10 ಸಾವಿರ ಶಿಕ್ಷಕರ ನೇಮಕ: ಸಚಿವ


Team Udayavani, Feb 21, 2017, 12:49 PM IST

mys6.jpg

ಹುಣಸೂರು: ಈ ಸಾಲಿನಲ್ಲೇ 10 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ, ಅಲ್ಲದೆ ಬಾಕಿ ಉಳಿದ ಶಿಕ್ಷಕರನ್ನು ಹಂತಹಂತವಾಗಿ ನೇಮಿಸಲಾಗುವುದು, ಇನ್ನು ಮೂರ್‍ನಾಲ್ಕು ವರ್ಷಗಳಲ್ಲಿ ಶಿಕ್ಷಕರ-ಪಿಯು ಉಪನ್ಯಾಸಕರ ಹುದ್ದೆಗಳು ಭರ್ತಿಯಾಗಲಿದೆ ಎಂದು ಶಿಕ್ಷಣ ಸಚಿವ ತನ್ವೀರ್‌ಸೇಠ್ ಭರವಸೆ ಇತ್ತರು.

ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಸರಕಾರದ ಎಸ್‌ಸಿ, ಎಸ್‌ಟಿ ಯೋಜನೆಯ ವಿವಿಧ ಕಾರ್ಯಕ್ರಮಗಳ ಅನುದಾನದಲ್ಲಿ ಕೆಲ ಭಾಗ ಶಾಲಾ ಕಟ್ಟಡ ದುರಸ್ತಿ ಸೇರಿದಂತೆ ಮೂಲಭೂತ ಸೌಲಭ್ಯಕ್ಕೆ ಅವಕಾಶ ಕಲ್ಪಿಸಿದಲ್ಲಿ ಶಾಲೆಗಳು ಅಭಿವೃದ್ಧಿ ಸಾಧ್ಯವಾಗಲಿದೆ. ಇದನ್ನು ಮನಗೊಂಡು ತಾವು ಮಾಡಿರುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳು ಒಪ್ಪಿದ್ದು, ಮುಂಬರುವ ಬಜೆಟ್‌ನಲ್ಲಿ ಅನುಮೋದನೆ ದೊರೆಯಲಿದೆ ಎಂದು ತಿಳಿಸಿದರು.

ಹಿಂದಿನ ಶಿಕ್ಷಣ ಪದ್ಧತಿ ಜಾರಿ: ಮೌಲ್ಯಯುತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರಕಾರ 4-6ನೇ ತರಗತಿವರೆಗೆ ಹಿಂದಿ ನಂತೆ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ 
ಈಗಾಗಲೆ ಸುತ್ತೋಲೆ ಹೊರಡಿಸಲಾಗಿದೆ. ಅಲ್ಲದೆ ಬೋಧನಾ ವಿಧಾನ, ಪಠ್ಯಪುಸ್ತಕ ಬದಲಾವಣೆಯನ್ನೂ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

10 ಸಾವಿರ ಶಿಕ್ಷಕರ ನೇಮಕ: ಪ್ರಾಥಮಿಕ ಶಿಕ್ಷಣ ವಿಭಾಗದಲ್ಲಿ 14,729 ಶಿಕ್ಷಕರ ಕೊರತೆ ಇದ್ದು, ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ನಿವೃತ್ತಿಯಾಗಲಿರುವ ಶಿಕ್ಷರನ್ನು ಸಹ ಗಮನದಲ್ಲಿ ಇಟ್ಟುಕೊಂಡು ಈ ಸಾಲಿನಲ್ಲಿ 10 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರೌಢಶಾಲಾ ವಿಭಾಗದಲ್ಲಿ 3 ಸಾವಿರ ಶಿಕ್ಷಕರ ಕೊರತೆ ಇದ್ದು, 1689 ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಯಲ್ಲಿದೆ. ಇನ್ನು ಪಿಯು ವಿಭಾಗದಲ್ಲಿ ಕೆಲ ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡಿದೆ. ಶೀಘ್ರವೇ 1900 ಉಪನ್ಯಾಸಕರ ನೇಮಕವಾಗಲಿದೆ, ಮುಂದಿನ ಮೂರು ವರ್ಷಗಳಲ್ಲಿ ಶಿಕ್ಷಕರು ಹಾಗೂ ಉಪನ್ಯಾಸಕರ ಕೊರತೆ ನೀಗಲಿದೆ ಎಂದರು.

ಗ್ರೇಸ್‌ ಮಾರ್ಕ್ಸ್ಗೆ ಕಡಿವಾಣ: ವಿದ್ಯಾರ್ಥಿ ಹಾಗೂ ಪೋಷಕರ ಹಿತದೃಷ್ಟಿಯಿಂದ ಶಿಕ್ಷಣ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದರಲ್ಲಿ ಯಾರಿಗೂ ತೊಂದರೆ ಕೊಡುವ ಉದ್ದೇಶವಲ್ಲ. ಕಳೆದ ವರ್ಷದ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕ್ರಮ ಅನಿವಾರ್ಯ ಎಂದು ಹೇಳಿ ಕರ್ತವ್ಯ ನಿಷ್ಠೆ  ಪ್ರದರ್ಶಿಸುವ ಶಿಕ್ಷಕರು ಹೆದರುವ ಅಗತ್ಯವಿಲ್ಲ ಎಂದು ತಿದ್ದುಪಡಿಯನ್ನು ಸಮರ್ಥಿಸಿಕೊಂಡರು.

ಭರವಸೆ: ಹುಣಸೂರು ತಾಲೂಕಿನ ರತ್ನಪುರಿ ಸರಕಾರಿ ಪಿಯು ಕಾಲೇಜಿನ ಇಬ್ಬರು ವಿಜಾnನ ವಿಭಾಗದ ಉಪನ್ಯಾಸಕರನ್ನು ಜೆ.ಡಿ.ಎಸ್‌.ನ ವಿಧಾನಪರಿಷತ್‌ ಸದಸ್ಯರ ಶಿಪಾರಸ್ಸಿನ ಮೇರೆಗೆ ಬೇರೆಡೆಗೆ ನಿಯೋಜಿಸಿರು ಬಗ್ಗೆ “ಉದಯವಾಣಿ’ಯಲ್ಲಿ ಬಂದಿರುವ ವರದಿಯ ಬಗ್ಗೆ ಮಾತನಾಡಿದ ಸಚಿವರು, ನಿಯೋಜನೆ ಮಾಡಿರುವ 
ಪಿಯು ಡಿಡಿ ಅವರನ್ನು ವಿಚಾರಣೆಗೆ ಒಳಪಡಿಸಿ ಅಗತ್ಯಕ್ರಮ ಕೈಗೊಳ್ಳುವುದಾಗಿ ಸಚಿವ ತನ್ವೀರ್‌ಸೇಠ್ ತಿಳಿಸಿದರು.

ಹುಣಸೂರು ತಾಲೂಕಿನ ಚಿಲ್ಕುಂದ, ಹಿರಿಕ್ಯಾತನಹಳ್ಳಿ ಹಾಗೂ ಗುರುಪುರಕ್ಕೆ ಪಿಯು ಕಾಲೇಜು ಮಂಜೂರು ಮಾಡುವಂತೆ ಸಚಿವರನ್ನು ಕೋರಲಾಗಿದೆ ಎಂದು ಶಾಸಕ ಮಂಜುನಾಥ್‌ ತಿಳಿಸಿದರು. ಮಾಜಿ ಜಿಪಂ ಸದಸ್ಯ ಸಿ.ಟಿ.ರಾಜಣ್ಣ ಇದ್ದರು.

ಈ ಹಿಂದೆ ಎಸ್ಸೆಸ್ಸೆಲ್ಸಿ ವರೆಗೆ ನೀಡುತ್ತಿದ್ದ ಗ್ರೇಸ್‌ಮಾರ್ಕ್ಸ್ಗೆ ಈ ಬಾರಿ ಬಹುತೇಕ ಕಡಿವಾಣ ಬೀಳಲಿದೆ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ.
-ತನ್ವೀರ್‌ಸೇಠ್, ಶಿಕ್ಷಣ ಸಚಿವ

ಟಾಪ್ ನ್ಯೂಸ್

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.