ಶುರುವಾಗದ ಇಂದಿರಾ ಕ್ಯಾಂಟೀನ್‌

ಕಟ್ಟಡ ಪೂರ್ಣಗೊಂಡರೂ ಲೋಕಾರ್ಪಣೆ ಇಲ್ಲ•ಜಿಲ್ಲಾ ಉಸ್ತುವಾರಿ ಸಚಿವರು ಗಮನ ಹರಿಸಲಿ

Team Udayavani, Jun 27, 2019, 1:19 PM IST

27-June-26

ಮುಂಡರಗಿ: ಕೃಷಿ ಇಲಾಖೆ ಪಕ್ಷದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‌ ಕಟ್ಟಡ.

ಹು.ಬಾ. ವಡ್ಡಟ್ಟಿ.
ಮುಂಡರಗಿ:
ಇಲ್ಲಿನ ಕೃಷಿ ಇಲಾಖೆ ಕಾರ್ಯಾಲಯದ ಪಕ್ಕದಲ್ಲಿ ಮತ್ತು ನೂತನ ಎಪಿಎಂಸಿ ರಸ್ತೆ ಬದಿ ಇಂದಿರಾ ಕ್ಯಾಂಟೀನ್‌ ಕಟ್ಟಡವು ಪೂರ್ಣಗೊಂಡು ಹಲವು ತಿಂಗಳು ಕಳೆದರೂ ಉದ್ಘಾಟನೆ ಭಾಗ್ಯದಿಂದ ವಂಚಿತವಾಗಿವೆ.

ಲಕ್ಷಾಂತರ ರೂಪಾಯಿ ಅನುದಾನ ಬಳಿಸಿ ಕಟ್ಟಿರುವ ಈ ಇಂದಿರಾ ಕ್ಯಾಂಟೀನ್‌ ಕಟ್ಟಡದ ಸುತ್ತಮುತ್ತ ಬರ್ಹಿದೆಸೆಯಿಂದ ಬಯಲು ಶೌಚಾಲಯವಾಗುವ ಮೊದಲು ಈ ಕಟ್ಟಡ ಉದ್ಘಾಟಿಸಬೇಕಾಗಿದೆ. ಈ ಇಂದಿರಾ ಕ್ಯಾಂಟೀನ್‌ ಉದ್ಘಾಟನೆಯಾದರೆ ಕಡಿಮೆ ಬೆಲೆಯ ತಿಂಡಿ-ಊಟ ಬಡವರ ಹೊಟ್ಟೆ ತುಂಬಿಸಲಿದೆ. ಉದ್ಘಾಟನೆಗಾಗಿ ಕಾದಿರುವ ಇಂದಿರಾ ಕ್ಯಾಂಟೀನ್‌ ಕಟ್ಟಡದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯಕ ಇತ್ತ ಗಮನ ಹರಿಸಿ ಆದಷ್ಟು ಬೇಗ ಉದ್ಘಾಟಿಸುವ ಕಾರ್ಯಾರಂಭಗೊಳಿಸಬೇಕಿದೆ.

ಈಗಿರುವ ಇಂದಿರಾ ಕ್ಯಾಂಟೀನ್‌ ಕಟ್ಟಡದ ಸುತ್ತಮುತ್ತಲೂ ತಹಶೀಲ್ದಾರ್‌ ಕಾರ್ಯಾಲಯ, ಪೊಲೀಸ್‌ ಠಾಣೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಕಾರ್ಯಾಲಯಗಳು, ಅಲ್ಲದೇ ನೂತನ ಎಪಿಎಂಸಿಯೂ ಇದೆ. ಈ ಕಾರ್ಯಾಲಯಗಳು ಮತ್ತು ಎಪಿಎಂಸಿಗೆ ಪ್ರತಿದಿನ ನೂರಾರು ಜನರು ಆಗಮಿಸುತ್ತಾರೆ. ಪಟ್ಟಣಕ್ಕೆ ಬರುವ ರೈತರು, ಸಾರ್ವಜನಿಕರು ಊಟ ಮಾಡಲು ಇಲ್ಲವೇ ತಿಂಡಿ ತಿನ್ನಲು ನೂರಾರು ರೂಪಾಯಿಗಳು ಖರ್ಚು ಮಾಡಬೇಕಾಗಿದೆ. ಅದೇ ಇಂದಿರಾ ಕ್ಯಾಂಟೀನ್‌ನಲ್ಲಿ ಕಡಿಮೆ ಬೆಲೆಯಲ್ಲಿ ಸಿಗುವ ಊಟ, ತಿಂಡಿ ಮಾಡಬಹುದಾಗಿದೆ.

ಆದ್ದರಿಂದ ಈ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು, ಈ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಲು ಮುಂದಾಗಬೇಕು. ಅಲ್ಲದೇ ಇಂದಿರಾ ಕ್ಯಾಂಟೀನ್‌ ಸುತ್ತಲೂ ಬಯಲು ಬರ್ಹಿದೆಸೆ ಆಗದಂತೆ ನೋಡಿಕೊಳ್ಳಲು ಪುರಸಭೆಯವರು ಕಟ್ಟಡಕ್ಕೆ ಕಾವಲುಗಾರರನ್ನು ನೇಮಿಸಬೇಕು. ಬಡವರು, ರೈತರು, ಹಳ್ಳಿಗಳಿಂದ ಬರುವ ನಾಗರಿಕರಿಗೆ ಶೀಘ್ರ ಇಂದಿರಾ ಕ್ಯಾಂಟೀನ್‌ ಉದ್ಘಾಟನೆಯಾಗಿ ಉಪಾಹಾರ ಮತ್ತು ಊಟ ಸಿಗುವಂತೆ ಆಗಲಿ.

ಇಂದಿರಾ ಕ್ಯಾಂಟೀನ್‌ ಕಟ್ಟಡ ಕಾಮಗಾರಿ ಪೂರ್ಣವಾಗಿ ಕೆಲ ತಿಂಗಳು ಗತಿಸಿವೆ. ಆದರೆ ಇನ್ನೂವರೆಗೂ ಈ ಕಟ್ಟಡದ ಉದ್ಘಾಟನೆಯಾಗಿಲ್ಲ. ಇಂದಿರಾ ಕ್ಯಾಂಟೀನ್‌ ಉದ್ಘಾಟನೆಯಾದರೆ ಪಟ್ಟಣಕ್ಕೆ ಬರುವ ರೈತರು, ಬಡವರಿಗೆ ಅನುಕೂಲವಾಗಲಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆಗೆ ಗಮನ ಹರಿಸಿ ಉದ್ಘಾಟಿಸಬೇಕು.
ನಬಿಸಾಬ ಕೆಲೂರು,
ಸ್ಥಳೀಯ ನಿವಾಸಿ

ಇಂದಿರಾ ಕ್ಯಾಂಟೀನ್‌ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರನ್ನು ಕರೆಯಿಸಿ ಮಾತುಕತೆ ನಡೆಸಿದ್ದೇವೆ. ಕಟ್ಟಡದೊಳಗೆ ಕೆಲ ಕೆಲಸಗಳು ಬಾಕಿ ಇದ್ದು, ಗುತ್ತಿಗೆದಾರರು ಪೂರ್ಣಗೊಳಿಸಿ ಕಟ್ಟಡವನ್ನು ಪುರಸಭೆಯ ಸುಪರ್ದಿಗೆ ಕೊಟ್ಟರೇ ಮಾತ್ರ ಕಟ್ಟಡದ ಸುತ್ತಲಿನ ಸ್ವಚ್ಛತೆ ಮತ್ತು ಉದ್ಘಾಟನೆಗೆ ಅಣಿಗೊಳಿಸಬಹುದು.
ಸತೀಶ್‌ ಚವಡಿ,
ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.