500 ಸಂತ್ರಸ್ತ ಕುಟುಂಬಕ್ಕೆ ಸೂರು

ತಲಾ 5 ಲಕ್ಷ ರೂ. ವೆಚ್ಚದಲ್ಲಿ ಮನೆಗಾಗಿ ಜಾಗ ಹುಡುಕಾಟ: ಶಾಸಕ ಎಂ.ಪಿ.ಕುಮಾರಸ್ವಾಮಿ ಅಭಯ

Team Udayavani, Aug 16, 2019, 11:45 AM IST

16-Agust-16

ಮೂಡಿಗೆರೆ: ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿದರು.

ಮೂಡಿಗೆರೆ: ತಾಲೂಕಿನಲ್ಲಿ ಸಂಭವಿಸಿದ ಹಿಂದೆಂದೂ ಕಂಡರಿಯದ ಭೀಕರ ಪ್ರವಾಹದಿಂದಾಗಿ ಬಹಳಷ್ಟು ಕುಟುಂಬ ಗಳು ಸಂಕಷ್ಟಕ್ಕೀಡಾಗಿವೆ. ಕೇವಲ ಅಧಿಕಾರಿಗಳಿಂದ ಅವರ ಸಮಸ್ಯೆ ನಿವಾರಿಸಲು ಸಾಧ್ಯವಾಗುತ್ತಿರಲಿಲ್ಲ. ಜನರ ನಿಸ್ವಾರ್ಥ ಸೇವೆಯಿಂದಾಗಿ ತಾತ್ಕಾಲಿಕ ಪರಿಹಾರ ಸಿಕ್ಕಂತಾಗಿದೆ. ಹಾಗಾಗಿ, ಸಾರ್ವಜನಿಕರಿಂದ ಇನ್ನೂ ಹೆಚ್ಚಿನ ಸೇವೆ ಅಗತ್ಯವಾಗಿದೆ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ಗುರುವಾರ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅದ್ದೂರಿ ಯಾಗಿ ಮಾಡಲು ಸಿದ್ಧತೆ ಕೈಗೊಳ್ಳಲಾಗಿತ್ತು. ಆದರೆ, ಪ್ರವಾಹದ ಭೀಕರತೆಯಿಂದಾಗಿ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ತಾಲೂಕಿನಲ್ಲಿ 500 ನಿರಾಶ್ರಿತರ ಕುಟುಂಬಗಳಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲು ಜಾಗ ಗುರುತಿಸುವ ಬಗ್ಗೆ ಸಿದ್ಧತೆ ನಡೆಯುತ್ತಿದೆ. 100 ಕೋಟಿ ರೂ. ಅನುದಾನ ತಂದು ಎಲ್ಲಾ ರಸ್ತೆಗಳ ಡಾಂಬರೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಇಲ್ಲಿನ ಪರಿಸ್ಥಿತಿಯನ್ನು ವೀಕ್ಷಿಸಲು ಆಗಮಿಸಬೇಕೆಂದು ಮನವಿ ಮಾಡಿಕೊಂಡಿದ್ದು, ಸಧ್ಯದಲ್ಲಿಯೇ ಆಗಮಿಸಲಿದ್ದಾರೆ. ಅವರು ಬಂದ ಬಳಿಕ ವಿಶೇಷ ಅನುದಾನ ತಂದು ಎಲ್ಲಾ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ಮಾತನಾಡಿ, ವರುಣನ ಅಬ್ಬರದಿಂದ ಜೀವ ಹಾನಿ ಜತೆಗೆ ಅಪಾರ ಸಂಖ್ಯೆಯ ಜನರು ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ರಾಜ್ಯದ ನಾನಾ ಕಡೆಗಳಿಂದ ಸಾಕಷ್ಟು ದಾನಿಗಳು ನಿರಾಶ್ರಿತರಿಗೆ ಸಹಾಯ ಮಾಡುತ್ತಿದ್ದಾರೆ. ಇದು ತಾತ್ಕಾಲಿಕ ವ್ಯವಸ್ಥೆ ಮಾತ್ರ. ಶಾಶ್ವತ ಪರಿಹಾರದ ಅಗತ್ಯವಿದೆ. ಪ್ರವಾಹದ ಹೊಡೆತಕ್ಕೆ ಸಿಲುಕಿದ ಸಂತ್ರಸ್ತರು ಸಹನೆ ಕಳೆದುಕೊಂಡು ಮಾತನಾಡುತ್ತಾರೆ. ಅಧಿಕಾರಿಗಳು ಪ್ರೀತಿ- ವಿಶ್ವಾಸದಿಂದ ಬೆರೆತು ಜನರ ಕಷ್ಟಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದರು.

ತಹಶೀಲ್ದಾರ್‌ ಎಚ್.ಎಂ.ರಮೇಶ್‌ ಧ್ವಜಾರೋಹಣ ನೆರವೇರಿಸಿದರು. ತಾಪಂ ಅಧ್ಯಕ್ಷ ಕೆ.ಸಿ.ರತನ್‌, ಸ್ಥಾಯಿ ಸಮಿತಿ ಅಧ್ಯಕ್ಷ ದೇವ ರಾಜು, ಸದಸ್ಯರಾದ ಭಾರತೀ ರವೀಂದ್ರ, ವೀಣಾ ಉಮೇಶ್‌, ಪಪಂ ಸದಸ್ಯರಾದ ಕಮಲಾಕ್ಷಿ, ಸುಧೀರ್‌, ಮನೋಜ್‌ ಕುಮಾರ್‌, ಖುರ್ಷಿದ್‌ ಬಾನು, ಎಂ.ಎ.ಹಂಝಾ, ಆಶಾಮೋಹನ್‌, ಜೇನು ಸಹಕಾರ ಸಂಘದ ಅಧ್ಯಕ್ಷ ದುಂಡುಗ ಪ್ರಮೋದ್‌, ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣಕುಮಾರ್‌ ಇದ್ದರು.

ಟಾಪ್ ನ್ಯೂಸ್

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.