ಹೆಚ್ಚಿನ ಪಂಚಾಯತ್‌ಗಳಲ್ಲಿ ಮಹಿಳೆಯರೇ ಬಾಸ್
ಸ್ಥಳೀಯಾಡಳಿತದಲ್ಲಿ ಮಹಿಳೆಯರದ್ದೇ ಮೇಲುಗೈಬಹುತೇಕ ಕಡೆ ಪತಿಯಂದಿರದ್ದೇ ದರ್ಬಾರ್
Team Udayavani, Nov 7, 2019, 1:29 PM IST
ಗೋವಿಂದಪ್ಪ ತಳವಾರ
ಮುಧೋಳ: ಮಹಿಳೆಯರದ್ದೇ ಮೇಲುಗೈ. ಪ್ರತಿಬಾರಿ ಶೈಕ್ಷಣಿಕ ವರ್ಷದ ಫಲಿತಾಂಶ ಹೊರ ಬಿದ್ದಾಗ ಸಾಮಾನ್ಯವಾಗಿ ಕೇಳಿಬರುವ ಮಾತಿದು. ಈಗ ಈ ಮಾತು ತಾಲೂಕಿನ ಗ್ರಾಮ ಪಂಚಾಯತಿಗಳಿಗೂ ಅನ್ವಯವಾಗುತ್ತದೆ ಎಂದರೆ ಅತಿಶಯೋಕ್ತಿಯೆನಿಸದು.
ಹೌದು, ಮುಧೋಳ ತಾಲೂಕಿನ 29 ಗ್ರಾಮ ಪಂಚಾಯತಿಗಳ ಪೈಕಿ 17 ಗ್ರಾಮ ಪಂಚಾಯತಿಯಲ್ಲಿ ಮಹಿಳೆಯರೇ ಅಧ್ಯಕ್ಷಗಿರಿ ನಡೆಸುತ್ತಿದ್ದು, ಗ್ರಾಮೀಣ ಮಟ್ಟದ ಅಧಿಕಾರದಲ್ಲಿ ತಮ್ಮದೆಯಾದ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ.
ಮಹಿಳೆಯೆಂದರೆ ಅಡುಗೆ ಮನೆಗೆ ಸೀಮಿತ, ನಾಲ್ಕು ಗೋಡೆಗಳ ಮಧ್ಯೆಯೇ ಕಾರ್ಯನಿರ್ವಹಿಸಬೇಕು ಎಂಬ ಅನಾದಿ ಕಾಲದ ಸಂಪ್ರದಾಯದ ಕಟ್ಟುಪಾಡುಗಳನ್ನು ತೊಡೆದು ಹಾಕಿ ಸ್ಥಳೀಯಾಡಳಿತದ ಗದ್ದುಗೆ ಹಿಡಿದಿರುವ ಮಹಿಳೆಯರು, ನಾವೂ ಪುರುಷರಿಗೆ ಯಾವುದರಲ್ಲೂ ಕಡಿಮೆಯಿಲ್ಲ ಎಂಬ ದಾರಿಯಲ್ಲಿ ಸಾಗುತ್ತಿದ್ದಾರೆ.
ಸರ್ಕಾರ ನೀಡಿರುವ ಮೀಸಲಾತಿ ಹಾಗೂ ಸ್ವಬಲದಿಂದ ಗ್ರಾಮೀಣ ಭಾಗದ ರಾಜಕೀಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಸ್ತ್ರೀಯರು, ತಮ್ಮ ತಮ್ಮ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡುತ್ತಿದ್ದಾರೆ. ಆ ಮೂಲಕ ತಮಗೆ ದೊರೆತ ಅಧಿಕಾರವನ್ನು ಬಳಕೆ ಮಾಡಿಕೊಂಡು ಗ್ರಾಮೀಣಾಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಎಲ್ಲೆಲ್ಲಿ ಅಧ್ಯಕ್ಷರು: ಮುಧೋಳ ತಾಲೂಕಿನ ಬರಗಿ, ಭಂಟನೂರ, ಚಿಚಖಂಡಿ, ದಾದನಟ್ಟಿ, ಗುಲಗಾಲ ಜಂಬಗಿ, ಹೆಬ್ಟಾಳ, ಇಂಗಳಗಿ, ಕಸಬಾಜಂಬಗಿ, ಲೋಕಾಪುರ, ಮಾಚಕನೂರ, ಮಂಟೂರ, ಮೆಳ್ಳಿಗೇರಿ, ಮೆಟಗುಡ್ಡ, ನಾಗರಾಳ, ಸೋರಗಾಂವ, ಉತ್ತೂರ ಹಾಗೂ ವಜ್ರಮಟ್ಟಿ ಗ್ರಾಮ ಪಂಚಾಯತ್‌ಗಳಿಗೆ ಮಹಿಳೆಯರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಹಿಳೆಯರ ಸಂಬಂಧಿಗಳ ಕೈಯಲ್ಲಿ ಫೋನ್: ಗ್ರಾಮೀಣ ಮಟ್ಟದ ಅಧಿಕಾರವನ್ನು ಮಹಿಳೆಯರೇ ನಡೆಸುತ್ತಿದ್ದರೂ ಅವರಿಗಿನ್ನು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬುದೇ ಖೇದಕರ ಸಂಗತಿ. ಕುಟುಂಬದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವ ಅವರು ತಮ್ಮ ಅಧಿಕಾರ ನಡೆಸಲು ಪತಿ, ಪುತ್ರ ಹಾಗೂ ಸಂಬಂಧಿಕರ ನೆರವು ಪಡೆಯುತ್ತಿದ್ದಾರೆ.
ಈ ಬಗ್ಗೆ ವಿಚಾರಿಸಲು ಗ್ರಾಮ ಪಂಚಾಯತ ಅಧ್ಯಕ್ಷೆಯರಿಗೆ ಕರೆ ಮಾಡಿದಾಗ ಬಹುತೇಕ ಕರೆಗಳನ್ನು ಅವರ ಪತಿಯಂದಿರು, ಪುತ್ರರು ಹಾಗೂ ಸಂಬಂಧಿಕರೇ ಸ್ವೀಕರಿಸಿದ್ದು ಪುರುಷ ಪ್ರಧಾನ ವ್ಯವಸ್ಥೆಗೆ ಹಿಡಿದ ಕನ್ನಡಿಯಂತಿದೆ.
ಒಟ್ಟಾರೆ ಹಿಂದಿನ ಕಾಲಕ್ಕಿಂತ ಸುಧಾರಣೆ ಕಂಡಿರುವ ಮಹಿಳಾ ಮಣಿಗಳು ಮುಂದಿನ ದಿನಗಳಲ್ಲಿ ಸ್ವತಂತ್ರವಾಗಿ ಅಧಿಕಾರ ನಡೆಸುತ್ತಾರೆ ಎಂಬುದರಲ್ಲಿ ಎರಡು ಮಾತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.