5 ವರ್ಷವಾದ್ರೂ ಮುಗಿಯದ ಕಾಮಗಾರಿ
ಗುಣಮಟ್ಟದ ಕಟ್ಟಡ ನಿರ್ಮಿಸಲು ಒತ್ತಾಯ
Team Udayavani, Aug 24, 2019, 5:24 PM IST
ಮುಂಡಗೋಡ: ಕಳಪೆಯಾದ ಸಾಲಗಾಂವ್ ಗ್ರಾಪಂ ಕಾರ್ಯಾಲಯ.
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಪಂ ಕಚೇರಿ ಕಟ್ಟಡದ ಕಾಮಗಾರಿ 2015 ರಿಂದ ಪ್ರಾರಂಭಗೊಂಡು 2019 ಆದರೂ ಮುಗಿಸಿಲ್ಲ ಎಂದು ಆರೋಪಿಸಲಾಗಿದೆ.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಈ ಕಾಮಗಾರಿಗೆ 14ನೇ ಹಣಕಾಸಿನಲ್ಲಿ 8 ಲಕ್ಷ ರೂ. ಮಂಜೂರಾಗಿತ್ತು. ಇದಾದ ನಂತರ ಕಟ್ಟಡ ನಿಧಾನ ಗತಿಯಲ್ಲಿ ಸಾಗಿದೆ. ಮತ್ತೆ ಇದೇ ಕಾಮಗಾರಿಗೆ 14ನೇ ಹಣಕಾಸಿನಿಂದ 5 ಲಕ್ಷ ರೂ. ಮಂಜೂರು ಮಾಡಲು ತಿರ್ಮಾನಿಸಲಾಗಿದೆ. ಕಾರಣ ಈ ಕಟ್ಟಡ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರ್‌ಟಿಐ ಕಾರ್ಯಕರ್ತ ಸಂತೋಷ ತಳವಾರ ಈ ಹಿಂದೆ ಜಿಲ್ಲಾಧಿಕಾರಿಗಳ ವಾಟ್ಸ್‌ಆ್ಯಪ್‌ಗೆ ಕಳಪೆ ಗುಣಮಟ್ಟದ ಮರಳು ಬಳಸಿ ಕಾಮಗಾರಿ ನಡೆಸುತ್ತಿದ್ದಾರೆಂದು ದೂರಿದ್ದರು. ಆ ಮೇಲೆ ಜಿಲ್ಲಾಧಿಕಾರಿಯಿಂದ ಗ್ರಾಪಂ ಅಧಿಕಾರಿಗಳಿಗೆ ಪರೀಶಿಲನೆ ನಡೆಸಲು ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಗ್ರಾಪಂ ಅಧಿಕಾರಿ ಈ ಕಾಮಗಾರಿ ಯಾವುದೇ ರೀತಿ ಕಳಪೆಯಾಗಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದಾರೆ. ಹಾಗಾದರೆ ಕಾಮಗಾರಿ ಸ್ಥಳದಲ್ಲಿ ಕಳಪೆ ಗುಣಮಟ್ಟದ ಮರಳು ಯಾಕೆ ಇದೆ ಎಂಬುದು ತಿಳಿಯಬೇಕಾಗಿದೆ.
ಗ್ರಾಪಂ ಅಧಿಕಾರಿಗಳನ್ನು ವಿಚಾರಿಸಿದಾಗ ಗುತ್ತಿಗೆದಾರನಿಗೆ ಒಳ್ಳೆಯ ಗುಣಮಟ್ಟದ ಮರಳು ಬಳಸಲು ಸೂಚನೆ ನೀಡಲಾಗಿದೆ ಎಂದರು. ವಿಪರ್ಯಾಸ ಎಂದರೆ ಇಂತಹ ಅಧಿಕಾರಿಗಳ ಕುಮ್ಮಕ್ಕು ಗುತ್ತಿಗೆದಾರರಿಗೆ ಇರುವುದರಿಂದ ಕಳಪೆ ಕಾಮಗಾರಿ ನಡೆಯುತ್ತಿರುವದು ಸಾರ್ವಜನಿಕರಲ್ಲಿ ಅನುಮಾನ ಮೂಡಿಸುತ್ತಿದೆ. ಅಲ್ಲಿನ ಸಾರ್ವಜನಿಕರನ್ನು ಕೇಳಿದಾಗ ನಮ್ಮ ಗ್ರಾಪಂಗೆ ಇಂತಹ ಅಭಿವೃದ್ಧಿ ಅಧಿಕಾರಿಗಳ ಅವಶ್ಯಕತೆಯಿಲ್ಲ. ಈ ಕಳಪೆ ಕಾಮಗಾರಿಗೆ ಇವರೇ ನೇರ ಕಾರಣರಾಗಿದ್ದು ಇವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಅಕ್ರಮ ಮರಳು ಸಾಗಾಟ ಮಾಡುತ್ತಿದ್ದವರ ಮೇಲೆ ಬಿಗಿ ಕ್ರಮ ಜಾರಿಗೆ ತಂದಾಗಿನಿಂದ ಮರಳು ಸಾಗಾಟಕಾರರಿಗೆ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಗುಣಮಟ್ಟದ ಉಸುಕನ್ನು ಪರೀಶಿಲಿಸಿ ತೆಗೆದುಕೊಳ್ಳಬೇಕು ಎಂಬುದಾಗಿ ಸ್ಥಳೀಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.