ಅಧಿಕಾರಿಗಳು-ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ತರಾಟೆಗೆ

ಪ್ರಭಾವಕ್ಕೊಳಗಾಗದೇ ಕೆಲಸ ಮಾಡುವಂತೆ ತಾಕೀತು

Team Udayavani, May 31, 2019, 4:53 PM IST

1-June-36

ಮುದ್ದೇಬಿಹಾಳ: ತಾಪಂ ಸಭಾ ಭವನದಲ್ಲಿ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು.

ಮುದ್ದೇಬಿಹಾಳ: ಬೇಜವಾಬ್ದಾರಿ ಅಧಿಕಾರಿಗಳು ಮತ್ತು ತಹಶೀಲ್ದಾರ್‌ ಕಚೇರಿ ಸಿಬ್ಬಂದಿಯನ್ನು ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಅವರು ತೀವ್ರ ತರಾಟೆಗೆ ತೆಗೆದುಕೊಂಡು ಬೆವರಿಳಿಸಿದ ಘಟನೆ ಗುರುವಾರ ನಡೆಯಿತು.

ಇಲ್ಲಿನ ತಾಪಂ ಸಭಾ ಭವನದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ, ನಾನು ಶಾಸಕನಾಗಿ ಒಂದೂವರೆ ವರ್ಷ ಆದರೂ ಅಧಿಕಾರಿಗಳಲ್ಲಿ ಚುರುಕುತನ ಕಂಡುಬರುತ್ತಿಲ್ಲ. ಹಳೇ ಚಾಳಿ ಮುಂದುವರಿದಿದೆ. ವಸೀಲಿ ಮತ್ತು ಬೇರೆ ಯಾರಧ್ದೋ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿರುವುದು ಕಂಡು ಬರುತ್ತಿದೆ. ಇನ್ನು ಮೇಲೆ ಹಳೆ ಚಾಳಿ ಬಿಟ್ಟು ಬಿಡಿ. ಪ್ರಭಾವಕ್ಕೊಳಗಾಗದೇ ಕೆಲಸ ಮಾಡಿ. ಸರ್ಕಾರ ಕೊಟ್ಟಿರುವ ಸೌಲಭ್ಯಗಳನ್ನು ಸಾಮಾನ್ಯ ಜನರಿಗೆ ತಲುಪಿಸಿ. ಹೀಗೆ ಮಾಡುವುದರಿಂದ ಯಾರಪ್ಪನ ಗಂಟೂ ಹೋಗುವುದಿಲ್ಲ. ಒಟ್ಟಾರೆ ಬಡವರಿಗೆ ಸೌಲಭ್ಯ ಸಿಗಬೇಕು ಅಷ್ಟೆ ಎಂದು ಹೇಳಿದರು.

ಕಂದಾಯ, ಗ್ರಾಮೀಣಾಭಿವೃದ್ಧಿ, ಕೃಷಿ, ವಿದ್ಯುತ್‌ ಇಲಾಖೆಗಳು ಜನರ ನಿತ್ಯದ ಬದುಕಿಗೆ ಅಗತ್ಯ ಇರುವಂಥವುಗಳು. ಇಲ್ಲಿರುವ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿ ಸಾಮಾನ್ಯ ಜನರಿಗೆ ಸರ್ಕಾರದ ಯೋಜನೆ ತಲುಪಿಸಿ ಅನುಕೂಲ ಮಾಡಿಕೊಡಬೇಕು. ನಮಗೆ ಪ್ರಗತಿಯ ಗ್ರೌಂಡ ರಿಯಾಲಿಟಿ ಬೇಕು. ಪೇಪರ್‌ನಲ್ಲಿ ಪ್ರಗತಿ ಬೇಡ ಎಂದು ಹೇಳಿದರು.

ಜನರಿಗೆ ಸೌಲಭ್ಯ ದೊರಕಿಸಲು ಕ್ರಮ ಕೆೃಕೊಳ್ಳುವಂತೆ ಎಲ್ಲ ಪಿಡಿಒಗಳಿಗೆ ಸೂಚಿಸಬೇಕು. ಗ್ರಾಮಸಭೆಯಿಂದ ಏನೂ ಪ್ರಯೋಜನ ಆಗುತ್ತಿಲ್ಲ. ಹೀಗಾಗಿ ವಾರದಲ್ಲಿ ಒಂದು ದಿನ ಒಂದು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿ ಸೌಲಭ್ಯ ವಂಚಿತರ ಅಂಕಿ ಸಂಖ್ಯೆ ಸಂಗ್ರಹಿಸಲಾಗುತ್ತದೆ. ಈ ವೇಳೆ ಪಿಡಿಒ ಮತ್ತು ಸಂಬಂಧಿಸಿದ ಇಲಾಖೆಗಳ ಪ್ರತಿನಿಧಿ ಕಡ್ಡಾಯವಾಗಿ ಹಾಜರು ಇರುವಂತೆ ನೋಡಿಕೊಳ್ಳಬೇಕು. ಪ್ರತಿ ವಾರ ಒಂದು ಹಳ್ಳಿಗೆ ಭೇಟಿ ನೀಡಿ ಅಲ್ಲಿ ಸೌಲಭ್ಯವಂಚಿತರ ಅಂಕಿ ಸಂಖ್ಯೆ ಸಂಗ್ರಹಿಸುವ ಕಾರ್ಯವನ್ನು ನಾನು ನಡೆಸುತ್ತೇನೆ. ಸಂಬಂಧಿಸಿದ ಪಿಡಿಒ, ಕಚೇರಿ ಸಿಬ್ಬಂದಿಗಳು ನನ್ನ ಜೊತೆ ಇರಬೇಕು ಎಂದು ಶಾಸಕರು ಸೂಚಿಸಿದರು.

ಶಿಕ್ಷಣ ಇಲಾಖೆಯವರು ತಾಲೂಕಿನಲ್ಲಿ ಬರುವ ಒಟ್ಟು ಸರ್ಕಾರಿ ಶಾಲೆಗಳು, ಕೊಠಡಿಗಳು, ಅಲ್ಲಿ ಲಭ್ಯವಿರುವ ಸೌಲಭ್ಯ, ಶಿಕ್ಷಕರು ಮತ್ತು ಮಕ್ಕಳ ಸಂಖ್ಯೆ, ಕೊರತೆ ಇರುವ ಶಿಕ್ಷಕರ ಸಂಖ್ಯೆ, ಸೌಲಭ್ಯಗಳಿಲ್ಲದ, ದುರಸ್ತಿಗೆ ಬಂದಿರುವ ಶಾಲೆಗಳ ಸಂಖ್ಯೆ, ಸರ್ಕಾರ ಮತ್ತು ದಾನರೂಪದಲ್ಲಿ ಬಂದ ಜಾಗೆ ಮಾಹಿತಿ ಪ್ರತ್ಯೇಕವಾಗಿ ಬರೆದು ಕೊಡಬೇಕು. ಇದರಿಂದ ಹೇಗೆ ಅಭಿವೃದ್ಧಿ ಮಾಡಬೇಕು ಎನ್ನುವ ಸ್ಪಷ್ಟತೆ ಮೂಡುತ್ತದೆ. ಜನರಿಗೆ ಆರೋಗ್ಯ ಭಾಗ್ಯ ಒದಗಿಸುವ ಆರೋಗ್ಯ ಇಲಾಖೆಯೇ ಅನಾರೋಗ್ಯಕ್ಕೀಡಾಗಿದೆ. ಸರ್ಕಾರಿ ಆಸ್ಪತ್ರೆ, ಸಮುದಾಯ ಕೇಂದ್ರಗಳಲ್ಲಿ ಸ್ವಚ್ಛತೆ ಕಂಡುಬರುತ್ತಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಶ್ರಮದಾನ ಮಾಡಿಯಾದರೂ ಸರಿ ಸ್ವಚ್ಛತೆ ಕಾಪಾಡಲು ಮುಂದಾಗಬೇಕು. ಕೃಷಿ ಇಲಾಖೆ ಸೌಲಭ್ಯಗಳು ಅನರ್ಹರ ಪಾಲಾಗುತ್ತಿವೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇದನ್ನು ಸರಿಪಡಿಸಿಕೊಳ್ಳಬೇಕು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ಇಲಾಖೆಯಡಿ ನಡೆಯುವ ಹಾಸ್ಟೆಲ್ಗಳಲ್ಲಿ ಸ್ವಚ್ಛತೆ ಇಲ್ಲವಾಗಿದೆ. ನಾಲತವಾಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಾಕಷ್ಟು ಅವ್ಯವಸ್ಥೆ ಇದೆ. ಕೆಲವು ವಾರ್ಡ್‌ನ್‌ಗಳು ಮದ್ಯ ಸೇವಿಸಿ ಬರುವ ಮಾತು ಕೇಳಿ ಬರುತ್ತಿದೆ. ಇವೆಲ್ಲ ಸುಧಾರಿಸಬೇಕು ಎಂದು ಶಾಸಕರು ಸಲಹೆ ನೀಡಿದರು.

ಕಂದಾಯ ಇಲಾಖೆಯಿಂದ ಬಡವರಿಗೆ ರೇಷನ್‌ ಕಾರ್ಡ್‌ ದೊರಕುತ್ತಿಲ್ಲ. ಜನರು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ನೀವು ಮಾಡುವ ತಪ್ಪುಗಳಿಗೆ ನಾನು ಜನರಿಂದ ಅನ್ನಿಸಿಕೊಳ್ಳಬೇಕಿದೆ. ಇಂಥ ಪರಿಸ್ಥಿತಿ ಮುಂದುವರಿದರೆ ಇನ್ನು ಮುಂದೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ತಾಪಂ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ರೈತರು ಸರ್ಕಾರದ ಸೌಲಭ್ಯ ಪಡೆಯಲು ತಮ್ಮ ಹೆಸರುಗಳನ್ನು ಉತಾರೆ, ಆಧಾರ ಕಾರ್ಡ್‌, ಬ್ಯಾಂಕ್‌ ಖಾತೆಗಳಲ್ಲಿ ಒಂದೇ ರೀತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಈ ಮೂರರಲ್ಲಿ ಒಂದೇ ಒಂದು ದಾಖಲೆಯಲ್ಲಿ ಹೆಸರಿನ ಸ್ಪೆಲ್ಲಿಂಗ್‌ ವ್ಯತ್ಯಾಸ ಆದರೂ ಸೌಲಭ್ಯ ದೊರಕುವುದಿಲ್ಲ ಎನ್ನುವುದನ್ನು ಗಮನಿಸಬೇಕು. ಈಗಾಗಲೇ ಹಲವರು ಸೌಲಭ್ಯ ವಂಚಿತರಾಗಲು ದಾಖಲೆಗಳಲ್ಲಿ ಈ ಸಮಸ್ಯೆ ಕಾರಣವಾಗಿದೆ. ತಕ್ಷಣವೇ ಈ ಮೂರೂ ದಾಖಲೆಗಳನ್ನು ರೈತರು ಗಂಭೀರವಾಗಿ ಪರಿಗಣಿಸಿ ವ್ಯತ್ಯಾಸ ಇದ್ದಲ್ಲಿ ತಿದ್ದುಪಡಿ ಮಾಡಿಸಬೇಕು ಎಂದು ಶಾಸಕ ನಡಹಳ್ಳಿ, ಕೃಷಿ ಸಹಾಯಕ ನಿರ್ದೇಶಕ ಯರಝರಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.