತ್ತಿವೆ. ಕಸ್ತೂರಿ ತಾಂಡಾದ ಬಾಪಣ್ಣನ ಮನೆ ಹತ್ತಿರ ನೀರು ಸಂಗ್ರಹವಾಗಿ ಹಸಿರು ಬಣ್ಣಕ್ಕೆ ತಿರುಗಿದ್ದು ತಾಂಡಾದ ತುಂಬ ವಾಸನೆ ಹರಡಿದೆ. ಗ್ರಾಪಂ ವತಿಯಿಂದ ಮರಂ ಹಾಕಿ ನೀರು ಮುಂದೆ ಹೋಗುವಂತೆ ಮಾಡಬೇಕೆಂದು ಮನವಿ ಮಾಡಿ ಸಾಕಾಗಿದೆ ಎಂದು ಬಾಪಣ್ಣ ಮತ್ತು ತಿಪ್ಪಣ್ಣ ಆರೋಪಿಸಿದ್ದಾರೆ.
ದೇಸಾಯಿ ಭೋಗಾಪುರ ಗ್ರಾಮದ ಸ.ಕಿ.ಪ್ರಾ. ಶಾಲೆ ಮುಂದಿನ ರಸ್ತೆಯಲ್ಲಿ ನೀರು ಹರಿದು ಪಾಚಿಗಟ್ಟಿದೆ. ಶಾಲೆಯ ಮಕ್ಕಳು ಅದೇ ನೀರಿನಲ್ಲಿ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಾನಪ್ಪ ಕಬಾಡರ್ ಮನೆಯ ಹಿಂದೆ ಚರಂಡಿ ತುಂಬಿ ಓಣಿಯ ಜನರಿಗೆ ತೊಂದರೆಯಾಗಿದೆ. ಹಡಗಲಿಯಲ್ಲಿ ಬಟ್ಟೆ, ಪಾತ್ರೆ ತೊಳೆಯುವ, ಬಚ್ಚಲ ನೀರು ರಸ್ತೆಗೆ ಹರಿಯುತ್ತಿದೆ. ಇದರಿಂದ ಗ್ರಾಮದಲ್ಲಿ ನೈರ್ಮಲ್ಯಹಾಳಾಗಿದೆ. ಹಡಗಲಿಯಿಂದ ಛತ್ತರ ರಾಮಜಿ ನಾಯಕ ತಾಂಡಾದವರೆಗೆ ಪಿಎಂಜಿಎಸ್‌ವೈ ಇಲಾಖೆ ಅಧಿಕಾರಿಗಳು ನಿರ್ಮಿಸುತ್ತಿರುವ ರಸ್ತೆ ಮಧ್ಯ ಕುಡಿಯುವ ನೀರಿನ ಪೈಪ್‌ಲೈನ್ ಸಿಕ್ಕಿಕೊಂಡಿದ್ದು, ರಸ್ತೆಯುದ್ದಕ್ಕೂ ಪೈಪ್‌ಲೈನ್ ಸೋರಿಕೆ ಆಗುತ್ತಿದ್ದು, ಈ ನೀರನ್ನೇ ಜನತೆ ಬಳಸುತ್ತಿದ್ದಾರೆ. ಸರಕಾರ ನೈರ್ಮಲ್ಯ ಕಾಪಾಡಲು 14ನೇ ಹಣಕಾಸು ಅನುದಾನ ಮತ್ತು ತೆರಿಗೆ ಸಂಗ್ರಹದಲ್ಲಿ ಅನುದಾನ ಮೀಸಲಿರಿಸಿದೆ. ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ಸಂಬಂದಿಸಿದವರಿಗೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಬೇಕು. ಗ್ರಾಮ ಮತ್ತು ತಾಂಡಾಗಳಲ್ಲಿ ಗಿಡಗಂಟಿಗಳು, ಪೊದೆಗಳು ಬೆಳೆದಿವೆ. ಎಲ್ಲೆಂದರಲ್ಲಿ ಕೊಳಚೆ ನೀರು ನೀರು ಸಂಗ್ರಹವಾಗಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಗ್ರಾಮ ಮತ್ತು ತಾಂಡಾಗಳ ಸ್ವಚ್ಛತೆಗೆ, ಚರಂಡಿ, ಸಿಸಿ ರಸ್ತೆಗಳ ನಿರ್ಮಾಣಕ್ಕೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು ಎಂದು ವೇಣ್ಯಪ್ಪನ ತಾಂಡಾದ ಗ್ರಾಪಂ ಸದಸ್ಯ ಗ್ಯಾನಪ್ಪ ಸಗರಪ್ಪ ಆಗ್ರಹಿಸಿದ್ದಾರೆ.
ಹಡಗಲಿ-ಛತ್ತರ ರಾಮಜಿ ನಾಯಕ ತಾಂಡಾ ಕುಡಿಯುವ ನೀರಿನ ಪೈಪ್‌ಲೈನ್ ರಸ್ತೆಯಲ್ಲಿ ಸಿಲುಕಿದೆ. ಸಂಬಂಧಿಸಿದ ಇಲಾಖೆಯವರು ಮರು ನಿರ್ಮಾಣ ಮಾಡಿಕೊಡುವುದಾಗಿ ಹೇಳಿದ್ದಾರೆ.
•ಮಂಜುಳಾ ಪಂಚಾಳ, ಅಧ್ಯಕ್ಷರು,
ಪಿಡಿಒ ತಲೇಖಾನ ಗ್ರಾಪಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.