300 ದಿನದಲ್ಲಿ 150 ಶಾಸಕ, 25 ಸಂಸದ ಸ್ಥಾನ ಗುರಿ
Team Udayavani, May 7, 2017, 12:43 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ ರಾಜ್ಯ ಕಾರ್ಯಕಾರಣಿ ನಡೆಸಿದ ಬಿಜೆಪಿ,” ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಅಂತ್ಯ ಹಾಡುವ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡಬೇಕು. ವಿಧಾನಸಭೆ ಚುನಾವಣೆಗೆ ಇನ್ನು ಉಳಿದಿರುವ 300 ದಿನಗಳಲ್ಲಿ 150 ಸ್ಥಾನ ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಪಡೆಯಲು ರಾಜ್ಯ ಪ್ರವಾಸ ಮಾಡಿ ಸಿದ್ದು ಸರ್ಕಾರವನ್ನು ಕಿತ್ತೆಸೆಯೋಣ’ ಎಂಬ ಒಕ್ಕೊರಲ ತೀರ್ಮಾನ ಕೈಗೊಂಡಿದೆ.
ಮೈಸೂರು: ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆಯಾಗಿ ಪರಿಣಮಿಸಿದೆ. ಅಧಿಕಾರಿಗಳದೇ ಒಂದು ರೀತಿಯ ಧೋರಣೆಯಾಗಿದೆ. ಕಾನೂನು ಸುವ್ಯವಸ್ಥೆ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂದರೆ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 6521 ಜನರ ಕೊಲೆಯಾಗಿದೆ. ಸಚಿವ ತನ್ವೀರ್ ಸೇಠ್ ಗ್ರಂಥಾಲಯ ಮೇಲ್ವಿಚಾರಕರುಗಳಿಂದ 3 ಕೋಟಿ ಲಂಚ ಪಡೆದ ಆರೋಪ ಕೇಳಿಬಂದಿದೆ. ಆದರೂ ಮುಖ್ಯಮಂತ್ರಿ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ವಿಧಾನ ಸಭೆಗೆ 150 ಸ್ಥಾನ ಹಾಗೂ ಲೋಕಸಭೆಗೆ ರಾಜ್ಯದಿಂದ 25 ಸ್ಥಾನ ಗೆಲ್ಲಲು ಈಗಿನಿಂದಲೇ ಸಂಘಟನೆಗೆ ಪರಿಶ್ರಮ ಹಾಕಬೇಕಿದೆ ಎಂದರು.
ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಯಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ದುಡಿಯುವ ಕೈಗೆ ಕೆಲಸವಿಲ್ಲದಂತಾಗಿದೆ. ಕಾನೂನು – ಸುವ್ಯವಸ್ಥೆ ಹದಗೆಟ್ಟಿದೆ, ಭ್ರಷ್ಟತೆ ಯಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಅಧ್ಯಯನ ವೊಂದರ ಪ್ರಕಾರ ಪ್ರಥಮ ಸ್ಥಾನ ದೊರೆತಿದೆ. ಆದರೂ ಮುಖ್ಯಮಂತ್ರಿ ದುಬೈ ಪ್ರವಾಸ ಮಾಡುತ್ತಾರೆ ಎಂದು ಟೀಕಿಸಿದರು.
ಕಳೆದ ನಾಲ್ಕು ವರ್ಷಗಳಲ್ಲಿ ಸಿದ್ದರಾಮಯ್ಯ ಸರ್ಕಾರ 90 ಸಾವಿರ ಕೋಟಿ ಸಾಲ ಮಾಡಿದೆ. ನೀರಾವರಿಗೆ ವಾರ್ಷಿಕ ಹತ್ತು ಸಾವಿರ ಕೋಟಿ ಖರ್ಚು ಮಾಡುತ್ತೇವೆಂದವರು ಈವರೆಗೆ ಮಾಡಿರುವುದು 3800 ಕೋಟಿ ಮಾತ್ರ. ಪ್ರತಿಯೊಂದಕ್ಕೂ ಕೇಂದ್ರದತ್ತ ಬೊಟ್ಟು ಮಾಡುವ ಈ ಸರ್ಕಾರಕ್ಕೆ ಕೊಟ್ಟ ಹಣವನ್ನು ಖರ್ಚು ಮಾಡುವ ಯೋಗ್ಯತೆ ಇಲ್ಲ.
ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ 1.15 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದರೆ, ರಾಜ್ಯಸರ್ಕಾರ ಕೇವಲ 10.408 ಮನೆಗಳನ್ನು ಮಾತ್ರ ಕಟ್ಟಿಕೊಟ್ಟಿದೆ ಎಂದು ದೂರಿದರು. ಸುಳ್ಳು ಭರವಸೆಗಳನ್ನು ನೀಡಿ ಜನತೆಗೆ ದ್ರೋಹ ಬಗೆಯುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಹಗರಣಗಳ ಸರಮಾಲೆಯೇ ಸುತ್ತಿಕೊಂಡಿದೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.