ಅರ್ಹರಿಗೆ ಸೂಕ್ತ ಪರಿಹಾರ ನೀಡಿ
ನಿಜವಾದ ಸಂತ್ರಸ್ತರ ಆಯ್ಕೆಗೆ ಪುನರ್ ಸಮೀಕ್ಷೆ ನಡೆಸಲು ತಹಶೀಲ್ದಾರ್‌ಗೆ ಮನವಿ
Team Udayavani, Sep 4, 2019, 3:53 PM IST
ಮುದ್ದೇಬಿಹಾಳ: ದೇವೂರು ಗ್ರಾಮದ ಸಂತ್ರಸ್ತರನ್ನು ಉದ್ದೇಶಿಸಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ ಮಾತನಾಡಿದರು.
ಮುದ್ದೇಬಿಹಾಳ: ಪ್ರವಾಹದಿಂದ ಹಾನಿಗೀಡಾದ ಮನೆಗಳ ಸಮೀಕ್ಷೆ ಅಸಮರ್ಪಕವಾಗಿದ್ದು ಮತ್ತೂಮ್ಮೆ ಸಮೀಕ್ಷೆ ನಡೆಸಿ ನಿಜವಾದ ಸಂತ್ರಸ್ತರನ್ನು ಗುರ್ತಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕೃಷ್ಣಾ ನದಿ ದಂಡೆಯ ಪ್ರವಾಹಪೀಡಿತ ದೇವೂರು ಗ್ರಾಮದ ಸಂತ್ರಸ್ತರು ಮಂಗಳವಾರ ಇಲ್ಲಿನ ತಹಶೀಲ್ದಾರ್ ವಿನಯ್‌ಕುಮಾರ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ ಮಾತನಾಡಿ, ಆ. 1ರಿಂದ ಪ್ರಾರಂಭಗೊಂಡಿದ್ದ ಪ್ರವಾಹ ಆ. 20ರ ನಂತರ ಕಡಿಮೆಯಾಗಿತ್ತು. ಪ್ರವಾಹದ ನೀರು ಇಳಿದ ಮೇಲೆ ನೋಡಲ್ ಅಧಿಕಾರಿ ನೇತೃತ್ವದಲ್ಲಿ 5 ಅಧಿಕಾರಿಗಳ ತಂಡ ಮನೆಹಾನಿ ಸಮೀಕ್ಷೆ ನಡೆಸಿತ್ತು. ಆದರೆ ಆ ಸಮೀಕ್ಷೆಯಲ್ಲಿ ತಾರತಮ್ಯ ಮಾಡಲಾಗಿತ್ತು.
ನಿಜವಾದ ಸಂತ್ರಸ್ತರನ್ನು ವರದಿಯಲ್ಲಿ ಸೇರಿಸದೆ ಅನ್ಯಾಯ ಮಾಡಲಾಗಿತ್ತು. ಈ ಬಗ್ಗೆ ಮೊದಲಿನ ಸಮೀಕ್ಷೆ ರದ್ದುಪಡಿಸಿ ಇನ್ನೊಮ್ಮೆ ಬೇರೆ ತಂಡದಿಂದ ಸಮೀಕ್ಷೆ ನಡೆಸುವಂತೆ ಒತ್ತಾಯಿಸಿ ಆ. 24ರಂದು ಕೊಟ್ಟಿದ್ದ ಮನವಿಗೆ ಇದುವರೆಗೂ ಸ್ಪಂದನೆ ದೊರಕಿಲ್ಲ. ಮರು ಸಮೀಕ್ಷೆಯನ್ನು ಮಾಡಲಾಗಿಲ್ಲ ಎಂದು ದೂರಿದರು.
ಮರು ಸಮೀಕ್ಷೆ ನಡೆಸದೆ ಪರಿಹಾರದ ಚೆಕ್ ವಿತರಿಸಬಾರದು ಎನ್ನುವ ನಮ್ಮ ಬೇಡಿಕೆಯನ್ನು ತಾಲೂಕಾಡಳಿತ ಗಂಭೀರವಾಗಿ ಪರಿಗಣಿಸದೆ ಸಂತ್ರಸ್ತರಿಗೆ ಚೆಕ್ ವಿತರಣೆ ಮಾಡಿದೆ. ಕೆಲವು ಸಂತ್ರಸ್ತರ ಮನೆ ಸುತ್ತ ನೀರು ನಿಂತು ಮನೆಯ ಅಡಿಪಾಯದಲ್ಲಿ ನೀರು ಹೋಗಿ ಅಭದ್ರ ಸ್ಥಿತಿಯಲ್ಲಿ ಇವೆ. ಇಂಥ ಮನೆಗಳನ್ನು ಸಮೀಕ್ಷೆಯಲ್ಲಿ ಪರಿಗಣಿಸದೆ ಅನ್ಯಾಯ ಮಾಡಲಾಗಿದೆ. ಈ ಅನ್ಯಾಯ ಸರಿಪಡಿಸಲು ಇನ್ನೊಮ್ಮೆ ಸಮೀಕ್ಷೆ ನಡೆಸಿ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಸಂತ್ರಸ್ತರಿಗೆ ಮೊದಲ ಹಂತದಲ್ಲಿ ಪರಿಹಾರವಾಗಿ ಕೊಟ್ಟಿರುವ 10,000 ರೂ. ಮೊತ್ತದ ಚೆಕ್ ಜಮಾ ಆಗುತ್ತಿಲ್ಲ. ಇದನ್ನು ಬ್ಯಾಂಕ್‌ನವರು ಸ್ವೀಕರಿಸದೆ ತಿರಸ್ಕರಿಸುತ್ತಿದ್ದಾರೆ. ಈ ಸಮಸ್ಯೆಯನ್ನೂ ಬಗೆಹರಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ತಹಶೀಲ್ದಾರ್ ಭರವಸೆ: ಮನವಿ ಸ್ವೀಕರಿಸಿದ ತಹಶೀಲ್ದಾರ್ ಅವರು ಈಗಾಗಲೇ ದೇವೂರ ಗ್ರಾಮದಲ್ಲಿ ನಡೆದಿರುವ ಸರ್ವೇ ಕಾರ್ಯದಲ್ಲಿ ಯಾವುದೇ ಲೋಪ ಜರುಗಿಲ್ಲ. ಸರಿಯಾಗಿ ಸರ್ಕಾರದ ನಿಯಮಗಳಿಗೆ ಅನುಗುಣವಾಗಿಯೇ ಸಮೀಕ್ಷೆ ನಡೆಸಲಾಗಿದೆ ಎಂದು ಸಮೀಕ್ಷೆ ನಡೆಸಿದ ತಂಡ ವರದಿ ಸಲ್ಲಿಸಿದೆ. ಯಾವುದೇ ತಾರತಮ್ಯ ಮಾಡಿಲ್ಲ. ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಂಡದ ಮುಖ್ಯಸ್ಥರಾಗಿದ್ದ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದರೂ ಕೂಡ ಸಂತ್ರಸ್ತರು ಸಲ್ಲಿಸಿರುವ ಮನವಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ರೈತ ಸಂಘ ಬೆಂಬಲ: ಮನವಿ ಸಲ್ಲಿಸುವಾಗ ದೇವೂರು ಗ್ರಾಮದ ಸಂತ್ರಸ್ತರ ಜೊತೆ ಪಾಲ್ಗೊಂಡಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸಂತ್ರಸ್ತರ ಮರು ಸಮೀಕ್ಷೆ ಬೇಡಿಕೆ ನ್ಯಾಯಯುತವಾಗಿದ್ದು ಕೂಡಲೇ ಈಡೇರಿಸಬೇಕು ಎಂದು ತಹಶೀಲ್ದಾರ್ ಅವರಿಗೆ ಒತ್ತಾಯಿಸಿದರು. ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಬಿರಾದಾರ, ಪದಾಧಿಕಾರಿಗಳಾಗ ಸಂಗಣ್ಣ ಬಾಗೇವಾಡಿ, ವೈ.ಎಲ್. ಬಿರಾದಾರ, ರಮೇಶ ಗೊಳಸಂಗಿ ಸೇರಿದಂತೆ ಸಂತ್ರಸ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.