ನಿರಾಶ್ರಿತರ ರಕ್ಷಣೆಗೆ ಸರಕಾರ ಬದ್ಧ: ಅಶೋಕ್‌

Team Udayavani, Sep 20, 2019, 5:06 PM IST

20-Sepctember-26

ಮೂಡಿಗೆರೆ: ಬಿದರಹಳ್ಳಿ ಮೊರಾರ್ಜಿ ವಸತಿ ಶಾಲೆಯ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಆರ್‌.ಅಶೋಕ್‌ ನಿರಾಶ್ರಿತರಿಂದ ಅಹವಾಲು ಸ್ವೀಕರಿಸಿದರು

ಮೂಡಿಗೆರೆ: ನೆರೆ ನಿರಾಶ್ರಿತರ ಪುನರ್ವಸತಿಗೆ ತಾಲೂಕಿನಲ್ಲಿ 374 ಜಾಗ ಗುರುತಿಸಲಾಗಿದೆ. ನಿರಾಶ್ರಿತರ ಸ್ಥಳಾಂತರ ಅನಿವಾರ್ಯವಾದರೆ ಈ ಜಾಗ ಬಳಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

ಗುರುವಾರ ತಾಲೂಕಿನ ಬಿದರಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ನಿರಾಶ್ರಿತರ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಪರಿಹಾರ ಒದಗಿಸಲು ತಕ್ಷಣವೇ 10 ರಿಂದ 15 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಕೇಂದ್ರದಿಂದ 4-5 ದಿನದಲ್ಲಿ ಹಣ ಬಿಡುಗಡೆಯಾಗುವ ಭರವಸೆಯಿದ್ದು, ಹಣ ಬಂದ ಕೂಡಲೇ ಬೆಳೆ ಪರಿಹಾರ ನೀಡಲಾಗುವುದು ಎಂದರು.

ನಿರಾಶ್ರಿತರ ಕೇಂದ್ರದಲ್ಲಿರುವ ಮಕ್ಕಳ ಚಿಕಿತ್ಸೆಗೆ ಶುಕ್ರವಾರದಿಂದ ಖಾಸಗಿ ಮಕ್ಕಳ ತಜ್ಞ ವೈದ್ಯರನ್ನು ನಿಯೋಜಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಶಾಲಾ ಪುಸ್ತಕ, ಬ್ಯಾಗ್‌, ಸಮವಸ್ತ್ರ ಸಹಿತ ಅಗತ್ಯ ಪರಿಕರಗಳನ್ನು ಸರಕಾರದಿಂದಲೇ ನಿರಾಶ್ರಿತರ ಮಕ್ಕಳಿಗೆ ಕಲ್ಪಿಸಲಾಗುವುದು. ನಿರಾಶ್ರಿತರ ಮಕ್ಕಳು ಶಾಲೆಗೆ ಹೋಗದಿರುವುದರಿಂದ ಈ ಸಾಲಿನ ಪರೀಕ್ಷೆಯಲ್ಲಿ ಅನುತ್ತೀರ್ಣ ಮಾಡದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸಚಿವರನ್ನು ಕಂಡ ಕೂಡಲೇ ನಿರಾಶ್ರಿತರು ಒಬ್ಬೊಬ್ಬರಾಗಿ ತಮ್ಮ ಅಹವಾಲು ಹೇಳಿಕೊಂಡರು. ಬಳಿಕ ಸಚಿವರು ಮಲೆಮನೆ ಮತ್ತು ಮದುಗುಂಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವೇಳೆ ಶಾಸಕ ಎಂ.ಪಿ.ಕುಮಾರಸ್ವಾಮಿ, ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌, ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಮಾಜಿ ಸಚಿವ ಡಿ.ಎನ್‌.ಜೀವರಾಜ್‌, ತಾಪಂ ಕೆ.ಸಿ.ರತನ್‌, ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಜಿಪಂ ಸಿಇಒ ಅಶ್ವತಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ಕುಮಾರ್‌, ಕಾಂಗ್ರೆಸ್‌ ಮುಖಂಡ ಬಿ.ಎಸ್‌.ಜಯರಾಂ, ಜಿಪಂ ಸದಸ್ಯೆ ಸುಧಾ ಯೋಗೇಶ್‌, ತಾಪಂ ಸದಸ್ಯೆ ಭಾರತೀ ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.