8 ಪುಸ್ತಕ ಬಿಡುಗಡೆ ಮಾಡಿ ವಿಶ್ವ ದಾಖಲೆ
Team Udayavani, Jan 8, 2020, 3:01 PM IST
ಮುದ್ದೇಬಿಹಾಳ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಸಾಹಿತಿ ಶಿವಕುಮಾರ ಹಡಪದ ಅವರು ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ 8 ಪುಸ್ತಕಗಳನ್ನು ಏಕಕಾಲಕ್ಕೆ ಬಿಡುಗಡೆಗೊಳಿಸುವ ಮೂಲಕ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ.
ದೀಪಕ್ ಶರ್ಮಾ ನೇತೃತ್ವದ ಇನ್‌ಕ್ರೆಡಿಬಲ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಇವರ ಸಾಧನೆಯನ್ನು ಅಧಿಕೃತವಾಗಿ ದಾಖಲಿಸಲಾಗಿದೆ. ಈ ದಾಖಲೆಯನ್ನು ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲೂ ದಾಖಲಿಸಲಾಗಿದೆ. ಶಿವಕುಮಾರ ಅವರು 2018 ಡಿಸೆಂಬರ್ 2 ರಂದು ಶಬ್ದಮಣಿಹಾರ, ವಚನವಾರಿ, ಭಾವತರಂಗ, ನೆಲಮುಗಿಲು, ವಿದ್ಯಾರ್ಥಿ ಮಿತ್ರ, ಗೀತ ಲಹರಿ, ದಾರಿದೀಪ, ಭಾವಗಾಯನ ಎನ್ನುವ ಹೆಸರಿನ ಎಂಟು ಪುಸ್ತಕಗಳನ್ನು ಏಕಕಾಲಕ್ಕೆ ಬಿಡುಗಡೆಗೊಳಿಸಿದ್ದರು. ಇದನ್ನು ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಕರ್ನಾಟಕದ ದಾಖಲೆಯನ್ನಾಗಿ ಪರಿಗಣಿಸಲಾಗಿತ್ತು. ನಂತರ ಇನ್‌ಕ್ರೆಡಿಬಲ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ವಿಶ್ವದಾಖಲೆಯನ್ನಾಗಿ ಪರಿಗಣಿಸಲಾಗಿದೆ.
ಶಿವಕುಮಾರ ಅವರು ಕಳೆದ 30 ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಸದ್ಯ ಬಾವೂರ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ಸಹ ಶಿಕ್ಷಕರಾಗಿದ್ದಾರೆ.
ಮೆಚ್ಚುಗೆ: ಇವರ ಈ ಸಾಧನೆಗೆ ಬಿಇಒ ಎಸ್.ಡಿ.ಗಾಂಜಿ, ದೈಹಿಕ ಶಿಕ್ಷಣ ಪರಿವೀಕ್ಷಕ ಎಚ್.ಎಲ್.ಕರಡ್ಡಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Puttur: ರಸ್ತೆಯಲ್ಲಿ ಕಾರ್ಮಿಕನ ಮೃತದೇಹ; ಮೂವರ ಮೇಲೆ ಪ್ರಕರಣ ದಾಖಲು; ಓರ್ವ ವಶಕ್ಕೆ
Bantwala: ಕೆದಿಲ: ಸಿಡಿಲಿಗೆ ಮೃತಪಟ್ಟ ಬಾಲಕನಿಗೆ ಕಣ್ಣೀರ ವಿದಾಯ
Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
MUST WATCH
ಹೊಸ ಸೇರ್ಪಡೆ
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.