ಸಂತ್ರಸ್ತರ ಖಾತೆಗೆ ನೇರ ಪರಿಹಾರ ಹಣ ಜಮಾ
•769 ಮನೆಗಳಿಗೆ ಹಾನಿ•ಗದಗ ಕ್ಷೇತ್ರಕ್ಕೆ 2.70 ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆ
Team Udayavani, Aug 15, 2019, 1:30 PM IST
ಮುಳಗುಂದ: ನೀಲಗುಂದ ಗ್ರಾಮದಲ್ಲಿ ಮನೆಗೋಡೆ ಕುಸಿದು ಗಾಯಗೊಂಡ ವೃದ್ಧನ ಮನೆಗೆ ಶಾಸಕ ಎಚ್.ಕೆ. ಪಾಟೀಲ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಮುಳಗುಂದ: ಗದಗ ಕ್ಷೇತ್ರಕ್ಕೆ 2.70 ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆಯಾಗಿದ್ದು, ಹಾನಿಯಾದ ಪ್ರಮಾಣಕ್ಕನುಗುಣವಾಗಿ ಎಲ್ಲರಿಗೂ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾವಣೆ ಮಾಡಲಾಗಿದೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು.
ಸಮೀಪದ ನೀಲಗುಂದ ಗ್ರಾಮದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿ ಹಾಗೂ ನೆರೆ ಹಾನಿಯಿಂದ ಗದಗ ತಾಲೂಕಿನಾದ್ಯಂತ 769 ಮನೆಗಳು ಹಾನಿಗೀಡಾಗಿದ್ದು, ಕೆಲವು ಗ್ರಾಮಗಳಲ್ಲಿ ಗೋಡೆ ಕುಸಿತದಿಂದ ಜಾನುವಾರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿದ್ದಾರೆ.
ಈವರೆಗೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನರು ಮಣ್ಣಿನ ಮಳೆಗಳನ್ನು ಬಿಟ್ಟು ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಜವಾಬ್ದಾರಿಯುತ ನಾಗರಿಕರು ಸಂಕಷ್ಟದಲ್ಲಿರುವವರ ರಕ್ಷಣೆಗೆ ಮುಂದಾಗಬೇಕು ಎಂದರು.
ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಣ್ಣಿನ ಮನೆಗಳಿದ್ದು, ಇಂತಹ ಸಂದರ್ಭದಲ್ಲಿ ಅಪಾಯ ಉಂಟಾಗುತ್ತವೆ. ಕೂಡಲೇ ಸರ್ಕಾರ ವೈಜ್ಞಾನಿಕ ರೀತಿಯಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಳಲು 4 ಲಕ್ಷ ರೂ. ಗಳಷ್ಟು ಸಹಾಯಧನ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಗದಗ ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಗುರಣ್ಣ ಬಳಗಾನೂರ, ಹನಮಂತಪ್ಪ ಪೂಜಾರ, ಅಪ್ಪಣ್ಣ ಇನಾಮತಿ, ಪ್ರಭು ಬುರಬುರೆ, ಎಚ್.ಎಸ್. ಜಿನಗಿ , ಎನ್.ಬಿ. ದೊಡ್ಡಮನಿ, ಜಯಪ್ರಕಾಶ ಭಜಂತ್ರಿ,ನವೀನ ಬಂಗಾರಿ, ಸುನೀಲ ಬಂಗಾರಿ, ಪ್ರಭು ಅಂಗಡಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.