ಶಾಲೆ ತೆರೆಯುವಾಗಲೇ 15 ಮಕ್ಕಳಲ್ಲಿ ಸೋಂಕು

ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ನಗರಸಭೆ, ಗ್ರಾಪಂಗಳಿಗೆ ಶಾಸಕ ಮಂಜುನಾಥ್‌ ಸೂಚನೆ

Team Udayavani, Aug 9, 2021, 2:59 PM IST

ಶಾಲೆ ತೆರೆಯುವಾಗಲೇ 15 ಮಕ್ಕಳಲ್ಲಿ ಸೋಂಕು

ಹುಣಸೂರು: ತಾಲೂಕಿನಲ್ಲಿ ಕಳೆದ ಎರಡು ವಾರಗಳ ಅವಧಿಯಲ್ಲಿ 12 ರಿಂದ 17 ವರ್ಷದೊಳಗಿನ 15 ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ ಕಾಣಿಸಿಕೊಂಡಿರುವುದು ಆತಂಕ ತಂದಿದೆ. ಈ ನಡುವೆ, ಆ.23ರಿಂದ ಶಾಲೆಗಳು ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಹೀಗಾಗಿ ನಗರಸಭೆ ಹಾಗೂ ಗ್ರಾಪಂಗಳು ಸ್ವಚ್ಛತೆ ಮತ್ತು ಮುಂಜಾಗ್ರತೆಕ್ರಮವಹಿಸಲು ಸೂಚಿಸಿದ್ದೇನೆ ಎಂದು ಶಾಸಕ ಮಂಜುನಾಥ್‌ ತಿಳಿಸಿದರು.

ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕೋವಿಡ್‌ 3ನೇ ಅಲೆ ನಿಯಂತ್ರಣ ಕುರಿತು ಭಾನುವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿ
ಗೋಷ್ಠಿ ನಡೆಸಿದ ಶಾಸಕರು, ನವೋದಯ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸಲು ತಿಳಿಸಿದ್ದೇನೆ ಎಂದರು.

ಈಗಾಗಲೇ2 ಅಲೆಗಳಿಂದಜನರು ತತ್ತರಿಸಿದ್ದಾರೆ. ಮುಂದಿನ ದಿನಗಳಲ್ಲಿ3ನೇ ಅಲೆ ನಮ್ಮನ್ನು ಕಾಡಲಿದೆ ಎಂದು ಈಗಾಗಲೇ ತಜ್ಞರು ವರದಿ ನೀಡಿದ್ದಾರೆ. ಅ ನಿಟ್ಟಿನಲ್ಲಿ ಅಧಿಕಾರಿಗಳು-ಜನಪ್ರತಿನಿಧಿಗಳು ಮೈ ಮರೆಯದೆ ಜಾಗೃತರಾಗಬೇಕಿದೆ. ಈ ಹಿಂದೆಯೂ ಸಕಲ ವ್ಯವಸ್ಥೆ ಮಾಡಿಕೊಂಡಿದ್ದರಿಂದ ಹೆಚ್ಚಿನ ಸಮಸ್ಯೆ ಗಳು ಎದುರಾಗಿರಲಿಲ್ಲ. ಈ ಬಾರಿಯು ಕೂಡ 500 ಹಾಸಿಗೆಗಳ ಕೋವಿಡ್‌ ಕೇರ್‌ ಸೆಂಟರ್‌, 50 ಬೆಡ್‌ನ‌
ಮಕ್ಕಳ ವಿಶೇಷ ವಾರ್ಡ್‌ ಹಾಗೂ ಆಕ್ಸಿಜನ್‌ಬೆಡ್‌ಗಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕೋವಿಡ್‌ ಸಂಬಂಧಿತ ಮಾತ್ರೆ-ಔಷಧಕ್ಕಾಗಿ ಮೆಡಿಕಲ್ಸ್‌ ಸ್ಟೋರ್‌ ಮಾಲಿಕರಿಗೂ ಸೂಚಿಸಲಾಗಿದೆ. ಅಗತ್ಯವಿರುವೆಡೆ ಚೆಕ್‌ಪೋಸ್ಟ್‌ ಹಾಗೂ ಮಾಸ್ಕ್ ಹಾಕದವರಿಗೆ ದಂಡ ಇನ್ನಿತರ ಕಠಿಣ ಕ್ರಮಗಳನ್ನು ಜಾರಿಗೆ ತಂದು ಜನರ ಸುರಕ್ಷತೆ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಗೌರವ ಸಮರ್ಪಣೆ: ವರ್ಗಾವಣೆಗೊಂಡಿರುವ ತಹಶೀಲ್ದಾರ್‌ ಬಸವರಾಜ್‌ ಸೇರಿದಂತೆ ವಾರಿಯಾರ್ಸ್‌ಗಳಾಗಿ ಕಾರ್ಯನಿರ್ವಹಿಸಿದ್ದ ಡಿವೈಎಸ್ಪಿ
ರವಿಪ್ರಸಾದ್‌, ವೈದ್ಯರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ಗ್ರಾಪಂ ಅಧ್ಯಕ್ಷರು ಹಾಗೂ ಶವ ಸಂಸ್ಕಾರದಲ್ಲಿ ತೊಡಗಿದ ತಂಡವನ್ನು ಆ.15ರಂದು ನಡೆಯುವ ಸರಳ ಕಾರ್ಯ ಕ್ರಮದಲ್ಲಿ ಅಭಿನಂದಿಸಲಾಗುತ್ತದೆ ಎಂದರು.

ಮಾಜಿ ಸೈನಿಕರಿಂದ ಅಖಂಡ ಜ್ಯೋತಿ: ಹಳೇ ಬಸ್‌ ನಿಲ್ದಾಣ ಮುಂಭಾಗ ಸಂವಿಧಾನ ವೃತ್ತ ಉದ್ಘಾಟನೆ ಮತ್ತು ನಂತರ ಶಾಸಕ ಕಚೇರಿಯಲ್ಲಿ ನಮ್ಮ ಸೈನ್ಯ ನಮ್ಮ ಹೆಮ್ಮೆ ಎಂಬ ಅಖಂಡ ಜ್ಯೋತಿ ಸ್ಥಾಪಿಸಿದ್ದು, ಇದನ್ನು ಸೈನ್ಯದಲ್ಲಿ ನಿವೃತ್ತಿಯಾಗಿ ಆಗಮಿಸಿರುವ ಕಟ್ಟೆಮಳಲವಾಡಿಯ ವಿಠಲ ಮೂರ್ತಿ ಹಾಗೂ ಹನಗೋಡಿನ ಅನಿಲ್‌ ಅವರು ಅಖಂಡ ಜ್ಯೋತಿ ಬೆಳಗಿಸುವ ಕಾರ್ಯಕ್ರಮದ ಮೂಲಕ್ಕೆ ದೇಶದ ಸೈನಿಕರನ್ನು ಗೌರವಿಸುವ ಕೆಲಸ ಮಾಡಲಾಗುತ್ತಿದೆ ಎಂದರು. ನಗರಸಭೆ ಅಧ್ಯಕ್ಷೆ ಅನುಷಾ,ತಾಪಂ ಇಒ ಎಚ್‌. ಡಿ.ಗಿರೀಶ್‌, ತಹಶೀಲ್ದಾರ್‌
ಮೋಹನ್‌, ಡಿವೈಎಸ್ಪಿ ರವಿಪ್ರಸಾದ್‌, ಟಿಎಚ್‌ಒ ಡಾ|ಕೀರ್ತಿಕುಮಾರ್‌, ಪೌರಾಯುಕ್ತ ರಮೇಶ್‌, ಎಇಇ ಬೋಜರಾಜ್‌, ಸಿಡಿಪಿಒ ರಶ್ಮಿ ಇತರರಿದ್ದರು.

ವಾರಕ್ಕೆ 10 ಸಾವಿರ ಲಸಿಕೆ ನೀಡಲು ಸಚಿವರಲ್ಲಿ ಕೋರಿಕೆ
ತಾಲೂಕಿನಲ್ಲಿ ಪ್ರತಿನಿತ್ಯ 3 ಸಾವಿರ ಡೋಸ್‌ ಲಸಿಕೆ ನೀಡಿ ಮುಂಜಾಗ್ರತೆ ಕ್ರಮಗಳನ್ನು ಪಾಲಿಸಿದರೆ, ಕೋವಿಡ್‌  ಸೆಡ್ಡು ಹೊಡೆಯಬಹುದು. ವಾರಕ್ಕೆಕನಿಷ್ಠ 10 ಸಾವಿರ ಲಸಿಕೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೇನೆ. ನಾನು ಮಾಡಿದ ಎಲ್ಲ ಪ್ರಯತ್ನದಿಂದ ತಾಲೂಕಿನ ಜನತೆಗೆ ಲಸಿಕೆಕೊಡಿಸುವಲ್ಲಿ ಯಶಸ್ವಿಯಾಗಿ ಜಿಲ್ಲೆಯಲ್ಲಿ ನಾವು ಮುಂದೆ ಇದ್ದೇವೆ ಎಂದು ಶಾಸಕ ಮಂಜುನಾಥ್‌ ತಿಳಿಸಿದರು.

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.