ಸಮಸ್ಯೆ ತೆರೆದಿಟ್ಟ ಸಾರಿಗೆ ನೌಕರರು
ಸಾರಿಗೆ ನಿಗಮಗಳಲ್ಲಿ ಸೇವೆ ಸಲ್ಲಿಸುವವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ
Team Udayavani, Jun 24, 2019, 10:45 AM IST
ಮುದ್ದೇಬಿಹಾಳ: ಸಾರಿಗೆ ನೌಕರರು ಗೃಹ ಸಚಿವ ಎಂ.ಬಿ. ಪಾಟೀಲರಿಗೆ ಬೇಡಿಕೆಗಳ ಮನವಿ ಸಲ್ಲಿಸಿದರು.
ಮುದ್ದೇಬಿಹಾಳ: ಸಾರಿಗೆ ಸಂಸ್ಥೆಯ ನಿಗಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸರ್ಕಾರಿ ಪಿಂಚಣಿ ಮತ್ತು ಎಲ್ಲ ಸೌಲತ್ತು ನೀಡುವಂತೆ ಮುಖ್ಯಮಂತ್ರಿಗಳ ಮನವೊಲಿಸಬೇಕು ಎಂದು ಆಗ್ರಹಿಸಿ ಕೆಎಸ್‌ಆರ್‌ಟಿಸಿ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ಸ್ಥಳೀಯ ಘಟಕದ ಪದಾಧಿಕಾರಿಗಳು ಗೃಹ ಸಚಿವ ಎಂ.ಬಿ.ಪಾಟೀಲ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಚಿವರನ್ನು ಭೇಟಿ ಮಾಡಿದ ವೇದಿಕೆಯ ಸ್ಥಳೀಯ ಪದಾಧಿಕಾರಿಗಳಾದ ಎಸ್.ಆರ್. ಮುಲ್ಲಾ, ವಿ.ಎಂ. ಕುಲಕರ್ಣಿ, ಎ.ಐ. ಆಸ್ಮಿ, ಮಹೆಬೂಬ ಮುಲ್ಲಾ, ಮಂಜುನಾಥ ಸಜ್ಜನ ಮತ್ತಿತರರು ಬೇಡಿಕೆ ಈಡೇರಿಕೆಯ ಅವಶ್ಯಕತೆಯನ್ನು ಸಚಿವರಿಗೆ ವಿವರಿಸಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಹಕಾರ ನೀಡಬೇಕು ಎಂದು ಕೋರಿದರು.
ನೌಕರಿಗೆ ಸೇರಿಕೊಂಡಾಗಿನಿಂದ ನಿವೃತ್ತಿವರೆಗೂ ಶ್ರಮವಹಿಸಿ ದುಡಿಯುವ ಕೆಎಸ್‌ಆರ್‌ಟಿಸಿ ನೌಕರರು ಶ್ರಮ ಜೀವಿಗಳು. ಸರ್ಕಾರದಿಂದಲೇ ನಡೆಯುತ್ತಿರುವ ವಿವಿಧ ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಹಿಂದಿನ ಸರ್ಕಾರಗಳು ವೇತನ ತಾರತಮ್ಯ ಎಸಗುತ್ತಾ ಬಂದಿದ್ದಾರೆ. ಸರ್ಕಾರದ ಸೌಲತ್ತು, ಪಿಂಚಣಿ ಇಲ್ಲದೆ ಕಷ್ಟಗಳ ನಡುವೆಯೂ ನೌಕರರು ಶ್ರದ್ಧೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಇವರಿಗೆ ಜಿಗುಪ್ಸೆ ಶುರುವಾಗಿದೆ. ಹಲವಾರು ಸಮಸ್ಯೆಗಳಿಂದ ಬಳಲುತ್ತಿರುವ ಈ ನೌಕರರು ಇದೀಗ ಸಹನೆಯನ್ನು ಮೀರುವ ಹಂತಕ್ಕೆ ಬಂದಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಅಧಿವೇಶನ ವೇಳೆ ಸಾರಿಗೆ ನೌಕರರ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲಾಗಿತ್ತು. ಇದುವರೆಗೂ ಯಾವುದೇ ರೀತಿಯ ಸಕಾರಾತ್ಮಕ ಸ್ಪಂದನೆ ದೊರಕಿಲ್ಲ. ಸಾರಿಗೆ ನೌಕರಿ ಎಂದರೆ ಕಷ್ಟದ ಕೆಲಸ. ಕರ್ತವ್ಯದಲ್ಲಿ ಉದ್ಭವಿಸುವ ಎಲ್ಲ ಕಷ್ಟಗಳನ್ನು ಸಮರ್ಥವಾಗಿ ಎದುರಿಸಬೇಕಿದೆ. ನೌಕರರನ್ನು ನಂಬಿದ ಕುಟುಂಬವರ್ಗವನ್ನೂ ಸಾಕಿ ಸಲಹುವ ಹೊಣೆಗಾರಿಕೆ ಇದೆ. ಇವರಿಗೆ ನಿವೃತ್ತಿಯಾದಾಗ ಇವರ ವಿಶ್ರಾಂತಿ ಜೀವನಕ್ಕೊಂದು ಭದ್ರತೆಯಾಗಿ ಸರ್ಕಾರಿ ಪಿಂಚಣಿ ಬೇಕು. ಸಾರಿಗೆ ನೌಕರರನ್ನು ಸರ್ಕಾರಿ ನೌಕರ ಎಂಬಂತೆ ಸಮಾನತೆಯಿಂದ ನೋಡಿಕೊಳ್ಳಬೇಕು. ಸಮಾನ ವೇತನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನೆರೆಯ ಆಂಧ್ರ ಪ್ರದೇಶದಲ್ಲಿ ಸಾರಿಗೆ ನೌಕರರನ್ನು ಸರ್ಕಾರದ ಜೊತೆ ವಿಲೀನಗೊಳಿಸಿದಂತೆ ಇಲ್ಲೂ ಮಾಡಬೇಕು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂಸಿದ್ದಾರೆ. ಸಾರಿಗೆ ಸಚಿವರೂ ಧನಾತ್ಮಕ ಹೇಳಿಕೆ ನೀಡಿದ್ದಾರೆ.
ಪೊಲೀಸ್ ಇಲಾಖೆಯ ನೌಕರರಿಗೆ ಔರಾದಕರ ವರದಿಯನ್ನು ಅನುಷ್ಠಾನಗೊಳಿಸಿದ ರೀತಿಯಲ್ಲಿ ಸಾರಿಗೆ ನೌಕರರ ಬೇಡಿಕೆಗಳನ್ನೂ ಮುಖ್ಯಮಂತ್ರಿಗಳ ಮೂಲಕ ಈಡೇರಿಸಿ ಸಾರಿಗೆ ನೌಕರರ ಸಂಕಷ್ಟಗಳಿಗೆ ಮುಕ್ತಾಯ ಹೇಳಬೇಕು ಎಂದು ಪದಾಧಿಕಾರಿಗಳು ಕೇಳಿಕೊಂಡರು.
ಅಹವಾಲು ಆಲಿಸಿದ ಸಚಿವರು ಸಾರಿಗೆ ನೌಕರರ ಬೇಡಿಕೆ ನ್ಯಾಯಯುತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು. ಮಾಜಿ ಸಚಿವರಾದ ಬಸವರಾಜ ಹೊರಟ್ಟಿ, ಸಿ.ಎಸ್. ನಾಡಗೌಡ, ಎಪಿಎಂಸಿ ಅಧ್ಯಕ್ಷ ಗುರಣ್ಣ ತಾರನಾಳ, ಪುರಸಭೆ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.