ಮನೆ ನಿರ್ಮಾಣ ಬಾಕಿ ಹಣ ಪಾವತಿ ಶೀಘ್ರ

ಕುಸಿದ ಮನೆಗಳ ಸಮೀಕ್ಷೆ ಪೂರ್ಣಗೊಳಿಸಿಬಸವ ವಸತಿ ಯೋಜನೆ ಅಡಿ ಮನೆ ಮಂಜೂರಿಗೆ ಪ್ರಯತ್ನ

Team Udayavani, Dec 8, 2019, 4:00 PM IST

8-December-17

ಮೂಡಲಗಿ: ನೆರೆ ಸಂತ್ರಸ್ತರ ವಾಸಕ್ಕೆ ಶಾಶ್ವತ ಮನೆ ನಿರ್ಮಿಸಿಕೊಡಲು ಸರಕಾರ 5 ಲಕ್ಷ ರೂ. ಪರಿಹಾರ ನೀಡುತ್ತಿದೆ. ಈಗಾಗಲೇ ಸಂತ್ರಸ್ತರ ಕುಟುಂಬಗಳಿಗೆ ಒಂದು ಲಕ್ಷ ರೂ. ಅನುದಾನವನ್ನು ಸಂತ್ರಸ್ತರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಶಾಸಕ ಮತ್ತು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶನಿವಾರ ಮಾತನಾಡಿ, ಬಾಕಿ ಉಳಿದ ಪರಿಹಾರ ಮೊತ್ತವನ್ನು ಡಿಸೆಂಬರ ಅಂತ್ಯದೊಳಗೆ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಸಮೀಕ್ಷೆ ಮಾಡಿದಂತೆ ಎ. ಹಾಗೂ ಬಿ ಕೆಟಗರಿಯ ಸಮೀಕ್ಷೆಯಲ್ಲಿ ಯಾವುದೇ ಸಮಸ್ಯೆಗಳು ಉಂಟಾಗಿಲ್ಲ. ಆದರೆ ಸಿ. ಕೆಟಗರಿಯಲ್ಲಿ ಸಮಸ್ಯೆಗಳು ಉದ್ಭವಿಸಿದ್ದು, ಇದರ ಮನೆಗಳ ಯಾದಿಯನ್ನು ಪ್ರತ್ಯೇಕ ಮಾಡಬೇಕು. ಯಾರ ಒತ್ತಾಯಕ್ಕೂ ಮಣಿಯದೇ ಗುಪ್ತ ಸಮೀಕ್ಷೆಯನ್ನು ಮಾಡಿ ತಹಶೀಲ್ದಾರ್‌ ಮೂಲಕ ಬೈಲಹೊಂಗಲ ಉಪವಿಭಾಗಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಈಗಾಗಲೇ ಸಿ ಕೆಟಗರಿ ಹೊಂದಿದವರಿಗೆ ಸರಕಾರ 50 ಸಾವಿರ ರೂ. ನೀಡುತ್ತಿದೆ ಆದರೆ ಈ ಹಣ ಸಾಲದ್ದರಿಂದ ಸಂತ್ರಸ್ತರಿಗೆ ಪರ್ಯಾವಾಗಿ ಬಸವ ವಸತಿ ಯೋಜನೆ ಅಡಿ ಮನೆ ಮಂಜೂರು ಮಾಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಧಾರಾಕಾರ ಮಳೆಯಿಂದಾಗಿ ಮನೆ ಕುಸಿದಿದ್ದು, ಅಂತಹ ಮನೆಗಳ ಸಮೀಕ್ಷೆ ಕಾರ್ಯ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನದಿ ತೀರದ ಗ್ರಾಮಗಳ ರೈತರಿಗೆ ಸಮರ್ಪಕ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ. ಇದರಿಂದ ಅವರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ವಾರದೊಳಗೆ ವಿದ್ಯುತ್‌ ಸಂಪರ್ಕವನ್ನು ರೈತ ಸಮುದಾಯಕ್ಕೆ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.

ಸಾರ್ವಜನಿಕರ ಹಿತದೃಷ್ಟಿಯಿಂದ ಧರ್ಮಟ್ಟಿ ಹಳ್ಳದ ಸೇತುವೆ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭವಾಗಿದೆ. ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಸುಧಾರಣೆಗಾಗಿ ಅನುದಾನ ಬಂದಿದ್ದು, ಕಾಲ ಮಿತಿಯೊಳಗೆ ರಸ್ತೆ ಅಭಿವೃದ್ಧಿ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮೂಡಲಗಿ ಪಟ್ಟಣದಲ್ಲಿ ಶೀಘ್ರದಲ್ಲಿಯೇ ಮಿನಿ ವಿಧಾನ ಸೌಧ ಕಟ್ಟಡ, ಬಸ್‌ ಘಟಕ ಹಾಗೂ ಬಡ ಕುಟುಂಬಗಳಿಗೆ ಆಶ್ರಯ ಮನೆ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಮೂಡಲಗಿ ಪುರಸಭೆಗೆ ಮಂಜೂರಾದ ಎರಡು ಕೋಟಿ ರೂ. ಅನುದಾನದಲ್ಲಿ ರಸ್ತೆ ಹಾಗೂ ಒಳಚರಂಡಿ ನಿರ್ಮಿಸಲಾಗುವುದು ಎಂದು ಹೇಳಿದರು. ಜನವರಿ 10ರೊಳಗೆ ಸಂತ್ರಸ್ತ ಕುಟುಂಬಗಳಿಗೆ
ಮೂಲ ಸೌಕರ್ಯ ಕಲ್ಪಿಸಿಕೊಡಬೇಕು. ಧೈರ್ಯದಿಂದ ಕೆಲಸ ಮಾಡಿ. ಯಾರ ಪ್ರಭಾವಕ್ಕೂ ಒಳಗಾಗಬೇಡಿ. ತಿಂಗಳೊಳಗೆ ಸಂತ್ರಸ್ತರ ಕುಟುಂಬಗಳ ನೆರವಿಗೆ ಧಾವಿಸದಿದ್ದಲ್ಲಿ ಅದಕ್ಕೆ ಅಧಿಕಾರಿಗಳನ್ನೇ ನೇರ ಹೊಣೆಗಾರನ್ನಾಗಿ ಮಾಡಲಾಗುವುದೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ತಹಶೀಲ್ದಾರ್‌ ದಿಲ್‌ಶಾದ ಮಹಾಂತ ಸೇರಿದಂತೆ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

accident

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

accident

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.