ರಸ್ತೆಯಿಲ್ಲದ ಸ್ಥಳದಲ್ಲಿ ಶಾಲೆ ಬೇಕಿತ್ತಾ?: ನಡಹಳ್ಳಿ

ಶಾಲಾ ಕಟ್ಟಡವನ್ನು ವಿದ್ಯಾರ್ಥಿಗಳಿಗೆ ಮುಕ್ತಗೊಳಿಸಲು ಪ್ರಯತ್ನ

Team Udayavani, Dec 28, 2019, 1:36 PM IST

28-December-14

ಮುದ್ದೇಬಿಹಾಳ: ಪಟ್ಟಣದ ಹೊರ ವಲಯದಲ್ಲಿರುವ ಬಿದರಕುಂದಿ ಗ್ರಾಮದ ಹತ್ತಿರ ನಿರ್ಮಾಣಗೊಳ್ಳುತ್ತಿರುವ ಆರ್‌
ಎಂಎಸ್‌ಎ ಇಂಗ್ಲಿಷ್‌ ಮೀಡಿಯಂ ಆದರ್ಶ ವಿದ್ಯಾಲಯ ಕಟ್ಟಡ ಕಾಮಗಾರಿ ವಿಳಂಬಕ್ಕೆ ನಾನು ಹೊಣೆಗಾರನಲ್ಲ. ನಾನು ಶಾಸಕನಾಗುವುದಕ್ಕಿಂತ ಮೊದಲೇ ಕಟ್ಟಡದ ಕೆಲಸ ಪ್ರಾರಂಭಿಸಲಾಗಿತ್ತು.

ಸೂಕ್ತ ರಸ್ತೆ ಇಲ್ಲದ ಸ್ಥಳದಲ್ಲಿ ಶಾಲೆ ಕಟ್ಟಡಕ್ಕೆ ಜಾಗೆ ಆಯ್ದುಕೊಂಡಿರುವುದು ತಪ್ಪು. ಆದರೂ ಆದಷ್ಟು ಶೀಘ್ರ ಈ ಕಟ್ಟಡವನ್ನು ವಿದ್ಯಾರ್ಥಿಗಳಿಗೆ ಮುಕ್ತಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇನೆ ಎಂದು ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಹೇಳಿದ್ದಾರೆ.

ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಡಿ. ಗಾಂಜಿ, ಶಾಲೆಯ ಮುಖ್ಯಾಧ್ಯಾಪಕಿ ನೀಲಮ್ಮ ತೆಗ್ಗಿನಮಠ, ಎಸ್‌ಡಿಎಂಸಿ ಅಧ್ಯಕ್ಷ ಎಸ್‌. ಎಂ. ಚಿಲ್ಲಾಳಶೆಟ್ಟರ ವಕೀಲರು, ದೈಹಿಕ ಶಿಕ್ಷಣ ಪರಿವೀಕ್ಷಕ ಎಚ್‌.ಎಲ್‌.ಕರಡ್ಡಿ ಮತ್ತಿತರರೊಂದಿಗೆ ಶಾಲೆಗೆ ಭೇಟಿ ನೀಡಿ ಕಟ್ಟಡ ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

2009-10ನೇ ಸಾಲಿನಲ್ಲಿ 5 ಕೋಟಿ ರೂ. ಅನುದಾನದಲ್ಲಿ ಶಾಲೆ ಕಟ್ಟಡ ನಿರ್ಮಾಣದ ಗುತ್ತಿಗೆಯನ್ನು ನಾಗಾರ್ಜುನ ಕನ್‌ಸ್ಟ್ರಕ್ಷನ್‌ ಕಂಪನಿಗೆ (ಎನ್‌ಸಿಸಿ) ವಹಿಸಿ ಕೊಡಲಾಗಿದೆ. ಈ ಕಂಪನಿಯವರು ರಾಜ್ಯಾದ್ಯಂತ ಇಂಥ ಶಾಲೆಗಳ ಕಟ್ಟಡ ನಿರ್ಮಾಣ ಕಾಮಗಾರಿ ಗುತ್ತಿಗೆ ಹಿಡಿದಿದ್ದಾರೆ. ಶಾಲೆ ಕಟ್ಟಡ ನಿವೇಶನ ಸ್ಥಳಕ್ಕೆ ತೆರಳಲು ರಸ್ತೆಯೇ ಇರಲಿಲ್ಲ. ಆದರೂ ಅಕ್ಕಪಕ್ಕದ ಜಮೀನು ಮಾಲೀಕರ ಮನವೊಲಿಸಿ ಗುತ್ತಿಗೆದಾರರು ಹರಸಾಹಸಪಟ್ಟು ಕಟ್ಟಡ ನಿರ್ಮಿಸಿದ್ದಾರೆ. ಎನ್‌ ಸಿಸಿಯವರು ಕೋರ್ಟ್‌ಗೆ ಹೋಗಿದ್ದರಿಂದ ಕಟ್ಟಡ ಕಾಮಗಾರಿ ವಿಳಂಬವಾಗಿದೆ ಅನ್ನೋದನ್ನ ತಿಳಿದುಕೊಂಡೆ.

ಇದೇ ವೇಳೆ ರಸ್ತೆ ಸಮಸ್ಯೆ ಬಗ್ಗೆ ಗೊತ್ತಾಯಿತು ಎಂದರು. ಎನ್‌ಸಿಸಿಯವರ ಮನವೊಲಿಸಿ ಕಟ್ಟಡ ಕಾಮಗಾರಿ ಮುಂದುವರಿಸಲು ಕ್ರಮ ಕೈಗೊಂಡಿದ್ದೇನೆ. ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ರಸ್ತೆ ಒದಗಿಸಲು ಪ್ರಯತ್ನಿಸಿದ್ದೇನೆ. ಶಾಲೆ ಪಕ್ಕದ ಜಮೀನು ಮಾಲೀಕ ತಡಸದ ಎನ್ನುವವರು ತಮ್ಮ ಜಮೀನಿನಲ್ಲಿ ಶಾಲೆಗೆ ಹೋಗಲು ರಸ್ತೆ ಬಿಟ್ಟುಕೊಡಲು ಮುಂದೆ ಬಂದಿದ್ದಾರೆ.

ಮಾರುತಿನಗರ ಮೂಲಕ ತಾರನಾಳಗೆ ಹೋಗುವ ಮುಖ್ಯರಸ್ತೆಯಿಂದ ಶಾಲೆವರೆಗೆ ಅಂದಾಜು ಒಂದೂವರೆ ಕಿ.ಮೀ. ಸಂಪರ್ಕ ರಸ್ತೆಗೆ ಶೀಘ್ರ ಟೆಂಡರ್‌ ಕರೆದು ಡಾಂಬರ್‌ ರಸ್ತೆ ನಿರ್ಮಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಶಾಲಾ ಕಟ್ಟಡ ಪರಿಶೀಲಿಸುವ ವೇಳೆ ಹಲವೆಡೆ ಕಳಪೆ ಕಾಮಗಾರಿ ಮಾಡಿದ್ದು ಕಣ್ಣಿಗೆ ರಾಚುವಂತಿತ್ತು. ನೆಲಮಹಡಿ, ಮೊದಲ ಮಹಡಿಯಲ್ಲಿನ ಕೊಠಡಿಗಳು, ವಿವಿಧ ಮೂಲಸೌಕರ್ಯ ಮುಂತಾದವುಗಳನ್ನು ಪರಿಶೀಲಿಸಿದ ಶಾಸಕರು ಸ್ಥಳದಲ್ಲಿದ್ದ ಎನ್‌
ಸಿಸಿ ಸುಪರ್‌ವೈಜರ್‌ ಸುನೀಲ ಅವರನ್ನು ಕರೆದು ಎಲ್ಲೆಲ್ಲಿ ಕಳಪೆ ಕೆಲಸ ನಡೆದಿದೆಯೋ ಅದೆಲ್ಲವನ್ನು ಗುಣಮಟ್ಟದಲ್ಲಿ ನಿರ್ಮಿಸಲು ಗುತ್ತಿಗೆದಾರರಿಗೆ ತಿಳಿಸಿ ಸರಿಪಡಿಸುವಂತೆ ಸಲಹೆ ನೀಡಿದರು. ಈ ಕಟ್ಟಡಕ್ಕೆ ಸ್ವಂತ ನೀರಿನ ಮೂಲ ದೊರಕಿಸಿಕೊಡುವಂತೆ ಜೊತೆಗಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಪುರಸಭೆ ಮಾಜಿ ಸದಸ್ಯರಾದ ಮನೋಹರ ತುಪ್ಪದ, ರಾಜು ಹೊನ್ನುಟಗಿ, ಬಿಜೆಪಿ ಧುರೀಣ ಬಸವರಾಜ ಗುಳಬಾಳ, ಶಿಕ್ಷಕ ಸಂಗಮೇಶ ಸಜ್ಜನ, ನಾಗರಾಜ ಕನ್ನೊಳ್ಳಿ, ಬಸನಗೌಡ ಪಾಟೀಲ ನಡಹಳ್ಳಿ, ಪಿಎಸೈ ಮಲ್ಲಪ್ಪ ಮಡ್ಡಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

11

Puttur: ಬಸ್‌ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.