ಮೋದಿ ಆದರ್ಶ ಅಳವಡಿಸಿಕೊಳ್ಳಿ

ಕ್ಷೇತ್ರದ ಪ್ರತಿ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಕೆ: ನಡಹಳ್ಳಿ

Team Udayavani, Oct 19, 2019, 2:55 PM IST

19-October-15

ಮುದ್ದೇಬಿಹಾಳ: ನಮ್ಮ ಸುತ್ತಲಿನ, ನಮ್ಮ ಕಣ್ಣಿಗೆ ಕಾಣುವ ಕಸವನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳೆಲ್ಲ ಮನಸ್ಸು ಮಾಡಬೇಕು ಎಂದು ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾಲೇಜಿನ ಹೆಚ್ಚುವರಿ ಕೊಠಡಿಗಳ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಹಾಬಲಿಪುರಂನಲ್ಲಿ ನಡೆದ ಶೃಂಗ ಸಭೆ ವೇಳೆ ಅಲ್ಲಿನ ಸಮುದ್ರದ ದಂಡೆಯಲ್ಲಿದ್ದ ಪ್ಲಾಸ್ಟಿಕ್‌ ಅನ್ನು ಹೆಕ್ಕಿ ತೆಗೆಯುವ ಮೂಲಕ ಪ್ಲಾಸ್ಟಿಕ್‌ ವಿರೋ ಧಿ ದಿನ ಮತ್ತು ಸ್ವಚ್ಛತೆಯ ಮಹತ್ವದ ಸಂದೇಶವನ್ನು ದೇಶದ ಜನತೆಗೆ ನೀಡಿದರು. ಪ್ರತಿಯೊಬ್ಬ ವಿದ್ಯಾರ್ಥಿ ಪ್ರಧಾನಿ ಮೋದಿ ಅವರ ನಡವಳಿಕೆಯನ್ನು ಆದರ್ಶವಾಗಿಟ್ಟುಕೊಂಡು ಪಾಲಿಸಬೇಕು ಎಂದರು.

ಶೀಘ್ರದಲ್ಲೇ ಪ್ರತಿಯೊಂದು ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಚರ್ಚಿಸುತ್ತೇನೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಶಾಲಾ ಕೊಠಡಿಗಳ ದುರಸ್ತಿ, ನಿರ್ಮಾಣದ ಅನುಕೂಲ ದೊರೆತಿದ್ದು ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರಕ್ಕೆ ಎನ್ನುವ ಹೆಮ್ಮೆ ಇದೆ. ಈ ಕಾಲೇಜಿಗೆ 88.52 ಲಕ್ಷ ರೂ. ವೆಚ್ಚದಲ್ಲಿ 3 ಕೊಠಡಿ ಕಟ್ಟಲಾಗುತ್ತದೆ. ಮುಂದಿನ ದಿನಗಳಲ್ಲಿ ಇನ್ನೂ 6 ಕೊಠಡಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಕಾಲೇಜಿಗೆ ಅಗತ್ಯವಾಗಿರುವ ಕುಡಿವ ನೀರು ಮತ್ತು ಶೌಚಾಲಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಎಸ್‌.ಎಸ್‌. ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ತಾಲೂಕಾಧ್ಯಕ್ಷ ಎಂ.ಡಿ. ಕುಂಬಾರ, ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಅಶೋಕ ವನಹಳ್ಳಿ, ಬಸವರಾಜ ಮುರಾಳ, ಬಸಪ್ಪ ತಟ್ಟಿ, ಸದಾಶಿವ ಮಾಗಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಧುರೀಣರಾದ ಪ್ರಭು ಕಡಿ, ರಾಜೇಂದ್ರಗೌಡ ರಾಯಗೊಂಡ, ಹನುಮಂತ್ರಾಯ ದೇವರಳ್ಳಿ, ವಿಕ್ರಂ ಓಸ್ವಾಲ್‌, ರಾಮು ಪೂಜಾರಿ, ಅಪ್ಪುಗೌಡ ಮೈಲೇಶ್ವರ, ಶ್ರೀಶೈಲ ರಾಯಗೊಂಡ, ಗುತ್ತಿಗೆದಾರ ಜಿ.ಎಸ್‌. ದೋರನಳ್ಳಿ, ಪುರಸಭೆ ಮಾಜಿ ಸದಸ್ಯ ಶರಣು ಬೂದಿಹಾಳಮಠ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ಎಸ್‌.ಜಿ. ಲೊಟಗೇರಿ ನಿರೂಪಿಸಿದರು. ಇದಕ್ಕೂ ಮುನ್ನ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಶಾಸಕರು ವಿದ್ಯಾರ್ಥಿಗಳಿಂದಲೇ ನೆಲಕ್ಕೆ ಗುದ್ದಲಿ ಹಾಕಿಸಿ
ಭೂಮಿಪೂಜೆಗೆ ಅವಕಾಶ ಕಲ್ಪಿಸಿಕೊಟ್ಟರು.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.