ಮೈಸೂರು ,ಶಿವಮೊಗ್ಗದಲ್ಲಿ 2 ಪ್ರತ್ಯೇಕ ಭೀಕರ ರಸ್ತೆ ಅಪಘಾತ ;7 ಸಾವು
Team Udayavani, Aug 5, 2017, 3:19 PM IST
ಮೈಸೂರು /ಶಿವಮೊಗ್ಗ: 2 ಪ್ರತ್ಯೇಕ ಭೀಕರ ರಸ್ತೆ ಅವಘಡದಲ್ಲಿ 7 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ಸಂಭವಿಸಿದೆ.
ಮೈಸೂರಿನಲ್ಲಿ ಟಾಟಾ ಏಸ್ ಲಾರಿಗೆ ಡಿಕ್ಕಿ; 3 ಸಾವು
ಟಿ ನರಸೀಪುರ ರಸ್ತೆಯ ಕೆಂಪಯ್ಯನ ಹುಂಡಿ ಬಳಿ ಟಾಟಾ ಏಸ್ ಲಾರಿಗೆ ಡಿಕ್ಕಿ ಯಾಗಿ ಏಸ್‌ನಲ್ಲಿದ್ದ ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ದುರ್ದೈವಿಗಳು ಟಿ.ನರಸೀಪುರದ ರಘು(25), ಮಹದೇವಮ್ಮ (45),ಬಸಮ್ಮ(36) ಎಂದು ತಿಳಿದು ಬಂದಿದ್ದು , ಸಂತೆಗೆ ತೆರಳುತ್ತಿದ್ದರು ಎನ್ನಲಾಗಿದೆ. ನಾಲ್ವರು ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರ ಬಸ್‌ಗೆ ಆಟೋ ಡಿಕ್ಕಿ ; ನಾಲ್ವರ ಸಾವು
ಸಾಗರದ ಆಚಾರಪುರ ಬಳಿ ಬಸ್‌ಗೆ ಆಟೋ ರಿಕ್ಷಾ ಡಿಕ್ಕಿಯಾದ ಪರಿಣಾಮ ರಿಕ್ಷಾದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾಗರ ತಾಲೂಕು ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.